Hg

ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಆರ್ ಅಶೋಕ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka )ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ನಡೆಸಿದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಮಾಡಿದೆ. ಜೊತೆಗೆ ಅಧಿವೇಶನದಲ್ಲಿ ಚರ್ಚಿಸಲಾಗಿದೆ.

ಈ ಹಗರಣದಲ್ಲಿ ತಪ್ಪಿಲ್ಲ ಎಂದಾದರೆ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ಯಾಕೆ ಮರಳಿಸಬೇಕಿತ್ತು? ಲೋಕಾಯುಕ್ತ, ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲಿದೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ, ಸ್ವಯಂಚಾಲಿತವಾಗಿ ಭೂ ಪರಿವರ್ತನೆಯಾಗಿದೆ.

ಲೇಔಟ್ ಮಾಡಿರುವುದೇ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ. ಅವರು ಅಷ್ಟು ಪ್ರಾಮಾಣಿಕರು ಹಾಗೂ ಸಭ್ಯಸ್ತರು. ಇದರಲ್ಲಿ ಅಧಿಕಾರಿಗಳದ್ದೇ ತಪ್ಪು ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಲಿದೆ.

ಈ ಪ್ರಕರಣ ದಾಖಲಾಗುವ ಮುನ್ನವೇ ಲೋಕಾಯುಕ್ತದಲ್ಲಿ ಆಯಕಟ್ಟಿನ ಜಾಗಕ್ಕೆ ನಿರ್ದಿಷ್ಟ ಅಧಿಕಾರಿಗಳು ಬಂದು ಕೂತಿದ್ದಾರೆ. ಇದು ಪೂರ್ವ ನಿಯೋಜಿತವಾಗಿ ತಯಾರಿಸಿದ ವರದಿ ಎಂದು ದೂರಿದರು.

ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಾಕ್ಷಣ ಅದನ್ನು ಕೋರ್ಟ್ ಸ್ವೀಕರಿಸಬೇಕೆಂದೇನಿಲ್ಲ. ಕೋರ್ಟ್ ಅದನ್ನು ತಿರಸ್ಕರಿಸಿದರೆ ಮತ್ತೆ ತನಿಖೆ ನಡೆಯಲಿದೆ. ನಮಗೆ ನ್ಯಾಯಾಂಗದ ಬಗ್ಗೆ ವಿಶ್ವಾಸವಿದೆ. ನಮಗಿಂತ ಹೆಚ್ಚಾಗಿ ಸಿಎಂ ಕನಸು ಕಟ್ಟಿಕೊಂಡಿರುವ ಕಾಂಗ್ರೆಸ್ ನಾಯಕರಿಗೆ ನಿದ್ರೆ ಹಾರಿಹೋಗಲಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಬಳಿ ಗ್ಯಾರಂಟಿಗೆ ಹಣವಿಲ್ಲ ಎಂದಮೇಲೆ ಮತ್ತೆ ಅಭಿವೃದ್ಧಿಗೆ ಎಲ್ಲಿಂದ ಹಣ‌ ಬರಲಿದೆ? ಈ ಬಗ್ಗೆ ಕಾಂಗ್ರೆಸ್ ಶಾಸಕರು ಪ್ರಶ್ನೆ ಮಾಡಿದರೆ ಅವರನ್ನು ಯಾವುದಾದರೂ ಸಮಿತಿ, ನಿಗಮಕ್ಕೆ ಅಧ್ಯಕ್ಷರನ್ನಾಗಿ ಮಾಡಿ ಸುಮ್ಮನಾಗಿಸಲಾಗುತ್ತದೆ. ಇದೇ ಸಿಎಂ ಸಿದ್ದರಾಮಯ್ಯನವರ ಬಳಿ ಇರುವ ಅಸ್ತ್ರ ಎಂದರು.

ಸಿಎಂ ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿ ಎಂದು ನೂರಾರು ಬಾರಿ ಹೇಳಿದ್ದಾರೆ. ಅದೇ ರೀತಿ ಜಾತಿ ವರದಿ ಬಿಡುಗಡೆ ಬಗ್ಗೆಯೂ ಹೇಳಿದ್ದಾರೆ. ವೀರಪ್ಪ ಮೊಯ್ಲಿ ಸುಳ್ಳಿನ ಸರದಾರರಾದರೆ, ಸಿಎಂ ಸಿದ್ದರಾಮಯ್ಯ ಅವರ ತಾತನಂತೆ ಸುಳ್ಳು ಹೇಳುತ್ತಾರೆ ಎಂದರು.

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಎರಡು ತಿಂಗಳಿಗೊಮ್ಮೆ ಸಂಬಳ ನೀಡಲಾಗುತ್ತಿದೆ. ಸ್ಕಾಲರ್ ಶಿಪ್ ಸಿಕ್ಕಿಲ್ಲವೆಂದು ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದಾರೆ.

ಪ್ರತಿ ತಿಂಗಳು ಗ್ಯಾರಂಟಿ ಹಣ ಕೊಡಲು ಕೂಡ ಹಣವಿಲ್ಲ. ಬಜೆಟ್ ಗೂ ಹಣ ಇರುವುದಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ ಮಾಡಿಲ್ಲ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ಸಿದ್ಧವಾಗಿದ್ದರೂ ಪಡೆಯಲು ಸರ್ಕಾರ ತಯಾರಿಲ್ಲ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಹೆಚ್ಚು ಸಾಕ್ಷಿ ಬೇಡ ಎಂದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!