There is no power supply shortage in Nelamangala constituency: KJ George

ಮುಂದಿನ 30 ವರ್ಷದವರೆಗೂ ನೆಲಮಂಗಲ ಕ್ಷೇತ್ರಕ್ಕೆ ವಿದ್ಯುತ್ ಪೂರೈಕೆ ಕೊರತೆ ಇಲ್ಲ: ಕೆಜೆ ಜಾರ್ಜ್

ಬೆಂ.ಗ್ರಾ.ಜಿಲ್ಲೆ: ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವರಾದ ಕೆಜೆ ಜಾರ್ಜ್ (KJ George) ಅವರು ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು.

ನೆಲಮಂಗಲ ತಾಲ್ಲೂಕಿ ಜನತೆಯ ಬಹುದಿನಗಳ ಬೇಡಿಕೆಯು ಇದಾಗಿದ್ದು ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ ಇಂದು ನಾವು 220ಕೆವಿ ವಿದ್ಯುತ್ ಸ್ಥಾವರವನು ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಿದ್ದೇವೆ. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ.

ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ.

ಕೃಷಿ ಪಂಪ್ ಸೆಟ್‌ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್‌ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ.

ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ, ಆದರೆ ಕೇಂದ್ರ ಸರ್ಕಾರವು ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ವೆಚ್ಚದ ಶೇಕಡಾ 20 ರಷ್ಟು ಮಾತ್ರ ಪಾವತಿಸಬೇಕಾಗುತ್ತದೆ.

ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ” ಎಂದು ಹೇಳಿದರು.

ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.

ನೆಲಮಂಗಲ ಶಾಸಕ ಶ್ರೀನಿವಾಸ ಅವರು ಮಾತನಾಡಿ ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು.

ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳು ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಎಸ್.ರವಿ ಅವರು ಮಾತನಾಡಿ, ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದ್ದು, ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ. ಜೊತೆಗೆ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್‌ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಹೆಚ್ಚು ಅನೂಕುಲವಾಯಿತು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ನೆಲಮಂಗಲ ನಗರ ಸಭೆ ಅಧ್ಯಕ್ಷರಾದ ಎನ್. ಗಣೇಶ್, ಉಪಾಧ್ಯಕ್ಷರಾದ ಜಿ. ಆನಂದ್.

ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ನಾರಾಯಣ ಗೌಡ, ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ನಾಗರತ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!