The government has submerged Bengaluru: Basavaraja Bommai

ಹೆಣ್ಣು ಮಕ್ಕಳಿಗೆ ಗೌರವ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಬಸವರಾಜ ಬೊಮ್ಮಾಯಿ

ಗದಗ: ಒಂದೆಡೆ ಗ್ಯಾರಂಟಿ ಯೋಜನೆಯಿಂದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸುವ ಬಿಜೆಪಿ ನಾಯಕರು, ಈಗ ಗ್ಯಾರಂಟಿ ಹಾಣ ಹಾಕಿ ಎಂದು ಒತ್ತಡ ಹೇರಲಾರಂಭಿಸಿದ್ದಾರೆ. ಅಂತೆಯೇ ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (basavaraj bommai) ಆರೋಪಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ.

ಗೃಹ ಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹ ಲಕ್ಷ್ಮೀ ಯೋಜನೆ ಹಣ ಸಂಬಳವೆ ಅಂತಾ ಕೇಳುತ್ತಾರೆ. ಅದು ಗೌರವ ಧನ. ಪ್ರತಿ ತಿಂಗಳು ಕೊಟ್ಟಿಲ್ಲ ಅಂದರೆ ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ದೂರಿದರು.
ರಾಜ್ಯದಲ್ಲಿ ಹಣ ಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ.

ಮುಖ್ಯಮಂತ್ರಿಗಳು ಭಂಡತನದಿಂದ ಒಪ್ಪಿಕೊಳ್ಳುತ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೆ ಅಲ್ಲ‌, ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದು ಇಲ್ಲ.

ಕುಡಿಯುವ ನೀರಿನ ಯೋಜನೆಗೆ ಹಣ ಕೊಡದೇ ಕುಂಠಿತವಾಗಿದೆ. ರಾಜ್ಯ ಸರ್ಕಾರ ಜನರನ್ನ ಸಂಕಷ್ಟಕ್ಕೆ ದೂಡುತ್ತಿದೆ.

ಜನ ಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ತೆರಿಗೆ ಪಡೆದು ಅದನ್ನೇ ಗ್ಯಾರಂಟಿ‌ ರೂಪದಲ್ಲಿ ಮರಳಿ ಕೊಡುಲು ಮುಂದಾಗಿದೆ. ಆದರೆ, ಅದರಲ್ಲೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ಇವರಿಗೆ ಅಭಿವೃದ್ಧಿ ಮಾಡಲು ಮನಸ್ಸಿಲ್ಲ ಹೀಗಾಗಿ ಕಾಂಗ್ರೆಸ್ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಉದಯಗಿರಿ ಗಲಾಟೆ, ಆತಂಕರಿಗೆ ಗಲಭೆ ಸೃಷ್ಠಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಹಿಜಾಬ್ ವಿಷಯವಾಗಿ ಹೈಕೋರ್ಟ್ ಆದೇಶಕೊಟ್ಟಿದೆ.. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ. 1980 ರ ಶಿಕ್ಷಣ ನೀತಿಯ ಪ್ರಕಾರ ಸಮವಸ್ತ್ರ ಒಪ್ಪಿಕೊಳ್ಳಲಾಗಿದೆ.

ಹಿಜಾಬ್, ಮತ್ತೊಂದು ತರುವ ಯೋಚನೆ ಮಾಡಲಾಗ್ತಿದೆ. ಕೆಲವು ಸಂಘಟನೆಗಳು ಹಿಜಾಬ್ ತರಲು ಮುಂದಾಗಿದ್ದು ಸರ್ಕಾರದ ಕುಮ್ಮಕ್ಕು ನೀಡ್ತಿದೆ ಎಂದು ಆರೋಪಿಸಿದರು.

ವಿಶ್ವ ವಿದ್ಯಾಲಯ ಉಳಿಸಿ ಹೋರಾಟ ತೀವ್ರಗೊಂಡಿದೆ. ಹಳೆಯವಿಶ್ವವಿದ್ಯಾಲಯ ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡುತ್ತಾರೆ. ಆದರೆ ಅಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಸಂಶೋಧನೆ ಆಗುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ. ಅವು ಭ್ರಷ್ಟಾಚಾರದ ಕೂಪಗಳಾಗಿವೆ. ಅದನ್ನ ಸರಿ ಪಡೆಸುವುದನ್ನು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ.

ಅತೀ ಕಡಿಮೆ ವೆಚ್ಚದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ವಿಶೇಷವಾಗಿ ಎಸ್ ಸಿ ಎಸ್ ಟಿ, ಒಬಿಸಿ ಹೆಣ್ಣುಮಕ್ಕಳು ದೊಡ್ಡಮಟ್ಟದಲ್ಲಿ ವಿವಿಯಲ್ಲಿ‌ ನೋಂದಾಯಿತರು.

ಇವರ ಭವಿಷ್ಯಕ್ಕೆ ದೊಡ್ಡಮಟ್ಟದ ಕೊಡಲಿ ಪೆಟ್ಟನ್ನ ಕೊಟ್ಟಿದ್ದಾರೆ. ಹೊಸ ವಿಶ್ವವಿದ್ಯಾಲಯ ಮುಚ್ಚಲು ಬಿಡುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದರು

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!