Doddaballapura: ಕೊಂಗಾಡಿಯಪ್ಪ ಪುತ್ಥಳಿ ಸ್ಥಾಪನೆಗೆ ಮೀನಾಮೇಷ.. ಪ್ರತಿಭಟನೆಯ ವಾರ್ನಿಂಗ್

Doddaballapura: Pisces for early establishment of Kongadiyappa Putthali.. Warning of protest

ದೊಡ್ಡಬಳ್ಳಾಪುರ (Doddaballapura): ದೊಡ್ಡಬಳ್ಳಾಪುರದ ಅಭಿವೃದ್ದಿಗೆ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪನವರ ಕೊಡುಗೆ ಅಪಾರವಾಗಿದ್ದು, ಅವರ ನಿಸ್ವಾರ್ಥ ಸೇವೆ, ಶ್ರಮದಿಂದಾಗಿ ಇಂದು ದೊಡ್ಡಬಳ್ಳಾಪುರ ರಾಜ್ಯದಲ್ಲಿಯೇ ಹೆಸರುವಾಸಿಯಾಗಲು ಕಾರಣವಾಗಿದೆ. ಇಂತಹ ಮಹನೀಯರ ಪುತ್ಥಳಿಯನ್ನು ನಗರಸಭೆ ಕಾರ್ಯಾಲಯದ ಮುಂಭಾಗ ಸ್ಥಾಪಿಸಲು ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ದೇವಾಂಗ ಮಂಡಲಿ ಮುಖಂಡರು ಎಚ್ಚರಿಕೆ ನೀಡಿದರು.

ಲೋಕಸೇವಾನಿರತ ಡಿ.ಕೊಂಗಾಡಿಯಪ್ಪನವರ 165ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮುಖ್ಯರಸ್ತೆಯ ಮಾರುಕಟ್ಟೆ ಶಾಲೆಯ ಮುಂಭಾಗದಲ್ಲಿನ ಕೊಂಗಾಡಿಯಪ್ಪನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ನೇಕಾರಿಕೆಯಲ್ಲಿ ಪ್ರಸಿದ್ದವಾಗಿರುವ ದೊಡ್ಡಬಳ್ಳಾಪುರಕ್ಕೆ ಹೆಸರು ಬರಲು ಕೊಂಗಾಡಿಯಪ್ಪನವರ ಪರಿಶ್ರಮ ಕಾರಣವಾಗಿದೆ. ಇಂತಹ ಮಹನೀಯರ ನಿಂತಿರುವ ಭಂಗಿಯ ಪುತ್ಥಳಿಯನ್ನು ಸ್ಥಾಪಿಸಲು ಹಲವಾರು ಒತ್ತಾಯಗಳನ್ನು ಮಾಡಲಾಗಿದೆ. ಆದರೆ ಫಲಪ್ರದವಾಗಿಲ್ಲದಿರುವುದು ಬೇಸರದ ಸಂಗತಿಯಾಗಿದೆ.

ಕೊಂಗಾಡಿಯಪ್ಪನವರ ಪರಿಶ್ರಮದಿಂದಾಗಿ ನಮ್ಮ ಊರಿನಲ್ಲಿ ಅಂದಿನ ಕಾಲದಲ್ಲಿಯೇ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಕೇಂದ್ರಗಳು ಸ್ಥಾಪನೆಯಾಗಿದ್ದವು. ಅಧಿಕಾರಿಗಳ ಬಳಿಗೆ ತೆರಳಿ ಊರಿಗೆ ಆಗಬೇಕಾದ ಕೆಲಸಗಳನ್ನು ನಿವೇದನೆ ಮಾಡಿ ಆಗುವವರೆಗೂ ಬೆಂಬಿಡದೇ ಮಾಡಿಸುತ್ತಿದ್ದರು.

ಕೊಂಗಾಡಿಯಪ್ಪನವರು ಊರಿನ ಯಾವ ಸಮಸ್ಯೆಯನ್ನಾಗಲೀ ಬಗೆಹರಿಸಲು ದುಡಿಯುತ್ತಿದ್ದರು. ಶಿಕ್ಷಣ, ಪರಿಸರ, ಸಮಾಜ ಸೇವೆಗಳಿಗೆ ಒತ್ತು ನೀಡಿದ್ದ ಅವರ ಬದುಕು ಹಾಗೂ ಜೀವನ ಕ್ರಮ ಇಂದಿನ ಪೀಳಿಗೆಗೆ ತಿಳಿಯಬೇಕು ಎಂದರು.

ಈ ಸಂದರ್ಭದಲ್ಲಿ ದೇವಾಂಗ ಮಂಡಲಿ ಅಧ್ಯಕ್ಷ ಎಂ.ಜಿ.ಶ್ರೀನಿವಾಸ್, ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಉಪಾಧ್ಯಕ್ಷರಾದ ಬಿ.ಜಿ.ಅಮರನಾಥ್, ಪಿ.ಗೋಪಾಲ್, ಸಹ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಎಚ್.ವಿ.ಅಖಿಲೇಶ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ನಗರಸಭೆ ಸದಸ್ಯರು, ದೇವಾಂಗ ಮಂಡಲಿ ನಿರ್ದೇಶಕರು ಭಾಗವಹಿಸಿದ್ದರು.

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]