The foundation for comprehensive development of Doddaballapur from Kongadiyappa

ಕೊಂಗಾಡಿಯಪ್ಪರಿಂದ ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ಧಿಗೆ ಬುನಾದಿ

ದೊಡ್ಡಬಳ್ಳಾಪುರ (Doddaballapura); ನಗರದ ಸಮಗ್ರ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದವರು ಲೋಕಸೇವಾನಿರತ  ಡಿ.ಕೊಂಗಾಡಿಯಪ್ಪನವರು ಎಂದು‌ ಬೆಂಗಳೂರು ಗ್ರಾಮಾಂತರ ಜಿಲ್ಲಾ ‌ಕನ್ನಡ ಸಾಹಿತ್ಯ ‌ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ‌ವತಿಯಿಂದ ಡಾ.ರಾಜ್ ಕುಮಾರ್ ‌ಕಲಾಮಂದಿರದಲ್ಲಿ ನಡೆದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರ 164 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೊಡ್ಡಬಳ್ಳಾಪುರ ಅಭಿವೃದ್ಧಿಯನ್ನು ಪ್ರಧಾನವಾಗಿ ಚಿಂತಿಸುತ್ತಿದ್ದ, ಮೈಸೂರು ಮಹಾರಾಜರಿಂದ ಅಭಿವೃದ್ಧಿ ಕಾರ್ಯಗಳನ್ನು ಸಕಾರಗೊಳಿಸಿಕೊಳ್ಳುತ್ತಿದ್ದ‌ ಕೊಂಗಾಡಿಯಪ್ಪ ಅವರು ಸ್ವಾತಂತ್ರ್ಯ ಚಳುವಳಿಯಿಂದ ದೂರ ಉಳಿದ್ದರು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದ ಕೊಂಗಾಡಿಯಪ್ಪ ಅವರು    ಮೈಸೂರು ಮಹಾರಾಜರಿಂದ ದೊಡ್ಡಬಳ್ಳಾಪುರಕ್ಕೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿದರು.

ವಿದ್ಯುತ್,  ಆಸ್ಪತ್ರೆ, ಸರ್ಕಾರಿ ಶಾಲೆ, ಕುಡಿಯುವ ನೀರು, ಕೈಗಾರಿಕಾ ತರಬೇತಿ ಕೇಂದ್ರ  ಮುಂತಾದವರುಗಳನ್ನು ಮೈಸೂರು ಮಹಾರಾಜರಿಂದ ಮಂಜೂರು ಮಾಡಿಸಿದರು.

ಸೇವಾಮನೋಭಾವದಿಂದ ಜನಮನ್ನಣೆಯೊಂದಿಗೆ ಮೈಸೂರು ಮಹಾರಾಜರಿಂದ ಲೋಕಸೇವಾ ನಿರತ ಎಂಬ ಬಿರುದಿಗೆ ಪುರಸ್ಕೃತರಾದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ಮಾತನಾಡಿ,  ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಅರಿತಿದ್ದ ಮತ್ತು   ಶಿಕ್ಷಕರೂ ಆಗಿದ್ದ ಕೊಂಗಾಡಿಯಪ್ಪ ಅವರು ಎಲ್ಲಾ ವರ್ಗದ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು.

ಅವರ ಮನೆ ವಿದ್ಯಾರ್ಥಿನಿಲಯದಂತೆ. ಬಡ ವಿದ್ಯಾರ್ಥಿಗಳು ಅವರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ವಯಸ್ಕರ ಶಿಕ್ಷಣ ಶಾಲೆಯನ್ನು ಸಹ ನಡೆಸುತ್ತಿದ್ದರು. ಬೇರೆ ಊರಿನ ವಿದ್ಯಾರ್ಥಿಗಳು ಸಹ ಈ ಸಹಾಯ ಪಡೆಯುತ್ತಿದ್ದರು.

ಕೊಂಗಾಡಿಯಪ್ಪನವರು ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ ರಸ್ತೆಯ ಬದಿಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿದ್ದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಕೊಂಗಾಡಿಯಪ್ಪ ಅವರು ದೊಡ್ಡಬಳ್ಳಾಪುರದಲ್ಲಿ ಮೈಸೂರು ಸಂಸ್ಥಾನಕ್ಕೆ ಮಾದರಿಯಾದ ಸ್ಕೌಟ್ ಗ್ರೂಪ್ ಸ್ಥಾಪಿಸಿದ್ದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಕೊಂಗಾಡಿಯಪ್ಪನವರು  ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ಕಲ್ಪಿಸಿದ್ದರು.

ಕೊಂಗಾಡಿಯಪ್ಪನವರ ಈ ಜನೋಪಯೋಗಿ ಮತ್ತು ಸೇವಾ ಕಾರ್ಯಗಳನ್ನು ಪರಿಗಣಿಸಿದ ಮೈಸೂರು ಮಹಾರಾಜರು 1918ರಲ್ಲಿ ಸಾರ್ವಜನಿಕ  ಸೇವಾ ಪದಕ ಮತ್ತು 1931 ರಲ್ಲಿ  ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಲೋಕಸೇವಾನಿರತ ಎಂಬ  ಬಿರುದು ನೀಡಿ ಗೌರವಿಸಿದರು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಕನ್ನಡ ಜಾಗೃತ ವೇದಿಕೆ ಜಿಲ್ಲಾ ಅಧ್ಯಕ್ಷ ನಾಗರಾಜು, ತಾಲ್ಲೂಕು ಅಧ್ಯಕ್ಷ ಶಶಿಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು.

ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ಪ್ರತಿನಿಧಿಗಳಾದ ಷಪೀರ್, ಕೋದಂಡರಾಮ್, ಕಲಾವಿದ   ದರ್ಗಾಜೋಗಿಹಳ್ಳಿ ಮಲ್ಲೇಶ್ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!