ಬೆಂಗಳೂರು: ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025ರ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯ (Ind v/s Pak) ಈಗಾಗಲೇ ಆರಂಭವಾಗಿದೆ.
ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಗೆಲುವಿಗಾಗಿ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ವಿಶೇಷ ಪೂಜೆ ಮತ್ತು ಆರತಿ ನಡೆಸಲಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಟಾಸ್ ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು , 34 ಓವರ್ಗಳಿಗೆ ಮೂರು ವಿಕೆಟ್ ಕಳೆದುಕೊಂಡು 154 ರನ್ ಪಡೆದಿದೆ.
ಈ ನಡುವೆ ಅನಾರೋಗ್ಯದ ಕಾರಣ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದಿನ ಭಾರತ-ಪಾಕಿಸ್ತಾನ ನಡುವಿನ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ.