ದೊಡ್ಡಬಳ್ಳಾಪುರ (Doddaballapura): ಸ್ನೇಹಿತನ ಮದುವೆಗೆ ತೆರಳಿದ್ದ ಗೆಳೆಯರು ಹಿಂತಿರಿಗಿ ಬರುವ ವೇಳೆ ಕಾರು ಅಪಘಾತಕ್ಕೀಡಾಗಿ ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ ಕತ್ತಿಹೊಸಹಳ್ಳಿ ಬ್ರಿಡ್ಜ್ ಬಳಿ ಸಂಭವಿಸಿದೆ.
ಘಟನೆಯಲ್ಲಿ 20 ವರ್ಷದ ಮಹಮದ್ ಯೂನಿಸ್ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಜಯಪುರದ ಐದು ಮಂದಿ ಗೆಳೆಯರು ಧಾರವಾಡ ಜಿಲ್ಲೆಯ ನವಲಗುಂದದಲ್ಲಿನ ಗೆಳೆಯ ಸಮರ್ಥ್ ಎನ್ನುವವರ ಮದುವೆಗೆ ತೆರಳಿದ್ದು, ಇಂದು ಮರಳಿ ಬರುವ ವೇಳೆ ಕತ್ತಿಹೊಸಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮಹಮದ್ ಯೂನಿಸ್ ಎನ್ನುವವರು ತೀವ್ರವಾಗಿ ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎನ್ನಲಾಗುತ್ತಿದೆ.
ಉಳಿದಂತೆ ಕಾರಿನಲ್ಲಿದ್ದ ಕಿಶೋರ್ ಮತ್ತು ಯತೀಶ್ ಎನ್ನುವವರಿಗೆ ಗಾಯಗಳಾಗಿದ್ದರೆ, ಚೇತನ್ ಮತ್ತು ವಿಶಾಲ್ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.