
ಪೋರ್ ಬಂದರ್: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbhamela) ತೆರಳುವ ವೇಳೆ ಅಪಘಾತದಕ್ಕೀಡಾಗಿ (Accident) ಕರ್ನಾಟಕದವರು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮತ್ತಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿನ್ನೆಯಷ್ಟೇ 6 ಮಂದಿ ಸಾವನಪ್ಪಿರುವ ಬೆನ್ನಲ್ಲೆ, ಇಂದು ಗುಜರಾತ್ ನ ಪೋರ್ ಬಂದರ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ರಾಜ್ಯದ ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.
ವಿಶ್ವನಾಥ ಅವಜಿ (55 ವರ್ಷ) ಹಾಗೂ ಮಲ್ಲಿಕಾರ್ಜುನ ಸದ್ದಲಗೆ (40 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತಪಟ್ಟವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನವರು ಎನ್ನಲಾಗಿದೆ.
ನಿಂತಿದ್ದ ಟಿಪ್ಪರ್ ಗೆ ವಾಹನವೊಂದು ವೇಗವಾಗಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆಯಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 6 ಜನರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						