Today Mahashivaratri.. Temples ready for celebration

ಇಂದು ಮಹಾಶಿವರಾತ್ರಿ.. ಅಚರಣೆಗೆ ಸಿದ್ದವಾಗಿರುವ ದೇವಾಲಯಗಳು

ದೊಡ್ಡಬಳ್ಳಾಪುರ: ಇಂದು ನಡೆಯಲಿರುವ ಮಹಾಶಿವರಾತ್ರಿ (Mahashivaratri) ಆಚರಣೆಗೆ ತಾಲೂಕಿನಲ್ಲಿ ಸಿದ್ದತೆಗಳು ನಡೆದಿವೆ.

ತಾಲೂಕಿನ ಹಲವಾರು ಶಿವನ ದೇವಾಲಯಗಳು ತನ್ನದೇ ಆದ ಐತಿಹಾಸಿಕ ಹಾಗು ಧಾರ್ಮಿಕ ಮಹತ್ವ ಹೊಂದಿದ್ದು, ಶಿವರಾತ್ರಿ ಹಬ್ಬಕ್ಕೆ ದೇವಾಲಯಗಳಲ್ಲಿ ವಿಶೇಷ ಸಿದ್ದತೆಗಳು ನಡೆದಿವೆ.

ನಗರದ ಬಸವ ಭವನ ಸಮೀಪದ ಸೋಮೇಶ್ವರ (ಸ್ವಯಂಭುಕೇಶ್ವರರ) ದೇವಸ್ಥಾನದಿಂದ ಪ್ರಯಾಣ ಪ್ರಾರಂಭಿಸಿದರೆ ರಾಜಘಟ್ಟ ಈಶ್ವರ ದೇವಸ್ಥಾನ, ಗಂಡರಾಜಪುರದ ಉಮಾಮಹೇಶ್ವರ, ನಂದಿಬೆಟ್ಟದ ತಪ್ಪಲಿನ ಕಣಿವೆ ಬಸವಣ್ಣ, ತೂಬಗೆರೆ ಸಮೀಪದ ಕಾಶಿ ವಿಶ್ವೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ಸೇರಿದಂತೆ ತಾಲೂಕಿನ ವಿವಿಧ ಶಿವ ದೇವಾಲಯಗಳನ್ನು ಸ್ಮರಿಸಬಹುದಾಗಿದೆ.

ಶಿವರಾತ್ರಿ ಹಬ್ಬದ ಜಾಗರಣೆ ಅಂಗವಾಗಿ ಭಜನೆ, ಸಂಗೀತ ಕಛೇರಿ, ಪೌರಾಣಿಕ ನಾಟಕ, ಹಾಸ್ಯೋತ್ಸವ ಕಾರ್‍ಯಕ್ರಮಗಳು ವಿವಿದೆಡೆಗಳಲ್ಲಿ ಆಯೋಜನೆ ಮಾಡಲಾಗಿದೆ.

ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಂಪುರ ಸಮೀಪದ ತೋಪನಯ್ಯಸ್ವಾಮಿ (ಶಿವ) ದೇವಸ್ಥಾನದ ಬಳಿ ಬಿಲ್ವಪತ್ರೆಯ ವನವಿದೆ. ಶಿವರಾತ್ರಿಯಂದು ಇಲ್ಲಿ ಪ್ರತಿ ವರ್ಷ ವಿಶೇಷ ಪೂಜಾ ಕಾರ್‍ಯಗಳು ನಡೆಯುತ್ತದೆ.

ಹುಲುಕುಡಿ ಬೆಟ್ಟದ ಮೇಲೆ ಚೋಳರ ಕಾಲದಲ್ಲಿ ಸ್ಥಾಪನೆಯಾಗಿದ್ದು ಎನ್ನಲಾಗುವ ವೀರಭದ್ರಸ್ವಾಮಿ ದೇವಾಲಯವಿದೆ.

ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಗುಹೆಯಲ್ಲಿ ಮುಕ್ಕಣ್ಣೇಶ್ವರಸ್ವಾಮಿಯ ಶಿವಲಿಂಗ ಮೂರ್ತಿ ಇದೆ. ಕಾರ್ತಿಕ ಮಾಸ ಹಾಗೂ ಶಿವರಾತ್ರಿ ಹಬ್ಬದಂದು ಮಾಕಳಿ ಬೆಟ್ಟಕ್ಕೆ ಹತ್ತಿ ಕಾಡು ಮಲ್ಲೇಶ್ವರಸ್ವಾಮಿ ರ‍್ಶನ ಪಡೆಯುವುದರೆಂದರೆ ಕೈಲಾಸ ರ‍್ವತ ಹತ್ತಿದಷ್ಟೇ ಪುಣ್ಯ ಎನ್ನುವುದು ಜನರ ಭಾವನೆ.

ತಾಲೂಕಿನಲ್ಲಿರುವ ಶ್ರವಣೂರು ಗ್ರಾಮದ ನೀಲಕಂಠೇಶ್ವರ ದೇವಾಲಯ ಶತಮಾನದಷ್ಟೇ ಹಿಂದಿನದಾಗಿದೆ. ಹೊಸಹಳ್ಳಿಯ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯ ಇತ್ತೀಚೆಗಷ್ಟೆ ನವೀಕೃತಗೊಂಡು ಶಿವರಾತ್ರಿ ಪೂಜೆಗೆ ಸಜ್ಜಾಗಿದೆ.

ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನ ಗ್ರಾಮಗಳಾದ ಮಾಡೇಶ್ವರ, ಬೈರಾಪುರ, ಮಾಕಳಿ ಬೆಟ್ಟ, ರಾಜಘಟ್ಟ, ತೂಬಗೆರೆ, ಶ್ರವಣೂರು, ಅಂಬಲಗೆರೆ, ಯಲಾದಹಳ್ಳಿ, ರ‍್ಗಾಜೋಗಹಳ್ಳಿ, ಇಸ್ತೂರು, ಹಣಬೆ ಹಾಗೂ ನಗರದಲ್ಲಿನ ನಗರೇಶ್ವರ, ಬಸವಣ್ಣ, ಬೈರಾಪುರ ಗ್ರಾಮದಲ್ಲಿನ ಶ್ರೀಕಂಠೇಶ್ವರ ದೇವಾಲಯ, ಸೋಮೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ದೇವಾಲಯಗಳಲ್ಲಿ ಶಿವಲಿಂಗ ಮೂರ್ತಿಗಳು ಶಿವಭಕ್ತರ ಆರಾಧ್ಯ ದೈವಗಳಾಗಿದ್ದು, ಶಿವರಾತ್ರಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆಯಲಿವೆ.

ಮಾಡೇಶ್ವರ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ವಿಶೇಷ :
ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಮಾಡೇಶ್ವರ ಗ್ರಾಮದ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ಶ್ರೀ ಮುಕ್ಕಣ್ಣೇಶ್ವರ ಜರ‍್ಣೋದ್ಧಾರ ಮತ್ತು ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ದೇವಾಲಯಕ್ಕೆ 1500 ವರ್ಷಗಳ ಇತಿಹಾಸವಿದೆ. ದೇವಾಲಯದ ಹಿಂದಿನ ಗುಹೆಯಲ್ಲಿ 1156ರಲ್ಲಿ ಕೆತ್ತಿರುವ ಶಿಲಾಶಾಸನವಿದೆ. ದೇವಾಲಯದಲ್ಲಿ ಶಿವರಾತ್ರಿ ಹಾಗೂ ಕಾರ್ತಿಕ ಮಾಸಗಳಲ್ಲಿ ವಿಶೇಷ ಅಲಂಕಾರ ಪೂಜಾ ಕಾರ್‍ಯಗಳು ನಡೆಯಲಿದ್ದು, ಇಂದು ಬೆಳಿಗ್ಗೆ 8ಗಂಟೆಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನ ಸಂರ‍್ಪಣೆ, ರಾತ್ರಿ 8.30ರಿಂದ ಅಖಂಡ ಭಜನಾ ಕಾರ್‍ಯಕ್ರಮಗಳಿವೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!