Bangalore Growing City.. Minister MB Patil stung

ಬೆಂಗಳೂರು ಗ್ರೋಯಿಂಗ್ ಸಿಟಿ.. ಪೈಗೆ ಕುಟುಕಿದ ಸಚಿವ ಎಂಬಿ ಪಾಟೀಲ

ಬೆಂಗಳೂರು: ಉದ್ಯಮಿ ಮೋಹನದಾಸ್ ಪೈ (Mohandas paid) ಅವರು ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patila) ಕುಟುಕಿದ್ದಾರೆ.

ಗುರುವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ’ ಎಂದು ಹರಿಹಾಯ್ದಿದ್ದಾರೆ.

ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದು ಅವರು ಉತ್ತರಿಸಿದ್ದಾರೆ.

ಬೆಂಗಳೂರು ‘ಗ್ರೋಯಿಂಗ್ ಸಿಟಿ’ಯ ಜತೆಗೆ ‘ಗ್ಲೋಬಲ್ ಸಿಟಿ’ ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಯಾರೇ ಆಗಲಿ, ಸರಕಾರಕ್ಕೆ ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ‌ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪಾಟೀಲ ನೆನಪಿಸಿದ್ದಾರೆ.

ತೆಲಂಗಾಣಕ್ಕೆ ಕೃಷ್ಣಾ ನೀರು, ತಪ್ಪೇನಿಲ್ಲ

ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಲಮಟ್ಟಿ ಆಣೆಕಟ್ಟೆಯಿಂದ ತೆಲಂಗಾಣಕ್ಕೆ 1.24 ಟಿಎಂಸಿ ಅಡಿ ನೀರನ್ನು ಬಿಟ್ಟಿರುವುದರಲ್ಲಿ ತಪ್ಪೇನೂ‌ ಇಲ್ಲ. ಕೆಲವೊಂದು ವಿಚಾರಗಳನ್ನು ನಾವು ಮಾನವೀಯವಾಗಿ ನೋಡಬೇಕಾಗುತ್ತದೆ ಎಂದು ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!