ದೊಡ್ಡಬಳ್ಳಾಪುರ: ಮಾ.01 ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ (PUC) ವಾರ್ಷಿಕ ಪರೀಕ್ಷೆಗಳಿಗೆ ತಾಲೂಕಿನಲ್ಲಿ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (769), ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು (1001), ಶ್ರೀ ದೇವರಾಜ ಅರಸು ಪದವಿ ಪೂರ್ವ ಕಾಲೇಜು(673) ಮೂರು ಪರೀಕ್ಷಾ ಕೇಂದ್ರಗಳಿಂದ 2443 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಇದರಲ್ಲಿ 1025 ಬಾಲಕರು ಹಾಗೂ 1418 ಬಾಲಕಿಯರು ಇದ್ದು ಪರೀಕ್ಷೆ ತೆಗೆದುಕೊಂಡವರಲ್ಲಿ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
PUC ಪರೀಕ್ಷೆಯು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಮಾ.1ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಕೊಠಡಿಗಳನ್ನು ಸ್ವಚ್ಛಗೊಳಿಸಿ, ನೋಂದಣಿ ಸಂಖ್ಯೆಗಳನ್ನು ಹಾಗೂ ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರಗಳನ್ನು ಹಾಕಲಾಗಿದೆ. ನೀರು, ಶೌಚಾಲಯ ವ್ಯವಸ್ಥೆ ಸೇರಿದಂತ ಮೂಲ ಸೌರ‍್ಯಗಳಿಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ 144 ಸೆಕ್ಷೆನ್ ಅನ್ವಯ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಕಾರಿಗಳು ಆದೇಶಿಸಿದ್ದಾರೆ.
ಸಿ.ಸಿ ಟಿವಿ ಕ್ಯಾಮರಾ ಕಣ್ಗಾಗವಲಿನಲ್ಲಿ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ. ಸುತ್ತಮುತ್ತ ಯಾವುದೇ ಜೆರಾಕ್ಸ್ ಅಂಗಡಿ ತೆರೆಯದಂತೆ ಸೂಚಿಸಲಾಗಿದೆ.
ಪರೀಕ್ಷಾ ಕೊಠಡಿಯೊಳಗೆ ಕಡ್ಡಾಯವಾಗಿ ಮೊಬೈಲ್, ಕೈಗಡಿಯಾರ ಕೊಂಡೊಯ್ಯದಂತೆ ಸೂಚನೆ ನೀಡಲಾಗಿದೆ.