ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೀತಪದ್ಧತಿ.. 164 ಮಂದಿ ಜೀತ ಮುಕ್ತ..!

Serfdom in Bangalore rural district.. 164 people are free from serfdom..!

ಬೆಂ.ಗ್ರಾ. ಜಿಲ್ಲೆ; ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ (serfdom) ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ “ಜೀತ ಪದ್ದತಿ (serfdom) ನಿರ್ಮೂಲನಾ ದಿನಾಚರಣೆ: ಒಂದು ದಿನದ ಕಾರ್ಯಾಗಾರ”ವನ್ನು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಜೀತ ಪದ್ಧತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯಾನಂತರ ಈ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ.

ಸಮಾಜದಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಾಮಾನ ಹಕ್ಕುಗಳನ್ನು ನೀಡಲಾಗಿದೆ. ಬಲವಂತವಾಗಿ ಯಾರ ಸ್ವತಂತ್ರವನ್ನು ಕಿತ್ತು ಕೊಳ್ಳಬಾರದು. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವು ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ ಎಂದರು.

ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಜೀತ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಬೆಂಗಳೂರು ಜಿಲ್ಲೆಯಲ್ಲಿ 164 ಜೀತದಾಳು ಗಳನ್ನು ವಿಮುಕ್ತಿಗೊಳಿಸಲಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ವಿಮುಕ್ತರಿಗೆ ತಲಾ 20.000 ರೂ.ಗಳಂತೆ 31.40 ಲಕ್ಷ ರೂ.ಗಳು ನೀಡಲಾಗಿದೆ.

ಇಬ್ಬರಿಗೆ ನಿವೇಶನ ನೀಡಲಾಗಿದ್ದು, 43 ಜನರಿಗೆ ಮನೆ ಒದಗಿಸಲಾಗಿದೆ. 53 ಜನರಿಗೆ ಜಾಬ್ ಕಾರ್ಡ್, 156 ಜನರಿಗೆ ಆಧಾರ್ ಹಾಗೂ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ, 04 ಜನರಿಗೆ 79200 ರೂಗಳ ಮಾಸಾಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೀವಿಕ ಸಂಘಟನೆಯ ಡಾ.ನಾರಾಯಣಸ್ವಾಮಿ ರವರು ಮಾತನಾಡಿ ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ (RBL Scheme), ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಡಿವೈಎಸ್ಪಿ ರವಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]