Doddaballapura: ವೃದ್ಧೆಯ ಓಲೆ ಕದ್ದೋಯ್ದ ಕಳ್ಳರು..! ದೊಡ್ಡಬಳ್ಳಾಪುರ: ಬೇಸಿಗೆ ಆರಂಭವಾಗುತ್ತಿದ್ದಂತೆ ತಾಲೂಕಿನ ಅಪರಾಧ ಪ್ರಕರಣಗಳು ಹೆಚ್ಚಾಗಲಾರಂಭಿಸಿವೆ. ಇತ್ತೀಚಿಗಷ್ಟೇ ಆಲಹಳ್ಳಿಯಲ್ಲಿ ಚಿಲ್ಲರೆ ಅಂಗಡಿಯಲ್ಲಿನ ವೃದ್ಧೆಯ ಮಾಂಗಲ್ಯ ಸರ ಕಿತ್ತೊಯ್ದಿದ್ದ ಬೆನ್ನಲ್ಲೇ ಇಂದು ಕಂಟನಕುಂಟೆ ಬಳಿ ದನಗಳ ಮೇಸುತ್ತಿದ್ದ ವೃದ್ಧೆಯ ಗಮನ ಬೇರೆಡೆ ಸೆಳೆದು ಕಿವಿಯ ಓಲೆ ಕದ್ದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಕಂಟನಕುಂಟೆ ನಿವಾಸಿ 74 ವರ್ಷದ ಚಂದ್ರಮ್ಮ ಎನ್ನುವವರು ವಡ್ಡರಹಳ್ಳಿ ನಡುವಿನ ರಸ್ತೆಯಲ್ಲಿ ದನ ಮೇಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ಪುರುಷ ಮತ್ತು ಮಹಿಳೆ ವೃದ್ಧೆಯ ಮಾತಿಗೆಳೆದಿದ್ದಾರೆ. ಈ ವೇಳೆ ಕಳ್ಳರ ಕಾಟ ಜಾಸ್ತಿ ಆಗಿದೆ, ಈ ರೀತಿ ಒಡವೆಗಳನ್ನು ಧರಿಸಬಾರದು ಎಂದು, ಸುಮಾರು 15 ಗ್ರಾಂ ತೂಕದ ಓಲೆಯನ್ನ ಬಿಚ್ಚಿಸಿದ್ದು, ಬಳಿಕ ಕವರ್ಗೆ ಹಾಕಿ ನೀಡುವ ವೇಳೆ ಗಮನ ಬೇರೆಡೆ ಸೆಳೆ ಬೇರೆ ಕವರ್ ನೀಡಿ ಪರಾರಿಯಾಗಿದ್ದಾರೆ. ಬಳಿಕ‌ ಕವರ್ ತಗೆದು ನೋಡಿದಾಗ ವೃದ್ಧೆ ಮೋಸಕ್ಕೆ ಒಳಗಾಗಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Doddaballapura: Thieves stole old woman's Earring..!

ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ಜೆಡಿಎಸ್ (JDS) ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ, ವಿಧಾನಮಂಡಲ ಕಲಾಪದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಇತ್ಯಾದಿ ಅಂಶಗಳ ಬಗ್ಗೆ ಮಹತ್ವದ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮುಂದಾಳತ್ವದಲ್ಲಿ ನಡೆದ ಸಭೆಯಲ್ಲಿ ಮೇಲಿನ ಎಲ್ಲ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಯಿತು.

ಈಗಾಗಲೇ ರಾಜ್ಯದ ಉದ್ದಗಲಕ್ಕೂ ಪಕ್ಷದ ವತಿಯಿಂದ ಸದಸ್ಯತ್ವ ಅಭಿಯಾನ ಚಾಲ್ತಿಯಲ್ಲಿದ್ದು, ಅದನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮುಖಂಡರ ಜತೆ ತಮ್ಮದೇ ಆದ ಪರಿಕಲ್ಪನೆಗಳನ್ನು ಹಂಚಿಕೊಂಡರು.

ಸದಸ್ಯತ್ವ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಬೇಕು. ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಎರಡನೇ ಹಂತದ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಇದಕ್ಕೆ ಸ್ಪಂದಿಸಿದ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು, ಸದಸ್ಯತ್ವ ನೋಂದಣಿಯನ್ನು ಎಲ್ಲಾ ಮುಖಂಡರು ಗಂಭೀರವಾಗಿ ಪರಿಗಣಿಸಬೇಕು. ಸಂಘಟನೆಯ ಬಗ್ಗೆ ಅಸಡ್ಡೆ ಬೇಡ ಎಂದು ಕಿವಿಮಾತು ಹೇಳಿದರು.

ಹಿಂದೆ ಇಪ್ಪತ್ತಮೂರು ಜಿಲ್ಲೆಗಳು ಇದ್ದವು. ನಾನು ಪ್ರತಿ ಜಿಲ್ಲೆ, ತಾಲ್ಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಕಷ್ಟಪಟ್ಟು ಪಕ್ಷ ಕಟ್ಟಿದ್ದೇನೆ. ಈಗಲೂ ಓಡಾಟ ಮಾಡುತ್ತಿದ್ದೇನೆ. ಪಕ್ಷ ಕಟ್ಟೋದು ಸುಲಭದ ಕೆಲಸವಲ್ಲ. ಹೀಗಾಗಿ ಯಾರೊಬ್ಬರೂ ಸಂಘಟನೆಯನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ ಎಂದು ಮಾಜಿ ಪ್ರಧಾನಿಗಳು ಮುಖಂಡರಿಗೆ ತಾಕೀತು ಮಾಡಿದರು.

ಯಾರೂ ಎದೆಗುಂದಬೇಕಿಲ್ಲ. ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡೋಣ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ.

ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು. ಎಲ್ಲಿಗೆ ಬೇಕಾದರೂ ಕರೆಯಿರಿ, ಬರುತ್ತೇನೆ. ನಿಮ್ಮ ಜತೆಯಲ್ಲಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ

ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವರಾದ ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಾಯಕನಾಗುವ ಕನಸು ಕಟ್ಟಿಕೊಂಡರೆ ಸಾಲದು. ಅದಕ್ಕೆ ಮೂಲ ಬಂಡವಾಳ ಎಂದರೆ ಪಕ್ಷ ಸಂಘಟನೆ. ನಿಮ್ಮ ಕ್ಷೇತ್ರ, ಮತಗಟ್ಟೆ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಂಘಟನೆಯನ್ನು ಬಲವಾಗಿ ಕಟ್ಟಿ. ಸದಸ್ಯತ್ವ ಅಭಿಯಾನವನ್ನು ವೇಗಯುತವಾಗಿ ನಡೆಸಬೇಕು. ಯುವಜನರು, ರೈತರು, ಕೃಷಿ ಕಾರ್ಮಿಕರು ಹೆಚ್ಚು ಸಂಖ್ಯೆಯಲ್ಲಿ ಪಕ್ಷ ಸೇರ್ಪಡೆ ಆಗಬೇಕು ಎಂದು ಸಚಿವರು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಬಿ.ಎಂ.ಫಾರೂಕ್, ಜೆಡಿಎಸ್ ರಾಜ್ಯ ಮಹಿಳಾ ಅಧ್ಯಕ್ಷೆ ರಶ್ಮಿ ರಾಮೇಗೌಡ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶೆಂಪೂರ್, ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಡಾ. ಕೆ.ಅನ್ನದಾನಿ, ಕೆ.ಎ. ತಿಪ್ಪೇಸ್ವಾಮಿ ಮುಂತಾದವರು ವೇದಿಕೆಯ ಮೇಲಿದ್ದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!