ಬೆಂಗಳೂರು: ಕಳೆದ ಕೆಲ ತಿಂಗಳಿಂದ ಬಾಕಿ ಉಳಿದಿರುವ ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣ ಇದೇ ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi hebbalkar) ಹೇಳಿದ್ದಾರೆ.
ಗೃಹಲಕ್ಷ್ಮೀ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಇಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆಕೂಡ ನಡೆಸಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಡಿಸೆಂಬರ್ ಕಂತಿನ ಹಣ ಇನ್ನು ಎರಡ್ಮೂರು ದಿನಗಳಲ್ಲಿ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಯಾವುದೇ ಕಾರಣಕ್ಕೂ ಮಿಸ್ ಆಗಲ್ಲ. ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು.
ಬಡವರಿಗೆ ಅನುಕೂಲವಾಗಲೆಂದು ಈ ಯೋಜನೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆ ಕೇವಲ ಚುನಾವಣೆಗೋಸ್ಕರ ಮಾಡಿಲ್ಲ. ಚುನಾವಣೆಗಾಗಿ ಗೃಹಲಕ್ಷ್ಮಿ ಯೋಜನೆ ಮಾಡಿದ್ದೇ ಆದಲ್ಲಿ ಚುನಾವಣೆ ಮುಗಿದ ಬಳಿಕ ನಾವು ಬಂದ್ ಮಾಡಬಹುದಿತ್ತಲ್ವಾ ಎಂದೂ ವಿಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು.
ಯಾವ ಫಲಾನುಭವಿಗಳು ಗೊಂದಲ್ಲಕ್ಕೀಡಾಗಬೇಡಿ. ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಲ್ಲ. ಇನ್ಮುಂದೆ ಪ್ರತಿ ತಿಂಗಳು ಹಣ ಹಾಕುತ್ತೇವೆ.
ಐದು ವರ್ಷ ಯೋಜನೆ ನಿಲ್ಲಲ್ಲ. ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಹಣ ಗೃಹಲಕ್ಷ್ಮಿಯರ ಖಾತೆಗೆ ಜಮೆ ಆಗಲಿದೆ ಎಂದು ಹೇಳಿದರು.