Doddaballapura: Murder accused sentenced to life imprisonment..!

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ.

ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತ ಮಾಡಿರುವುದರಿಂದ ನಾವು ವಿಮೆ ಪಾವತಿಸಲು ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಚನ್ನೈ ಹೈಕೋರ್ಟ್ ತೀರ್ಪು (judgment) ನೀಡಿದೆ.

ನಡೆದು ಹೋಗುತ್ತಿದ್ದ ಪತಿಗೆ ವ್ಯಾನ್ ಹಿಂದಿನಿಂದ ಹೋಗಿ ಡಿಕ್ಕಿಹೊಡೆದಿದ್ದು ಅವರು ಸಾವನ್ನಪ್ಪಿದ್ದಾರೆ. ಹೀಗಾಗಿ ಹೆಚ್ಚಿನ ಪರಿಹಾರ ಕೊಡಿಸಬೇಕು ಎಂದು ಕೋರಿ ತಮಿಳುನಾಡಿನ ಭುವನೇಶ್ವರಿ ಹಾಗೂ ಕುಟುಂಬ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ದಂಡಪಾಣಿ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿರುವ ಡ್ರೈವರ್ ಇನ್ಸೂರೆನ್ಸ್ ಕಂಪನಿಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ವಿಮೆ ಪಾವತಿಸದಿರಲು ಕಾರಣವಲ್ಲ. ಅಪಘಾತಕ್ಕೆ ಕಾರಣವಾದ ವಾಹನಕ್ಕೆ ವಿಮೆ ನೀಡಿರುವ ಸಂಸ್ಥೆ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಹೊಣೆಯನ್ನು ಹೊರಬೇಕಾಗುತ್ತದೆ.

ಚಾಲಕ ನಿಯಮಗಳನ್ನು ಗಾಳಿಗೆ ತೂರಿದ್ದರೆ ವಾಹನದ ಮಾಲಿಕ/ಚಾಲಕನಿಂದ ಪರಿಹಾರದ ಮೊತ್ತವನ್ನು ವಿಮಾ ಕಂಪನಿ ವಸೂಲಿ ಮಾಡಿಕೊಳ್ಳಬಹುದು ಎಂದು ಹಲವು ಪ್ರಕರಣಗಳಲ್ಲಿ ಹೇಳಲಾಗಿದೆ.

ಮುಹಮ್ಮದ್ ರಶೀದ್ ಅಲಿಸಾಯ್ ರಶೀದ್ ವರ್ಸಸ್ ಗಿರಿವಾಸನ್ ಪ್ರಕರಣದಲ್ಲಿ ಅಪಘಾತದ ಸಂತ್ರಸ್ತರಾದ ಮೂರನೇ ವ್ಯಕ್ತಿಗೆ ಪರಿಹಾರ ನೀಡುವುದು ವಿಮಾ ಸಂಸ್ಥೆಯ ಜಬಾಬ್ದಾರಿ. ವಿಮೆ ಪಾಲಿಸಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗದು ಎಂದು ಸ್ಪಷ್ಟವಾಗಿ ತಿಳಿಸಿದೆ.

ಹೀಗಾಗಿ ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ವಿಮಾ ಸಂಸ್ಥೆ ಪಾವತಿಸಬೇಕು ಎಂದು ಹೇಳಿದೆ.

ತಮಿಳುನಾಡಿನ ರಾಜಶೇಖರನ್ ಎಂಬುವರು ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಾನ್ ಡಿಕ್ಕಿ ಹೊಡೆದಿತ್ತು. ಅಪಘಾತದಿಂದ ರಾಜಶೇಖರನ್ ಸಾವನ್ನಪ್ಪಿದ್ದರು.

ಈ ಪ್ರಕರಣದಲ್ಲಿ ನ್ಯಾಯಮಂಡಳಿ 27 ಲಕ್ಷ ಪರಿಹಾರ ಪಾವತಿಸುವಂತೆ ವಿಮಾ ಸಂಸ್ಥೆಗೆ ಆದೇಶಿಸಿತ್ತು. ಹೆಚ್ಚುವರಿ ಪರಿಹಾರ ಕೋರಿ ರಾಜಶೇಕರನ್ ಪತ್ನಿ ಹಾಗೂ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್, ಪರಿಹಾರ ಮೊತ್ತವನ್ನು 30.25 ಲಕ್ಷಕ್ಕೆ ಹೆಚ್ಚಿಸಿದ್ದು, ಈ ಪರಿಹಾರ ಮೊತ್ತವನ್ನು ಶೇ.7.5 ಬಡ್ಡಿ ದರದೊಂದಿಗೆ 6 ವಾರಗಳಲ್ಲಿ ಸಂತ್ರಸ್ತರಿಗೆ ಪಾವತಿಸುವಂತೆ ತೀರ್ಪು ನೀಡಿದೆ.

ಜತೆಗೆ ಈ ಪರಿಹಾರ ಮೊತ್ತವನ್ನು ವಿಮಾ ಸಂಸ್ಥೆ ಸಂಬಂಧಪಟ್ಟವರಿಂದ ವಸೂಲಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.
(C.M.A.No.3392 of 2024)

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಬೆಂಗಳೂರು

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!