ಬೆಂಗಳೂರು: ನವವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಜಾಲಹಳ್ಳಿಯಲ್ಲಿ ನಡೆದಿದ್ದು, ನೇಣಿಗೆ ಶರಣಾದ ಮಹಿಳೆಯನ್ನು 23 ವರ್ಷದ ಪೂಜಾಶ್ರೀ ಎಂದು ಗುರುತಿಸಲಾಗಿದೆ.
ಪೂಜಾಶ್ರೀ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬುವರನ್ನು 10 ತಿಂಗಳ ಹಿಂದೆ ವಿವಾಹವಾಗಿದ್ದರು.
ಕೆಲಸ ಹುಡುಕುವ ಸಲುವಾಗಿ ಕಳೆದ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ.
ಸಂಬಂಧಿಕರ ಮನೆಯಲ್ಲೇ ಇದ್ದ ಪೂಜಾಶ್ರೀ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಜಾಲಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.