JDS protest for guarantee money led by B. Munegowda

ಬಿ.ಮುನೇಗೌಡ ನೇತೃತ್ವದಲ್ಲಿ ಗ್ಯಾರಂಟಿ ಹಣಕ್ಕಾಗಿ JDS ಪ್ರತಿಭಟನೆ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ; ಮನಸೋ ಇಚ್ಛೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಲ್ಲ. ನೀವೇ ಕೊಟ್ಟಿರುವ ಮಾತನ್ನ ಉಳಿಸಿಕೊಂಡು ಒಂದು ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಬಿ.ಮುನೇಗೌಡ ಅವರು ಒತ್ತಾಯಿಸಿದರು.

ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ಯಾರಂಟಿಗಳು ಎಂದರೆ ಈ ಸರ್ಕಾರಕ್ಕೆ ಚುನಾವಣೆಗಳನ್ನು ಗೆಲ್ಲುವ ವಾಮಮಾರ್ಗ ಎನ್ನುವಂತಾಗಿದೆ. ಚುನಾವಣೆ ಬಂದಾಗ 2 ಸಾವಿರ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದು, ಉಳಿದಂತೆ ಅದನ್ನು ಮುಂದೂಡಿಕೆ ಮಾಡುವುದು ಸರಿಯಲ್ಲ.

ಸಿಎಂ ಸಿದ್ದರಾಮಯ್ಯ ಅವರೇ..ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರೇ. ನಿಮಗೆ ಇಷ್ಟ ಬಂದಾಗ ಗ್ಯಾರಂಟಿ ಹಣ ಕೊಡುವುದಲ್ಲ. ಕ್ಯಾಲೆಂಡರ್ ನಲ್ಲಿ ದಿನಾಂಕ ಗುರುತಿಸಿ ಘೋಷಣೆ ಮಾಡಿ ಎಂದು ಒತ್ತಾಯಿಸಿದರು.

ನಿಮ್ಮ ಬಜೆಟ್ ನಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಎಂದು..? ಪ್ರತಿ ತಿಂಗಳು ಹಣ DBT ಮಾಡುವ ದಿನ ಹೇಳಿ ಎಂದು ಆಗ್ರಹಿಸಿದರು.

ಜಿಲ್ಲಾಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌‍ ಸೋಲು ಕಾಣುವುದು ಸ್ಪಷ್ಟವಾಗಿದೆ.

ಅದಕ್ಕಾಗಿಯೇ ಚುನಾವಣೆಯನ್ನು ಮುಂದೂಡಿಕೆ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಹಣದಿಂದ ಕಾಂಗ್ರೆಸ್‌‍ಗೆ ಲಾಭವಾಗುವುದಿಲ್ಲ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಹುಸ್ಕೂರು ಆನಂದ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ತಾಲೂಕು ಅಧ್ಯಕ್ಷರಾದ ಹೊಸಕೋಟೆ ಶ್ರೀಧರ್, ದೊಡ್ಡಬಳ್ಳಾಪುರ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಶಾಂತಮ್ಮ, ನೆಲಮಂಗಲ ಶೋಭ, ಜಿಲ್ಲಾ ಮಹಿಳಾ ಘಟಕದ ವಕ್ತಾರೆ ಶಶಿಕಲಾ, ನಗರಸಭೆ ಉಪಾಧ್ಯಕ್ಷ ಮಲ್ಲೇಶ.

ದೊಡ್ಡಬಳ್ಳಾಪುರ ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್, ಟಿಎಪಿಎಂಸಿಎಸ್ ಕಂಚಿಗನಾಳ ಲಕ್ಷ್ಮೀನಾರಾಯಣ್, ಸದಸ್ಯ ಆನಂದ್, ಮುಖಂಡರಾದ ಅರಳುಮಲ್ಲಿಗೆ ಶ್ರೀನಿವಾಸ್, ದೊಡ್ಡಗುಂಡಪ್ಪನಾಯಕನಹಳ್ಳಿ ರಾಜಕುಮಾರ್, ದೇವನಹಳ್ಳಿ ರವಿ, ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸೇರಿದಂತೆ ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ಹೋಬಳಿ ಅಧ್ಯಕ್ಷರು, ಕಾರ್ಯಕರ್ತರು ಸೇರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!