Budget 2025: Anugrah Yojana.. Increased compensation for accidental death of cattle..!

Budget 2025: ಅನುಗ್ರಹ ಯೋಜನೆ.. ಜಾನುವಾರುಗಳ ಆಕಸ್ಮಿಕ ಸಾವಿಗೆ ಪರಿಹಾರ ಹೆಚ್ಚಳ..!

ಬೆಂಗಳೂರು: ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮಂಡಿಸುತ್ತಿರುವ 2025ರ ಬಜೆಟ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇ ಸಾಲಿನಲ್ಲಿ
50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.

2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ನಿರ್ಮಿಸಲಾಗುವುದು.

ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.

ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.

ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು.

ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ “ನಂದಿನಿ” ಬ್ರ್ಯಾಂಡ್‌ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್‌ ಹಾಲನ್ನು ಶೇಖರಿಸಲಾಗಿದೆ.
ಮೀನುಗಾರಿಕೆ.

ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.

ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು.

ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು
30 ಕೋಟಿ ರೂ. ಒದಗಿಸಲಾಗುವುದು.

ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.

ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.

ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್‌ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು “ಮಲ್ಟಿ-ಲೆವೆಲ್‌ ಪಾರ್ಕಿಂಗ್‌” ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.

ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!