Budget 2025: Establishment of Akka Cafe, Canteen, Cooperative Society

Budget 2025: ಅಕ್ಕ ಕೆಫೆ, ಕ್ಯಾಂಟಿನ್, ಕೋ ಆಪರೇಟಿವ್ ಸೊಸೈಟಿ ಸ್ಥಾಪನೆ

ಬೆಂಗಳೂರು: 2025-26ರ ರಾಜ್ಯ ಬಜೆಟ್‌ನಲ್ಲಿ (Budget 2025) ಮಹಿಳಾ ಸಬಲೀಕರಣ ಸೇರಿದಂತೆ ಮಹಿಳೆಯರಿಗೆ ಬಂಪರ್ ಕೊಡುಗೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಮಹಿಳಾ ಸಬಲೀಕರಣಕ್ಕಾಗಿ ಗ್ರಾಮ ಪಂಚಾಯತಿ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕಛೇರಿ ಆವರಣಗಳಲ್ಲಿ ಅಕ್ಕ ಕೆಫೆ ಮತ್ತು ಕ್ಯಾಂಟೀನ್ ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಇನ್ನು ಮಹಿಳಾ ಸಬಲೀಕರಣಕ್ಕೆ ಪ್ರತಿ ತಾಲೂಕಿನಲ್ಲಿ ಒಂದು ‘ಸಮಗ್ರ ಕೃಷಿ ಕ್ಲಸ್ಟರ್ ಅಭಿವೃದ್ಧಿಪಡಿಸಲಾಗುವುದು.

ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ.

ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಲಾಗಿದೆ.

ಉಳಿದಂತೆ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.

ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.

ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.

ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.

ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು.

ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.

Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.

ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು.

ವಿಶೇಷ ಪಾಲನಾ ಯೋಜನೆಯಡಿ ಹೆಚ್‌.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.

ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು.

ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು.

ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು ಎಂದಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]