Kannada Sahitya Sammelana at Kanasawadi

ಕನಸವಾಡಿಯಲ್ಲಿ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ದೊಡ್ಡಬಳ್ಳಾಪುರ; ತಾಲೂಕಿನ ಕನಸವಾಡಿಯಲ್ಲಿ ಬರುವ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sahitya Sammelana) ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ ಕೈಗೊಂಡಿದ್ದು, ಕನ್ನಡದ ಕಾಯಕಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ಮುಗಿದ ಬಳಿಕ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಈ ಹಂತದಲ್ಲಿ ನಿಯಮಾವಳಿಯಂತೆ ಅಗತ್ಯ ಸಹಕಾರ ನೀಡಲಾಗುವುದು.

ಇಲಾಖಾ ಯೋಜನೆಗಳ ಕುರಿತ ವಸ್ತು ಪ್ರದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿರುವ ಹಿನ್ನಲೆ ಎಲ್ಲ ತಾಲೂಕುಗಳಿಗೂ ಅಗತ್ಯ ಅವಕಾಶಗಳನ್ನು ನೀಡಬೇಕಿದೆ. ದೊಡ್ಡಬಳ್ಳಾಪುರ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಪೂರ್ವ ಸಿದ್ದತೆಗಳನ್ನು ಪರಿವೀಕ್ಷಿಸಲು ಮಾರ್ಗದರ್ಶನ ಮಾಡುವುದಾಗಿ ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ಸಮ್ಮೇಳನದ ರೂಪರೇಶೆ ಮತ್ತು ನಿರೀಕ್ಷಿತ ವೆಚ್ಚಗಳ ಕುರಿತು ಪ್ರಸ್ತಾಪಿಸಿದರು. 2 ದಿನಗಳ ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಚಳವಳಿ, ಸಮಕಾಲೀನ ಸವಾಲುಗಳು ಸೇರಿದಂತೆ ವಿವಿಧ ವಿಚಾರಗಳ ಗೋಷ್ಠಿಗಳು, ಕವಿಗೋಷ್ಠಿ, ಸನ್ಮಾನ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ. ಸಾಹಿತ್ಯಿಕ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ಪರಿಷತ್ತಿನ ನಿಯಮಾವಳಿಯಂತೆ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲಾ ಸಮ್ಮೇಳನ ಆಯೋಜಿಸಲು ಈ ಬಾರಿ ದೊಡ್ಡಬಳ್ಳಾಪುರ ತಾಲೂಕಿಗೆ ಅವಕಾಶ ನೀಡಲಾಗಿದ್ದು, ಸಮ್ಮೇಳನದ ಪೂರ್ವಭಾವಿಯಾಗಿ ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಎಲ್ಲ ಸಂಘ-ಸಂಸ್ಥೆಗಳ ಸಭೆ ನಡೆಸಲು ತಾಲೂಕು ಘಟಕಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಜಿಲ್ಲಾ ಕಸಾಪ ಕಾರ್ಯದರ್ಶಿ ಅಶ್ವತ್ಥಗೌಡ, ದೊಡ್ಡಬಳ್ಳಾಪುರ ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನೆಲಮಂಗಲ ತಾಲೂಕು ಅಧ್ಯಕ್ಷ ಪ್ರಕಾಶ್‌ ಮೂರ್ತಿ, ಹೊಸಕೋಟೆ ತಾಲೂಕು ಅಧ್ಯಕ್ಷ ಮುನಿರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ನಂಜೇಗೌಡ, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವನಾಯಕ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕುಗಳ ಕಸಾಪ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಕನಸವಾಡಿಯ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!