ದೇಶದ ಪ್ರಗತಿಗೆ ನಾರಿಯರ ಪಾತ್ರ ಪ್ರಮುಖ: ಬಿ.ವೈ.ವಿಜಯೇಂದ್ರ

role of women is important for the progress of the country: B.Y.Vijayendra

ಬೆಂಗಳೂರು: ದೇಶದ ಸರ್ವತೋಮುಖ ಪ್ರಗತಿಗೆ ಈ ದೇಶದ ತಾಯಂದಿರು, ನಾರಿಯರ ಪಾತ್ರ ಪ್ರಮುಖ ಮತ್ತು ಇದು ಅತ್ಯಗತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರ ಅಪೇಕ್ಷೆಯಂತೆ ಸಾಧಕರಾದ ತಾಯಿ, ಸಹೋದರಿಯರ ಸನ್ಮಾನ ಮಾಡುತ್ತಿದ್ದೇವೆ ಎಂದರು.

ದೇಶದೆಲ್ಲೆಡೆ ಇದರ ಆಚರಣೆ ಅರ್ಥಪೂರ್ಣವಾಗಿ ನಡೆಯುತ್ತಿದೆ ಎಂದು ವಿವರಿಸಿದರು.

‘ಮನೆ ಮನೆಯಲ್ಲಿ ದೀಪ ಉರಿಸಿ, ಹೊತ್ತುಹೊತ್ತಿಗೆ ಅನ್ನ ಉಣಿಸಿ.. ಸ್ತ್ರೀ ಅಂದರೆ ಅಷ್ಟೇ ಸಾಕೇ?’ ಎಂಬ ಕವಿತೆಯ ಸಾಲುಗಳನ್ನು ತಿಳಿಸಿದ ಅವರು, ದೇಶದ ಮೊದಲ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿಜೀ ಅವರು ಆಯ್ಕೆ ಮಾಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮೋದಿಜೀ ಅವರ ಜನಧನ್ ಸೇರಿ ಎಲ್ಲ ಯೋಜನೆಗಳು, ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆಗಳನ್ನು ಬಿಜೆಪಿಯು ನೀಡಿದಾಗ ಅವು ಯಾವುದೇ ಜಾತಿಗೆ ಸೀಮಿತ ಆಗಿರಲಿಲ್ಲ ಎಂದು ತಿಳಿಸಿದರು. ಕೇಂದ್ರದ ಶೇ 33 ಮೀಸಲಾತಿಯಿಂದ ತಾಯಂದಿರ ಅವಕಾಶಗಳು ಹೆಚ್ಚಲಿವೆ ಎಂದರು.

ಜಮೀರ್ ಅಹ್ಮದ್ ಅವರ ಬಜೆಟ್?

ರಾಜ್ಯದ ಹಣಕಾಸು ಸಚಿವ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದಾರೋ ಅಥವಾ ಜಮೀರ್ ಅಹ್ಮದ್ ಅವರ ಬಜೆಟ್ ಮಂಡನೆ ಮಾಡಿದ್ದಾರೋ ಎಂಬ ಭಾವನೆ ನನಗಷ್ಟೇ ಅಲ್ಲ ರಾಜ್ಯದ ಪ್ರತಿಯೊಬ್ಬ ಹಿಂದೂಗಳಿಗೂ ಅನಿಸಿರುವುದು ಸತ್ಯ ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ವಸತಿ ಶಾಲೆ, ವಿದೇಶಕ್ಕೆ ತೆರಳುವ ಮೊತ್ತ 20 ಲಕ್ಷದ ಬದಲಾಗಿ 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂ ಮಹಿಳೆಯರು ನಿಮ್ಮ ಯೋಜನೆಗಳಿಗೆ ಅರ್ಹರಲ್ಲವೇ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸುವುದಾಗಿ ವಿಜಯೇಂದ್ರ ಅವರು ತಿಳಿಸಿದರು. ಸಿದ್ದರಾಮಯ್ಯರದು ರಾಜ್ಯದ ಅಭಿವೃದ್ಧಿಗೆ ಪೂರಕ ಬಜೆಟ್ ಖಂಡಿತವಾಗಿಯೂ ಅಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪನವರು, ಅನಂತಕುಮಾರ್ ಜೀ ಸೇರಿ ಅನೇಕ ಹಿರಿಯರು ನಗರಸೀಮಿತ ಬಿಜೆಪಿಯನ್ನು ಪ್ರತಿಯೊಂದು ಗ್ರಾಮಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಭೂತಪೂರ್ವ ಬಜೆಟ್ ಕೊಟ್ಟಿದ್ದಾರೆ ಎಂದರೆ, ಇದರ ಹಿಂದಿನ ಶಕ್ತಿ ನಮ್ಮ ತಾಯಿ ಶ್ರೀಮತಿ ಮೈತ್ರಾದೇವಿ ಎಂದು ನೆನಪಿಸಿದರು.

ಈ ವೇಳೆ 6 ಜನ ಸಾಧಕಿಯರನ್ನು ಸನ್ಮಾನಿಸಲಾಯಿತು.

ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ರಾಜ್ಯ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಶಾಂತಲಾ ಭಟ್, ಪೂರ್ಣಿಮಾ ಪ್ರಕಾಶ್, ಡಾ.ವಸುಧಾ ಕುಲಕರ್ಣಿ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರೇಖಾ ಗೋವಿಂದ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ವಿಜಯಲಕ್ಷ್ಮಿ ಆನಂದ ಅವರು ಭಾಗವಹಿಸಿದ್ದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!