SSLC Students, Parents read these words of Gururaj Karjagi

SSLC ವಿದ್ಯಾರ್ಥಿಗಳು, ಪೋಷಕರು ದೊಡ್ಡಬಳ್ಳಾಪುರದಲ್ಲಿ ಗುರುರಾಜ ಕರ್ಜಗಿಯವರ ಈ ಉತ್ತೇಜನ ನುಡಿಗಳನ್ನೊಮ್ಮೆ ಓದಿ

ದೊಡ್ಡಬಳ್ಳಾಪುರ (SSLC): ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ದೇವರಾಜ ಅರಸು ವಿದ್ಯಾಸಂಸ್ಥೆಯ ಆರ್.ಎಲ್.ಜಾಲಪ್ಪ ಕಲಾಮಂದಿರದಲ್ಲಿ ನಡೆದ ಎಸ್.ಎಸ್.ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರೀಕ್ಷೆಗೆ ಸರಿಯಾಗಿ ತಯಾರಿ ಮಾಡಿಕೊಳ್ಳದಿದ್ದಾಗ ಭಯ ಬೀಳುವುದು ಸಾಮಾನ್ಯ. ಪರೀಕ್ಷೆಗಳ ಭಯದಿಂದಾಗಿ ಎಷ್ಟೋ ವಿದ್ಯಾರ್ಥಿಗಳು, ಓದಿದ್ದನ್ನು ಮರೆತು ಅನುತ್ತೀರ್ಣರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನಿಯಮಿತವಾಗಿ ಓದುವ ಅಭ್ಯಾಸ ಕ್ರಮವನ್ನು ರೂಢಿಸಿಕೊಳ್ಳಬೇಕು.

ಬೆಳಗಿನ ಜಾವ ಓದುವುದು ಉತ್ತಮ ಅಭ್ಯಾಸವಾಗಿದ್ದು, 45 ನಿಮಿಷ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ಓದಿದ್ದನ್ನು ಒಂದು ಬಾರಿ ಬರೆಯಬೇಕು. ಇನ್ನೂ ಮನನವಾಗದಿದ್ದರೆ ಮತ್ತೊಬ್ಬರಿಗೆ ಹೇಳಬೇಕು. ಅಧ್ಯಾಯವಾರುಪಟ್ಟಿ ಮಾಡಿಕೊಂಡು ಓದಬೇಕು ಎಂದರು.

ಪರೀಕ್ಷೆಗಾಗಿ ಓದುವುದಕ್ಕಿಂತ ನಿಯಮಿತವಾಗಿ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದ್ದು, ಇದಕ್ಕೆ ನಮ್ಮ ದೇಹ ಮತ್ತು ಮನಸ್ಸಿಗೆ ವ್ಯಾಯಾಮ ಅಗತ್ಯವಾಗಿದೆ.

ಮೆದುಳಿಗೆ ಆಮ್ಲಜನಕದ ಸರಬರಾಜು ಇಲ್ಲದಿದ್ದರೆ, ಮೆದುಳು ಗ್ರಹಿಸುವ ಶಕ್ತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಎರಡೂ ಕೈಗಳನ್ನು ಜೋಡಿಸುವ ಸಣ್ಣ ಆಕ್ಯೂಪ್ರೆಷರ್ ವ್ಯಾಯಾಮ ಮಾಡಬೇಕು. ನಿತ್ಯ 10 ನಿಮಿಷ ವ್ಯಾಯಾಮ ಮಾಡಬೇಕು ಎಂದರು.

ಪರೀಕ್ಷೆ ವೇಳೆಯಲ್ಲಿ ನಿದ್ದೆಗೆಟ್ಟು ಓದಿ ಹೆಚ್ಚು ಒತ್ತಡಕ್ಕೊಳಗಾಗಬಾರದು. ಲವಲವಿಕೆಯಿಂದ ಪರೀಕ್ಷ ಕೆಂದ್ರಕ್ಕೆ ಹೋಗಬೇಕು. ಓಗುವ ಮುಂದೆ ತಾಯಿ ತಂದೆಗಳ ಆಶೀರ್ವಾದ ಪಡೆದರೆ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇನ್ನು ಪರೀಕ್ಷಾ ಕೇಂದ್ರದಲ್ಲಿ ಓದಿನ ಬಗ್ಗೆ ಅನವಶ್ಯಕವಾಗಿ ಗೆಳೆಯರ ಜೊತೆ ಚರ್ಚೆ ಮಾಡುವುದು ಬೇಡ. ಪರೀಕ್ಷಾ ನಂತರವೂ ಬರೆದ ವಿಷಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ದೇ ಮುಂದಿನ ವಿಷಯಕ್ಕೆ ತಯಾರಿ ಮಾಡಿಕೊಳ್ಳುವುದು ಒಳ್ಳೆಯದು ಎಂದು ಪರೀಕ್ಷೆ ಹಾಗೂ ಓದುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಅಂಕದ ಓದಿಗಿಂತ ಜ್ಞಾನದ ಓದು ಮುಖ್ಯ

ಪರೀಕ್ಷೆಗಾಗಿ ಓದುವುದು, ಅಂಕ ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ನಾವು ಪರೀಕ್ಷೆಗಾಗಿ ಕಲಿತ ವಿದ್ಯೆ ಬಹಳಷ್ಟು ಕಾಲ ನಿಲ್ಲುವುದಿಲ್ಲ. ಹೃದಯಕ್ಕೆ ನಾಟಿದ ವಿಚಾರಗಳು ಬಹುಕಾಲ ನಿಲ್ಲುತ್ತವ

ಬಾಯಿಪಾಠ ಮಾಡಿಕೊಂಡು ಅರ್ಥ ಮಾಡಿಕೊಳ್ಳದೇ ಯಾವುದೇ ವಿಚಾರ ಕಲಿತರೂ ಅದು ಅಂಕಕ್ಕೆ ಸೀಮಿತವೇ ಹೊರತು ನಮಗೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ಕಳೆದು ಹೋದ ಸಮಯ ಬದುಕಲ್ಲಿ ಮತ್ತೆ ಬರುವುದಿಲ್ಲ.

ಮಾಜಿ ರಾಷ್ಟ್ರಪತಿಗಳಾದ ಕೆ.ಆರ್.ನಾರಾಯಣನ್, ಅಬ್ದುಲ್ ಕಲಾಂ ಮೊದಲಾದ ಮಹನೀಯರ ಸಾಧನೆಗಳು ಸ್ಪೂರ್ತಿಯಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್ ಮಾತನಾಡಿ, ಮಾ.21ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಯಾವುದೇ ಅಂಜಿಕೆಯಿಲ್ಲದೇ ಸಜ್ಜಾಗಬೇಕಾಗಿದೆ.

ಈ ದಿಸೆಯಲ್ಲಿ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರ ಮಾತುಗಳು ಮಕ್ಕಳಿಗೆ ಸ್ಪೂರ್ತಿಯಾಗಲಿ ಎಂದು ಈ ಕಾರ್ಯಕ್ರಮ ಅಯೋಜಿಸಲಾಗಿದ್ದು, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಕರ್ಜಗಿಯವರ ಮಾತುಗಳು ಸದಾ ಸ್ಪೂರ್ತಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು, ದೇವರಾಜ ಅರಸು ವಿದ್ಯಾಸಂಸ್ಥೆಯ ಎಇಇ ರಮೇಶ್ ಕುಮಾರ್, ಆರ್.ಎಲ್‍ಜೈಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ತಾಲೂಕು ಅಧ್ಯಕ್ಷ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಆಂಜಿನಪ್ಪ, ಶಿಕ್ಷಣ ಸಂಯೋಜಕರಾದ ಜಯಶ್ರೀ, ಮೈಲಾರಪ್ಪ, ಅಶ್ವಿನಿ, ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!