HD Deve Gowda urged the Center to speed up the railway projects in Karnataka

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ರೇಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕರ್ನಾಟಕದ ರೈಲ್ವೆ ಯೋಜನೆಗಳ ಅಗತ್ಯವನ್ನು ಒತ್ತಿ ಹೇಳಿದರು.

ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೇಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಆದಾಗ್ಯೂ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೇಲ್ವೆ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು ₹800 ಕೋಟಿಯಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ನರೇಂದ್ರ ಮೋದಿ ಅವರ ಆಡಳಿತದ ಅಡಿಯಲ್ಲಿ ರಾಜ್ಯದ ಅನೇಕ ರೇಲ್ವೆ ಯೋಜೆಗಳಿಗೆ ಮರು ಚಾಲನೆ ಸಿಕ್ಕಿದೆ. ಆದಾಗ್ಯೂ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಮತ್ತು ಬೆಂಗಳೂರಿನಿಂದ ಭಾರತದ ಇತರೆ ಭಾಗಗಳಿಗೆ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ಇನ್ನೂ ಬಾಕಿ ಉಳಿದಿವೆ. ಇವುಗಳ ಕಡೆ ರೇಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ರೇಲ್ವೆ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುವಂತೆ ಸರ್ಕಾರವನ್ನು ಪದೇ ಪದೆ ಮನವಿ ಮಾಡಿದ ಅವರು; ರೈಲ್ವೆ ಸಂಪರ್ಕವು ಸಾಮಾನ್ಯ ನಾಗರಿಕರಿಗೆ ಕೈಗೆಟುಕುವ ಪ್ರಯಾಣಕ್ಕೆ ಕಾರಣವಾದ ಕೆಲ ಮಹತ್ವದ ಅಂಶಗಳನ್ನು ಉದಾಹರಣೆ ಸಮೇತವಾಗಿ ಉಲ್ಲೇಖಿಸಿದರು.

ಹಾಸನದಿಂದ ಮೈಸೂರಿಗೆ ರೇಲಿನಲ್ಲಿ ಪ್ರಯಾಣ ಮಾಡಿದರೆ ಟಿಕೆಟ್ ವೆಚ್ಚ ₹30 ಆಗುತ್ತದೆ. ಆದರೆ ಬಸ್ ದರಗಳು ಬಹುತೇಕ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿರುತ್ತವೆ. ಇದಕ್ಕಾಗಿಯೇ ರೇಲ್ವೆ ಯೋಜನೆಗಳ ವಿಸ್ತರಣೆ ಪೂರ್ಣ ವೇಗದಲ್ಲಿ ಮುಂದುವರಿಯಬೇಕು ಎಂದು ಅವರು ಪ್ರತಿಪಾದಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ರೇಲ್ವೆ ಕ್ಷೇತ್ರದಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮಾಜಿ ಪ್ರಧಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದರು.

ತಮ್ಮ ಅನುಭವದಿಂದ ಹೇಳುತ್ತಿದ್ದೇನೆ, ಕಳೆದ ಎಪ್ಪತ್ತೈದು ವರ್ಷಗಳ ಅಭಿವೃದ್ಧಿಯನ್ನು ಪರಿಶೀಲನೆ ಮಾಡಿ ನೋಡಿದಾಗ ಹತ್ತು ವರ್ಷಗಳ ಅಭಿವೃದ್ಧಿ ಕಣ್ಣಿಗೆ ಕಟ್ಟುವಂತೆ ಕಾಣುತ್ತದೆ ಎಂದು ಅವರು ಹೇಳಿದರು.

ಹಿಂದೆ ಅನುಮೋದನೆ ಪಡೆಯಲು ವರ್ಷಗಳೇ ಹಿಡಿಯುತ್ತಿದ್ದ ರೈಲ್ವೆ ಯೋಜನೆಗಳು ಈಗ ಅಭೂತಪೂರ್ವ ವೇಗದಲ್ಲಿ ಕಾರ್ಯಗತಗೊಳ್ಳುತ್ತಿವೆ ಎಂದ ಅವರು, ತಮ್ಮ ಅಧಿಕಾರಾವಧಿಯಲ್ಲಿ ರೈಲ್ವೆ ಅನುದಾನ ಹಂಚಿಕೆ, ಯೋಜನೆಗಳ ಜಾರಿ ಇತ್ಯಾದಿ ಅಂಶಗಳನ್ನು ನೆನಪು ಮಾಡಿಕೊಂಡರು, ಅಲ್ಲದೆ; ಆಗ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮತ್ತು ನಿಧಾನಗತಿಯ ಯೋಜನಾ ಅನುಷ್ಠಾನ ಪರಿಸ್ಥಿತಿಯನ್ನು ನೆನಪಿಸಿಕೊಂಡರು.

ಇದಕ್ಕೆ ವ್ಯತಿರಿಕ್ತವಾಗಿ, ದೇಶಾದ್ಯಂತ ರೈಲ್ವೆ ಅಭಿವೃದ್ಧಿಯನ್ನು ಪರಿವರ್ತಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಸ್ಪಷ್ಟ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು.

ರೈಲ್ವೆ ವಿಸ್ತರಣೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದು ದೇವೇಗೌಡರು; ಕೆಲ ಅಂಶಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

ಹಿಂದೆ, ಆಧುನಿಕ ಮೂಲಸೌಕರ್ಯಗಳ ಕೊರತೆಯಿಂದಾಗಿ ರೇಲ್ವೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದವು. ಆದರೆ ಇಂದು ಸುರಕ್ಷತಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿವೆ ಎಂದು ಅವರು ಹೇಳಿದರು.

ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳು ಕಾರಣ ಎಂದ ಅವರು, ಸಚಿವರನ್ನು ಅವರನ್ನು “ರಾಷ್ಟ್ರದ ಪ್ರಗತಿಗೆ ಬದ್ಧರಾಗಿರುವ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ನಾಯಕ” ಎಂದು ಬಣ್ಣಿಸಿದರು.

ಅಲ್ಲದೆ, ಭಾರತದ ರೇಲ್ವೆ ಬೆಳವಣಿಗೆಯನ್ನು ಚೀನಾ, ರಷ್ಯಾ, ಕೆನಡಾ ಮತ್ತು ಆಸ್ಟ್ರೇಲಿಯಾದೊಂದಿಗೆ ಹೋಲಿಸಿ ವಿವರಿಸಿದರು.

ಭಾರತದ ಪ್ರಗತಿ ಈಗ ಜಾಗತಿಕ ಮಾನದಂಡಗಳಿಗೆ ಸಮನಾಗಿದೆ ಎಂದರಲ್ಲದೆ, ರೇಲ್ವೆ ಮಾರ್ಗಗಳ ವಿಸ್ತರಣೆ, ವಿದ್ಯುದೀಕರಣ ಮತ್ತು ಸರಕು ಸಾಗಣೆ ಕಾರಿಡಾರ್‌ಗಳ ಅಭಿವೃದ್ಧಿ ಗಮನಾರ್ಹವಾಗಿ ಆಗಿದೆ ಎಂದರು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವೇಗೌಡರು ರೈಲ್ವೆ ಆಧುನೀಕರಣಕ್ಕೆ ಮೋದಿ ಅವರ ಸರ್ಕಾರವು ತೋರಿದ ಬದ್ಧತೆಗೆ ಅಭಿನಂದನೆ ಸಲ್ಲಿಸಿದ ಅವರು; ಕರ್ನಾಟಕದಲ್ಲಿ ಬಾಕಿ ಇರುವ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಿ ಹೇಳಿದರು.

ತಮ್ಮ ಸಲಹೆಗಳು ಟೀಕಿಸುವ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಆಶಯವನ್ನು ಹೊಂದಿವೆ ಎಂದು ಅವರು ಪುನರುಚ್ಚರಿಸಿದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!