Vijayendra demands judicial or CBI probe into honeytrap

ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದಾರೆ. ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿದ್ದು ಖಂಡನೀಯ ಎಂದರು.

ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಿಸಿಯೂಟ ಅಡುಗೆ ಮಾಡುವವರ, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಇದನ್ನು ನಿನ್ನೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿದ್ದು, ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತವರ ಮಕ್ಕಳನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದನ್ನು ಹೈಕೋರ್ಟಿನಲ್ಲೂ ಪ್ರಶ್ನಿಸಿದ್ದೇವೆ ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಇಲ್ಲವೇ? ಕಾರ್ಯಕರ್ತರನ್ನು ಬಳಸಿಕೊಳ್ಳಬೇಕೇ ಎಂದು ಕೇಳಿದರು.

ಜ್ವ್ವಲಂತ ಸಮಸ್ಯೆಗಳ ಕುರಿತು ಚರ್ಚೆ
9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ದರಿದ್ರ ಪರಿಸ್ಥಿತಿಗೆ ರಾಜ್ಯ ಸರಕಾರ ಬಂದಿದೆ. ಅನೇಕ ಜ್ವಲಂತ ಸಮಸ್ಯೆಗಳಿವೆ ಎಂದು ಬಿ.ವೈ.ವಿಜಯೇಂದ್ರ ಅವರು ಗಮನ ಸೆಳೆದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 9 ವಿವಿಗಳಲ್ಲಿ ಬಡವರ ಉನ್ನತ ಶಿಕ್ಷಣಕ್ಕೆ ಕತ್ತರಿ ಹಾಕುವ ಕೆಲಸಕ್ಕೆ ಸರಕಾರ ಕೈ ಹಾಕಿದೆ. ಹಿರಿಯ ಐಪಿಎಸ್ ಅಧಿಕಾರಿಯ ಮಗಳು 30-40 ಬಾರಿ ಹೊರದೇಶಕ್ಕೆ ಹೋಗಿ ಬಂದಿರುವುದು, ಬೆಂಗಳೂರಿನಲ್ಲಿ ರಾಜಾತಿಥ್ಯ ಕುರಿತು ಪ್ರಸ್ತಾಪ ಮಾಡುತ್ತೇವೆ ಎಂದರು.

ಒಂದು ಬಾರಿ 14 ಕೆಜಿ ಚಿನ್ನ ತಂದಿದ್ದರೆ, 30-40 ಬಾರಿ ಎಷ್ಟು ಚಿನ್ನ ತಂದಿರಬಹುದು ಎಂದು ಕೇಳಿದರು. ಇದರ ಹಿಂದೆ ಸಚಿವರು, ಘಟಾನುಘಟಿಗಳ ಕೈವಾಡ ಇದೆ ಎಂಬ ಮಾತು ಕೇಳಿಬರುತ್ತಿದೆ ಎಂದರು.

ಶಾಸಕ ಸೋಮಶೇಖರ್ ಅವರು ಯಾಕೆ ಸರಕಾರದ ಪರವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ. ರಾಜ್ಯ ಬಿಜೆಪಿ ತೀರ್ಮಾನ ಕೈಗೊಂಡು ಕೇಂದ್ರದ ವರಿಷ್ಠರಿಗೆ ಕಳುಹಿಸಿದೆ. ಈ ಸಂಬಂಧ ಉತ್ತರಕ್ಕೆ ಕಾಯುತ್ತಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!