Congress government's guarantee of price rise: B.Y. Vijayendra

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ ಎಂದರು.

ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.

ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.

ತಮಿಳುನಾಡಿನ ರಾಜಕಾರಣವು ಕೇಂದ್ರ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಅವರು ಕೇಂದ್ರ ವಿರೋಧಿ ನೀತಿಗಳಿಂದ ಬೇಳೆ ಬೇಯಿಸಿಕೊಳ್ಳುತ್ತಾರೆ. ಹಲವಾರು ದಶಕಗಳಿಂದ ಇದನ್ನು ನೋಡುತ್ತ ಬರುತ್ತಿದ್ದೇವೆ. ರೂಪಾಯಿಯನ್ನು ತಮಿಳು ಭಾಷೆಯಲ್ಲಿ ಬರೆಯುವ ಮೂಲಕ ಇದೊಂದು ಹೊಸ ಅಧ್ಯಾಯ ಪ್ರಾರಂಭಿಸಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಈ ಬೆಳವಣಿಗೆ ದೇಶಕ್ಕೆ ಮಾರಕ. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯದಲ್ಲೂ ಇದೇ ಧೋರಣೆಯನ್ನು ರಾಜ್ಯದ ಸರಕಾರ, ತಮಿಳುನಾಡಿನ ಸರಕಾರಗಳು ಅನುಸರಿಸುತ್ತಿವೆ. ಡಿ ಲಿಮಿಟೇಶನ್ ವಿಚಾರದಲ್ಲೂ ಕೇಂದ್ರದ ಗೃಹ ಸಚಿವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ದೇಶದ ಒಳಿತಿಗಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಒನ್ ನೇಶನ್ ಒನ್ ಇಲೆಕ್ಷನ್ ಬಗ್ಗೆ ಆಲೋಚಿಸಿದ್ದಾರೆ.

ಡಿ ಲಿಮಿಟೇಶನ್ ವಿಚಾರ ಮುಂದಿಟ್ಟು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿಗಳೂ ಅದಕ್ಕೆ ಧ್ವನಿಗೂಡಿಸುವುದು ವಿಪರ್ಯಾಸ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿಗಳಿಗೆ ನೈಜ ಕಳಕಳಿ ಇದ್ದರೆ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಅಲ್ಲಿನ ಮುಖ್ಯಮಂತ್ರಿಗಳ ಮನ ಒಲಿಸುವ ಪ್ರಯತ್ನವನ್ನು ಮಾಡಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ತಮಿಳುನಾಡಿನ ಸಚಿವರು ಬಂದಾಗ ಅವರಿಗೆ ರಾಜಾತಿಥ್ಯ ನೀಡಿದ್ದಾರೆ. ಆದರೆ, ನಮ್ಮ ಮುಖ್ಯಮಂತ್ರಿಗಳು ಮತ್ತು ಸರಕಾರವು ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ನೀರು ಹರಿಸುವ ಕುರಿತು ಮಾತನಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಡಿ ಲಿಮಿಟೇಶನ್ ವಿಚಾರದಲ್ಲಿ ತಮಿಳುನಾಡಿನ ಸರಕಾರ ದೇಶವಿರೋಧಿ ನಡೆ ಅನುಸರಿಸುತ್ತಿದೆ. ಅದಕ್ಕೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಧ್ವನಿಗೂಡಿಸುವುದು ನಿಜಕ್ಕೂ ದುರ್ದೈವ ಎಂದರು.

ಸಿದ್ದರಾಮಯ್ಯನವರು ಕೇಂದ್ರದ ಜೊತೆ ರಾಜಕೀಯ ಸಂಘರ್ಷಕ್ಕೆ ಇಳಿದಿದ್ದಾರೆ. ಇದರಿಂದ ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಬಹುದು. ಆದರೆ, ಇದು ರಾಜ್ಯದ ಜನತೆಗೆ ಮಾರಕ ಎಂದರಲ್ಲದೆ, ಈಚೆಗೆ ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಗಳು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘನೆ ಮಾಡಿದ್ದಾರೆ.

ಇವತ್ತು ಪ್ರಧಾನಿ ಮತ್ತು ಹಣಕಾಸು ಸಚಿವೆ ಮಧ್ಯಸ್ಥಿಕೆಯಿಂದಾಗಿ ಜಮ್ಮು- ಕಾಶ್ಮೀರಕ್ಕೆ ಹಣಕಾಸಿನ ವಿಚಾರದಲ್ಲಿ ಒಳ್ಳೆಯದಾಗುತ್ತಿದೆ ಎಂದಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಯಾಕೆ ಈ ರೀತಿ ಕೇಂದ್ರ ಸರಕಾರದ ಜೊತೆಗೆ ಸಂಘರ್ಷಕ್ಕೆ ನಾಂದಿ ಹಾಡಿದ್ದಾರೆ? ಅದರಿಂದ ರಾಜ್ಯಕ್ಕೆ ಯಾವ ರೀತಿ ಒಳಿತಾಗಲು ಸಾಧ್ಯ ಎಂದು ಕೇಳಿದರು. ಇದನ್ನೂ ಸದನದಲ್ಲಿ ಮಾತನಾಡುವುದಾಗಿ ತಿಳಿಸಿದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!