ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ

Netherlands is interested in investing in the state: Ivot D. Vitzervz

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ (Ivot D. Vitzervz) ಹೇಳಿದ್ದಾರೆ.

ಅವರು ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ಬಿ ಪಾಟೀಲ (MB Patila) ಅವರನ್ನು ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಕಳೆದ ಡಿಸೆಂಬರ್ ತಿಂಗಳಲ್ಲಿ ಯೂರೋಪ್ ರೋಡ್-ಶೋ ನಡೆಸಲಾಗಿತ್ತು.

ಆ ಸಂದರ್ಭದಲ್ಲಿ ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಆರ್ & ಡಿ ಚಟುವಟಿಕೆಗಳಿಗೆ 1 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ಆಸಕ್ತಿ ತೋರಿತ್ತು. ಈ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಅನುಸರಣಾ ಸಭೆಗಳನ್ನು ನಡೆಸಲಾಗುವುದು ಎಂದಿದ್ದಾರೆ.

ನೆದರ್ಲೆಂಡ್ಸ್‌ ಕಂಪನಿಗಳು ಭಾರತದಲ್ಲಿ ಮಾಡಿರುವ ಹೂಡಿಕೆಯಲ್ಲಿ ಶೇ.9ರಷ್ಟು ರಾಜ್ಯದಲ್ಲೇ ಆಗಿದೆ. ಫಿಲಿಪ್ಸ್ ಕಂಪನಿಯು ಯಲಹಂಕದ ತನ್ನ ನೂತನ ಕ್ಯಾಂಪಸ್ಸಿಗೆ 50 ಮಿಲಿಯನ್ ಯೂರೋ ಬಂಡವಾಳ ಹೂಡಿದೆ ಎಂದು ಅವರು ತಿಳಿಸಿದ್ದಾರೆ.

ನೆದರ್ಲೆಂಡ್ಸ್‌ ದೇಶದ ಕಂಪನಿಗಳಾದ ಶೆಲ್, ಆ್ಯಕ್ಸೋ ನೊಬೆಲ್, ಟಿಎನ್ ಟಿ ಎಕ್ಸ್‌ಪ್ರೆಸ್‌ ಮುಂತಾದ ಕಂಪನಿಗಳು ನಮ್ಮಲ್ಲಿವೆ. ಡಾಬಸಪೇಟೆ ಬಳಿ ಅಸ್ತಿತ್ವಕ್ಕೆ ಬರುತ್ತಿರುವ ಕ್ವಿನ್ ಸಿಟಿ ಯೋಜನೆಯಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಕಾನ್ಸುಲ್ ಜನರಲ್ ಗಮನಕ್ಕೆ ತರಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ನಂತರ ನಾವು ವಿರಮಿಸಿಲ್ಲ. ನಿರಂತರ ಅನುಸರಣ ಸಭೆಗಳನ್ನು ನಡೆಸುತ್ತಿದ್ದೇವೆ. ಒಡಂಬಡಿಕೆ ಮತ್ತು ಹೂಡಿಕೆ ಆಸಕ್ತಿಗಳನ್ನು ನೈಜ ಹೂಡಿಕೆ ಆಗುವಂತೆ ನೋಡಿಕೊಳ್ಳಲು ಆದ್ಯತೆ ನೀಡಿದ್ದೇವೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಜರಿದ್ದರು.

Ivot D. Vitzervz, Consul General of the Netherlands, stated on Thursday that several Dutch companies are eager to invest in various Research & Development (R&D) sectors in Karnataka.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]