Doddaballapur Municipal Council Budget;

ದೊಡ್ಡಬಳ್ಳಾಪುರ ನಗರಸಭೆ ಬಜೆಟ್; ಖಾಸಗಿ ರೆಸಾರ್ಟಲ್ಲಿ ಭರ್ಜರಿ ಊಟ..!

ದೊಡ್ಡಬಳ್ಳಾಪುರ (Doddaballapura): ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ, ನಗರದ ಜ್ವಲಂತ ಸಮಸ್ಯೆಗಳಿಗೆ ಸ್ಪಂಸುವುದು. ಮೂಲ ಸೌಕರ್ಯ, ರಸ್ತೆ ಅಗಲೀಕರಣ, ನೀರು ಸರಬರಾಜು, ಪ್ಲಾಸ್ಟಿಕ್ ಮುಕ್ತ ಹಾಗೂ ನಿರ್ಮಲ ನಗರ ನಿರ್ಮಾಣಕ್ಕೆ ಒತ್ತು ನೀಡುವುದು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ತಿಳಿಸಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ನಗರಸಭೆಯ 2025-26ನೇ ಸಾಲಿನ ಆಯ-ವ್ಯಯದ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ, ಬಜೆಟ್ ಮಂಡಿಸಿ ಅವರು ಮಾತನಾಡಿದರು.

ಮಳೆ ನೀರು ಕೊಯ್ಲು ವ್ಯವಸ್ಥೆಗೆ ಪ್ರೋತ್ಸಾಹ ಧನ, ರಸ್ತೆ ಅಗಲೀಕರಣಕ್ಕೆ ಯೋಜನೆ ಮೊದಲಾಗಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿ, 2025-26ನೇ ಸಾಲಿಗೆ 1.01 ಕೋಟಿ ರೂ ಉಳಿತಾಯ ಉಳಿತಾಯ ಬಜೆಟ್ ಮಂಡಿಸಲಾಗುತ್ತಿದೆ

2025-26ನೇ ಸಾಲಿಗೆ ಪ್ರಾರಂಭಿಕ ಶಿಲ್ಕು ರೂ. 954.38 ಲಕ್ಷ ಮತ್ತು ವರಮಾನ ರೂ.7570.64 ಲಕ್ಷ ಒಟ್ಟು ರೂ.8525.02 ಲಕ್ಷಗಳ ಆದಾಯ ನಿರೀಕ್ಷಿಸಲಾಗಿದೆ.

ಒಟ್ಟು ವೆಚ್ಚ ರೂ.7469.17 ಲಕ್ಷಗಳೆಂದು ಅಂದಾಜಿಸಿದ್ದು, ರೂ.101.46 ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ ಎಂದರು.

ವಿಶೇಷ ಕಾರ್ಯಕ್ರಮಗಳು

ಮಳೆನೀರು ಕೊಯ್ಲು ಸಂಗ್ರಹಣೆ ಉತ್ತೇಜನಕ್ಕಾಗಿ ಪ್ರೋತ್ಸಾಹಧನ. ನಗರದ ನಾಗರಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಒದಗಿಸಲು ಅಮೃತ 2.0 ಯೋಜನೆಯಡಿ ರೂ.10.00 ಕೋಟಿಗಳಿಗೆ ಯೋಜನೆ ಕೈಗೊಳಲಾಗಿದೆ.

ಅಮೃತ 2.0 ಯೋಜನೆಯಡಿ ನಗರದ ಜಲಮೂಲ ಅಭಿವೃದ್ಧಿಗಾಗಿ ನಗರವ್ಯಾಪ್ತಿಯ 5 ಕಲ್ಯಾಣಿಗಳ ಜೀರ್ಣೋದ್ದಾರಕ್ಕಾಗಿ ರೂ.8.00 ಕೋಟಿ ಹಾಗೂ 5 ಉದ್ಯಾನವನ ಅಭಿವೃದ್ಧಿಗಾಗಿ ರೂ. 2 ಕೋಟಿ ರೂ ಯೋಜನೆ ಕೈಗೊಳ್ಳಲಾಗಿದ್ದು ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು.

ನಗರದ ಒಳಚರಂಡಿ ರೊಚ್ಚು ನೀರನ್ನು ಆಧುನಿಕ ರೀತಿಯಲ್ಲಿ ಸಂಸ್ಕರಿಸಿ ಶುದ್ದೀಕರಿಸಲು ಎಸ್.ಟಿ.ಪಿ. ನಿರ್ಮಾಣಕ್ಕಾಗಿ ರೂ.477.00 ಲಕ್ಷ, ಮುಖ್ಯಮಂತ್ರಿಗಳ ನಗರೋತ್ಥಾನ ಹಂತ-4ರ ಯೋಜನೆಯಡಿ ದೊಡ್ಡಬಳ್ಳಾಪುರ ನಗರಸಭೆಗೆ ರೂ.30.00 ಕೋಟಿಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿ ವರ್ಗದವರ ಕಲ್ಯಾಣ ಕಾರ್ಯಕ್ರಮಕ್ಕಾಗಿ ರೂ.437 ಲಕ್ಷ ರೂ, ಪರಿಶಿಷ್ಟ ಪಂಗಡ ವರ್ಗದವರ ಕಲ್ಯಾಣ ಕಾರ್ಯಕ್ರಮಕ್ಕಾಗಿ ರೂ.177 ಲಕ್ಷಗಳನ್ನು, ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಕ್ಕೆ ರೂ.185 ಲಕ್ಷಗಳನ್ನು, ವಿಕಲಚೇತನರ ಕಲ್ಯಾಣ ಕಾರ್ಯಕ್ರಮಕ್ಕೆ ರೂ.128 ಲಕ್ಷಗಳನ್ನು, ಕುಡಿಯುವ ನೀರಿನ ಪೈಪ್‍ಲೈನ್ ಜಾಗಕ್ಕಾಗಿ ರೂ.100 ಲಕ್ಷಗಳನ್ನು ಹಾಗೂ ದೊಡ್ಡಬಳ್ಳಾಪುರ ನಗರದ ಎಸ್.ಟಿ.ಪಿ. ಘಟಕವನ್ನು ಮೇಲ್ದರ್ಜೆಗೇರಿಸಲು ರೂ.278 ಲಕ್ಷಗಳು, ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.1397.44 ಲಕ್ಷಗಳು ಹಾಗೂ ರಾಜಕಾಲುವೆ ಅಭಿವೃದ್ಧಿಗೆ ರೂ.159.96 ಲಕ್ಷಗಳ ಯೋಜನೆಯು 2025-26ನೇ ಸಾಲಿನಲ್ಲಿ ಮುಂದುವರೆಸಲಾಗಿದೆ.

ರಾಜ್ಯ ಸರ್ಕಾರದ ವತಿಯಿಂದ ಎಸ್.ಎಫ್.ಸಿ. ವಿಶೇಷ ಅನುದಾನದಡಿ ರೂ.8 ಕೋಟಿಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗಾಗಿ ಯೋಜನೆ ಅನುಷ್ಟಾನ ಮಾಡಲಾಗುವುದು.

ನಗರದ ಮುಖ್ಯ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ದೀಪಗಳು ಮತ್ತು ಜನದಟ್ಟಣಿ ಪ್ರದೇಶಗಳಲ್ಲಿ ಸಿ.ಸಿ. ಕ್ಯಾಮರ ಅಳವಡಿಕೆಗಾಗಿ ರೂ.40. ಲಕ್ಷಗಳನ್ನು ಅಂದಾಜಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನಗರದ 10 ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಮಿನಿ ಬಸ್ ತಂಗುದಾಣಗಳನ್ನು ನಿರ್ಮಿಸಲಾಗುವುದು.

ನಗರಸಭೆಯ ಕಟ್ಟಡಗಳಲ್ಲಿ ಹೊಸದಾಗಿ ಜಾಹಿರಾತು ಪಲಕಗಳನ್ನು ನಿರ್ಮಿಸಲು ರೂ.20.00 ಲಕ್ಷಗಳನ್ನು ಅಂದಾಜಿಸಲಾಗಿದೆ.

ನಗರದ ಪ್ರಮುಖ ರಸ್ತೆಗಳ ಅಗಲೀಕರಣಕ್ಕಾಗಿ ಹಂತ ಹಂತವಾಗಿ ಯೋಜನೆ ಕೈಗೊಳ್ಳಲು ರೂ.150.00 ಲಕ್ಷಗಳನ್ನು ಅಂದಾಜಿಸಲಾಗಿದೆ. ನಾಗರಕೆರೆ ಅಂಗಳದಲ್ಲಿ ಹಾದುಹೋಗಿರುವ ಒಳಚರಂಡಿ ಪೈಪ್‍ಲೈನ್‍ನನ್ನು ‘ಡಿ’ ಕ್ರಾಸ್ ರಸ್ತೆಗೆ ಸ್ಥಳಾಂತರಿಸಲು ರೂ.64.43 ಲಕ್ಷಗಳ ಅನುದಾನವನ್ನು ಕಾಯ್ದಿರಿಸಿದ್ದು ಕ್ರಮ ವಹಿಸಲಾಗಿದೆ.

ಅಭಿವೃದ್ಧಿ ಕಾಮಗಾರಿಗಳು

ನಗರದಲ್ಲಿ ವಿವಿಧ ರಸ್ತೆ, ಚರಂಡಿಗಳ ನಿರ್ಮಾಣ ರೂ.450.00 ಲಕ್ಷಗಳು, ಬೀದಿ ದೀಪ ಅಳವಡಿಕೆಗಾಗಿ ರೂ.25.00 ಲಕ್ಷಗಳು, ಟ್ಯ್ರಾಪಿಕ್ ಸಿಗ್ನಲ್ ದೀಪಗಳ ಮತ್ತು ಸಿಸಿ ಕ್ಯಾಮರಾಗಳ ಅಳವಡಿಕೆಗಾಗಿ ರೂ.40.00 ಲಕ್ಷಗಳು, ಮಳೆನೀರು ಚರಂಡಿ, ಕಲ್ವರ್ಟ್‍ಗಳ ಮತ್ತು ಕವರಿಂಗ್ ಸ್ಲ್ಯಾಬ್ ನಿರ್ಮಾಣ ರೂ.60.00 ಲಕ್ಷಗಳು ಸದರಿ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ಸುಮಾರು ರೂ.575.00ಲಕ್ಷಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.

ನೂತನ ಕೆ.ಆರ್. ಮಾರುಕಟ್ಟೆ ಮಳಿಗೆಗಳ ನಿರ್ಮಾಣಕ್ಕಾಗಿ ರೂ. 100.00 ಲಕ್ಷಗಳನ್ನು ಅಂದಾಜಿಸಲಾಗಿದೆ. ನಗರಸಭಾ ಕಛೇರಿ ಅವರಣದಲ್ಲಿ ಕೊಂಗಾಡಿಯಪ್ಪ ಅವರ ಪುತ್ಥ್ತಳಿ ನಿರ್ಮಾಣಕ್ಕಾಗಿ ರೂ. 20.00ಲಕ್ಷಗಳನ್ನು ಮೀಸಲಿರಿಸಲಾಗಿದೆ.

ದೊಡ್ಡಬಳ್ಳಾಪುರ ನಗರದಲ್ಲಿರುವ ಎಲ್ಲಾ ಸ್ಮಶಾನಗಳಿಗೆ ಕಾಂಪೌಂಡ್ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ರೂ.40.00 ಲಕ್ಷಗಳನ್ನು ನೂತನವಾಗಿ ಚಿತಾಗಾರ ನಿರ್ಮಾಣಕ್ಕಾಗಿ ರೂ.400.00 ಲಕ್ಷಗಳನ್ನು ಅಂದಾಜಿಸಲಾಗಿದೆ.

ದೊಡ್ಡಬಳ್ಳಾಪುರ ನಗರಸಭೆಯ 2025-26ನೇ ಸಾಲಿನಲ್ಲಿ ಒಟ್ಟು ಆದಾಯ ರೂ.7570.64 ಲಕ್ಷಗಳನ್ನು ನೀರಿಕ್ಷಿಸಲಾಗಿದ್ದು, ಈ ಪೈಕಿ ತೆರಿಗೆ ಆದಾಯದಿಂದ ರೂ.810.00 ಲಕ್ಷಗಳಾಗಿದ್ದು ಹಾಗೂ ಇತರೆ ತೆರಿಗೆಯೇತರ ಆದಾಯಗಳಾದ ನೀರು ಸರಬರಾಜು ಶುಲ್ಕ, ಒಳಚರಂಡಿ ಸಂಪರ್ಕ ಶುಲ್ಕ, ಅಂಗಡಿ ಮಳಿಗೆಗಳ ಬಾಡಿಗೆ, ಅಭಿವೃದ್ಧಿ ಮತ್ತು ಉತ್ತಮತೆ ಶುಲ್ಕ, ನೀರು ಸರಬರಾಜು ಮತ್ತು ಒಳಚರಂಡಿ ಸಂಪರ್ಕ ಶುಲ್ಕಗಳು ಮತ್ತು ಇತರೆ ಆದಾಯದಿಂದ ರೂ.1203.27 ಲಕ್ಷಗಳ್ನು ನಿರೀಕ್ಷಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಬರುವ ಅನುದಾನಗಳಾದ ಎಸ್.ಎಫ್.ಸಿ. (ವೇತನ, ವಿದ್ಯುತ್, ಮುಕ್ತನಿ ಮತ್ತು ವಿಶೇಷ) ಅನುದಾನ, 15ನೇ ಹಣಕಾಸು, ಸ್ವಚ್ಛಭಾರತ್ ಅಭಿಯಾನದ 2.0, ಅಮೃತ್-2.0 ಅನುದಾನಗಳು ರೂ.5000.88 ಲಕ್ಷಗಳನ್ನು ಅಂದಾಜಿಸಲಾಗಿರುತ್ತದೆ. ಇತರೆ ಅಸಮಾನ್ಯ ಜಮೆಗಳಾದ ಸರ್ಕಾರಿ ತೆರಿಗೆಗಳ/ಕರಗಳ ವಸೂಲಾತಿಯಿಂದ ರೂ.550.88 ಲಕ್ಷಗಳನ್ನು ಒಳಗೊಂಡಿದೆ ಎಂದರು.

ತರಾತುರಿ ಬಜೆಟ್

ಸದಸ್ಯ ಎಚ್.ಎಸ್.ಶಿವಶಂಕರ್ ಮಾತನಾಡಿ, ರಸ್ತೆ ಅಗಲೀಕರಣಕ್ಕೆ 1.5 ಕೋಟಿ ಸಾಲುವುದಿಲ್ಲ. ನಗರದಲ್ಲಿ ಸ್ಮಶಾನಗಳು ಹೆಚ್ಚಿಗೆ ಇರುವುದರಿಂದ 40 ಲಕ್ಷ ರೂ ಸಾಲುವುದಿಲ್ಲ. ಬಜೆಟ್‍ನಲ್ಲಿ ಹಣ ಮೀಸಲಿರಿಸಲಾಗುತ್ತಿದೆಯೇ ಹೊರತು ಯಾವುದೇ ಅನುಷ್ಟಾನವಾಗುತ್ತಿಲ್ಲ. ಪ್ಲಾಸ್ಟಿಕ್ ನಿಯಂತ್ರಣ ಆಗಿಲ್ಲ.

ಸದಸ್ಯರ ಸಲಹೆಗಳನ್ನು ಪರಿಗಣಿಸಬೇಕಿತ್ತು. ನಗರಸಭೆ ಆದಾಯಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ನಗರದ ಸಮಸ್ಯೆಗಳಿಗೆ ಗಂಭೀರ ಉತ್ತರ ಕಂಡುಕೊಳ್ಳದೇ ತರಾತುರಿಯಲ್ಲಿ ಬಜೆಟ್ ಮಂಡಿಸಲಾಗಿದೆ ಎಂದರು.

ಸ್ವಾಗತಾರ್ಹ

ಸದಸ್ಯರಾದ ಇಂದ್ರಾಣಿ, ವತ್ಸಲಾ, ಪ್ರಭಾ ಮಾತನಾಡಿ, ಪ್ಲಾಸ್ಟಿಕ್ ಮುಕ್ತ, ಮಳೆ ನೀರು ಕೊಯ್ಲು, ಪರಿಸರ ಸ್ನೇಹಿ ನಗರಕ್ಕೆ ಹಣ ಮೀಸಲಿಟ್ಟಿರುವುದು ಸ್ವಾಗತಾರ್ಹವಾಗಿದ್ದು, ಇದು ಸಮರ್ಪಕವಾಗಿ ಅನುಷ್ಟಾನಗೊಳ್ಳಬೇಕು ಎಂದರು.

ಎಲ್ಲರ ಅಭಿಪ್ರಾಯ ಸಂಗ್ರಹ

ಪೌರಾಯುಕ್ತ ಕಾರ್ತಿಕೇಶ್ವರ್.ಆರ್ ಮಾತನಾಡಿ, ಬಜೆಟ್ ಬಗ್ಗೆ ಸಲಹೆ ಸೂಚನೆ ನೀಡಲು ಸದಸ್ಯರಿಗೆ ಕಾಲಾವಕಾಶ ನೀಡಿತ್ತು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಬಜೆಟ್ ರೂಪಿಸಲಾಗಿದೆ ಎಂದರು.

ಭರ್ಜರಿ ಊಟ

ಬಜೆಟ್ ಮಂಡನೆ ಬಳಿಕ ಹೆಗ್ಗಡಿಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!