JDS protests against Greater Bangalore Bill

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು: ರಿಯಲ್‌ ಎಸ್ಟೇಟೆ ದಂಧೆಗೆ, ಕನ್ನಡಿಗರನ್ನು ಒಡೆದು ಆಳಲು ಗ್ರೇಟರ್‌ ಬೆಂಗಳೂರು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ (JDS) ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ ೪೩,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!