Bangalore rural district is first in the state in cattle census..!

ಜಾನುವಾರು ಗಣತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯಕ್ಕೆ ಪ್ರಥಮ..!

ಬೆಂ.ಗ್ರಾ.ಜಿಲ್ಲೆ (Bangalore rural district): ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25 ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

21 ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ, ಈ ಕಾರ್ಯಕ್ಕೆ ಕಾರಣರಾದ ಪಶು ವೈದ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತಾ ಜಾನುವಾರು ಸಾಕಾಣಿಕೆಯಲ್ಲಿ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಜಿಲ್ಲೆ ಉತ್ತಮ ಹೆಸರು ಪಡೆಯಬೇಕು. ಹಾಗಾಗಿ ಪಶು ವೈದ್ಯಾಧಿಕಾರಿಗಳ ಸೇವೆ ಕೂಡ ಮುಖ್ಯ.

ರೈತರಿಗೆ ಜಾನುವಾರು ಸಾಕಾಣಿಕೆ ಕುರಿತಂತೆ ಮಾಹಿತಿ, ತರಬೇತಿ, ಕಾರ್ಯಾಗಾರಗಳನ್ನು ಏರ್ಪಡಿಸಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ, ಪ್ರೊತ್ಸಾಹಧನ ಬಗ್ಗೆ ಮಾಹಿತಿ ನೀಡಿ, ಜಾನುವಾರುಗಳಿಗೆ ತಗುಲುವ ರೋಗಗಳನ್ನು ನಿಯಂತ್ರಿಸಲು ಕಾಲಕಾಲಕ್ಕೆ ಲಸಿಕೆ ಹಾಕಿ ಎಂದರು.

ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಕೊಟ್ಟಿಗೆ ಗೊಬ್ಬರ ಬಳಸಿ ಪೌಷ್ಟಿಕ ಆಹಾರ ಉತ್ಪನ್ನ, ಗುಣಮಟ್ಟದ ತರಕಾರಿ ಬೆಳೆಗಳನ್ನು ಬೆಳೆದು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಗುರಿ ಇದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹಕಾರ ಕೂಡ ಮುಖ್ಯ ಎಂದರು.

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಆವರಣಗಳಲ್ಲಿರುವ ಜಾನುವಾರುಗಳ ಕುಡಿಯುವ ನೀರು ತೊಟ್ಟಿಗಳನ್ನ ಸ್ವಚ್ಚಗೊಳಿಸಿ ನೀರು ಹಾಯಿಸಿ.

ಜಿಲ್ಲೆಯ ಯಾವುದೇ ಭಾಗದಿಂದ ಕೂಡ ಕುಡಿಯುವ ನೀರು ಸಮಸ್ಯೆ ಇದೆ ಎಂದು ಸಾರ್ವಜನಿಕರು ನನ್ನ ಬಳಿ ಮನವಿ ಮಾಡಬಾರದು. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಿ ಅಧಿಕಾರಿಗಳಿಗೆ ಸೂಚಿಸಿದರು.

2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ

ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ.

ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು 21ನೇ ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95 ಸಾವಿರ ಮೇಕೆಗಳು ಜಿಲ್ಲೆಯಲ್ಲಿದೆ. 2,93,876 ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆಯನ್ನು ನೀಡಿದ್ದೇವೆ.

ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯ ವನ್ನು ಎಪಿಎಲ್ ಪಡಿತರ ಚೀಟಿಗೆ 50% , ಬಿಪಿಎಲ್ ಪಡಿತರ ಚೀಟಿಗೆ 75% ನೀಡಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರಿನಾಥ್ ಗೌಡ ಸೇರಿದಂತೆ ಜಿಲ್ಲೆಯ ಪಶುವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!