Doddaballapura: District Kannada Literature Conference at Kanasawadi

ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು.

ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನಲೆ ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏಪ್ರಿಲ್‌ 12 ಮತ್ತು 13ರಂದು ಸಮ್ಮೇಳನ ನಡೆಯಲಿದ್ದು, ವಿಚಾರಗೋಷ್ಠಿ, ಕವಿಗೋಷ್ಠಿ, ಸನ್ಮಾನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಪ್ರಾತಿನಿಧ್ಯ ನೀಡಲಾಗುವುದು.

ಜಿಲ್ಲೆ ಹಾಗೂ ತಾಲೂಕಿನ ಜ್ವಲಂತ ಸಮಸ್ಯೆಗಳು, ಕೃಷಿಕರು, ನೇಕಾರರ ಸಂಕಷ್ಟಗಳು, ಕೈಗಾರಿಕೀಕರಣದಿಂದ ಎದುರಾಗಿರುವ ಸವಾಲುಗಳ ಕುರಿತು ಚರ್ಚಿಸುವ ಗೋಷ್ಠಿಗಳನ್ನು ಏರ್ಪಡಿಸಲಾಗುವುದು.

ಸಮ್ಮೇಳನ ಆಯೋಜನಾ ತಾಲೂಕಿನ ಸ್ಥಳೀಯ ಸಾಧಕರೊಬ್ಬರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗುವುದು.

ಸಮ್ಮೇಳನದ ಸಮಗ್ರ ಆಯೋಜನೆ, ಕಾರ್ಯನಿರ್ವಹಣೆಗೆ ಎಲ್ಲ ಕನ್ನಡಪರ, ಪ್ರಗತಿಪರ, ರೈತ, ದಲಿತ, ಮಹಿಳಾ ಹಾಗೂ ವಿದ್ಯಾರ್ಥಿ ಸಂಘಟನೆಗಳು ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಸಲಹೆ-ಸೂಚನೆಗಳನ್ನು ನೀಡಿ ಮಾತನಾಡಿದ ಸಂಘಟನೆಗಳ ಮುಖಂಡರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಂತಸದ ವಿಚಾರ. ಸಮ್ಮೇಳನ ಕೇವಲ ಸಾಹಿತ್ಯಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ, ಈ ನೆಲದ ಸಮಸ್ಯೆಗಳಿಗೆ ದನಿಯಾಗಬೇಕು.

ರೈತರ ಹೋರಾಟಗಳು, ನೇಕಾರರ ಸಂಕಷ್ಟ, ಕೈಗಾರಿಕೆಗಳ ಅತಿಯಾದ ಬೆಳವಣಿಗೆಯಿಂದ ಉಂಟಾಗುತ್ತಿರುವ ಸಮಸ್ಯೆಗಳು ಸೇರಿದಂತೆ ಜ್ವಲಂತ ಸಮಸ್ಯೆಗಳ ಚರ್ಚೆಗೆ ವೇದಿಕೆಯಾಗಬೇಕು. ಕೇವಲ ಚರ್ಚೆಗಷ್ಟೇ ಸೀಮಿತವಾಗದೆ ಸರ್ಕಾರದ ಮೇಲೆ ಪ್ರಭಾವ ಬೀರುವ ಪ್ರಯತ್ನವಾಗಬೇಕು ಎಂದರು.
ಸಮ್ಮೇಳನಾಧ್ಯಕ್ಷತೆಗೆ ಸ್ಥಳೀಯ ಸಾಧಕರನ್ನು ಗುರ್ತಿಸಿ ಆಯ್ಕೆ ಮಾಡಬೇಕು.

ಹೋರಾಟಗಾರರು, ಇತರೆ ಕ್ಷೇತ್ರಗಳಲ್ಲಿನ ಸಾಧಕರನ್ನೂ ಪರಿಗಣಿಸುವುದು ಅಗತ್ಯ. ಸಂಘ-ಸಂಸ್ಥೆಗಳಿಗೆ ನಿರ್ದಿಷ್ಟ ಹೊಣೆಗಾರಿಕೆಯನ್ನು ವಹಿಸಿ, ತೊಡಗಿಸಿಕೊಳ್ಳುವ ಪ್ರಯತ್ನ ಆಗಬೇಕು. ಒಟ್ಟಾರೆಯಾಗಿ ತಾಲೂಕಿನಲ್ಲಿ ನಡೆವ ಸಮ್ಮೇಳನ ಮಾದರಿಯಾಗಿ ರೂಪುಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂ.ಗ್ರಾ ಜಿಲ್ಲಾ ಕಸಾಪ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್, ಪ್ರಾಸ್ತಾವಿಕವಾಗಿ ಮಾತನಾಡಿ ಸಮ್ಮೇಳನದ ರೂಪರೇಷೆಗಳನ್ನು ವಿವರಿಸಿದರು.

ಕಸಾಪ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಜಿಲ್ಲಾ ಕೋಶಾಧ್ಯಕ್ಷ ಡಾ.ಮುನಿರಾಜು, ಸಭೆಯಲ್ಲಿ ಕನ್ನಡ ಪಕ್ಷದ ಮುಖಂಡ ಸಂಜೀವನಾಯಕ್, ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಮಾಜಿ ಅಧ್ಯಕ್ಷ ಬಿ.ಜಿ.ಅಮರನಾಥ್, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ದೊಡ್ಡತುಮಕೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ಕನ್ನಡ ಜಾಗೃತಿ ವೇದಿಕೆಯ ನಾಗರಾಜ್, ಅಗ್ನಿ ವೆಂಕಟೇಶ್.

ಪತ್ರಕರ್ತರಾದ ಗಂಗರಾಜು ಶಿರವಾರ, ರಾಜುಸಣ್ಣಕ್ಕಿ, ತೆರದಾಳ್‌ ಶ್ರೀನಿವಾಸ್, ಕೊತ್ತೂರಪ್ಪ, ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಎಂ.ಕೆ.ವತ್ಸಲ, ಕರ್ನಾಟಕ ರಾಜ್ಯ ರೈತ ಸಂಘದ ಸತೀಶ್‌, ಕನ್ನಡ ಪಕ್ಷದ ವೆಂಕಟೇಶ್, ಮುನಿಪಾಪಯ್ಯ, ಡಾ,ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ವಿ.ಪರಮೇಶ್, ಶಿವರಾಜ್‌ಕುಮಾರ್‌ ಕನ್ನಡ ಸೇನಾ ಸಮಿತಿಯ ಜೆ.ಆರ್.ರಮೇಶ್.

ಕರವೇ ಪ್ರವೀಣ್‌ಶೆಟ್ಟಿ ಬಣದ ಹಮಾಮ್‌ ವೆಂಕಟೇಶ್, ಕಲಾವಿದರ ಸಂಘದ ಅಧ್ಯಕ್ಷ ರಾಮಾಂಜಿನಪ್ಪ, ಗ್ರಾಪಂ ಸದಸ್ಯೆ ನಾಗರತ್ನಮ್ಮ, ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಾರ್ಯದರ್ಶಿ ಎ.ಜಯರಾಮ್, ಸುರೇಶ್‌, ತೂಬಗೆರೆ ಷರೀಫ್, ಉದಯ ಆರಾಧ್ಯ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!