Discussion for promotion of physical teachers to the post of co-teachers; Minister Madhu Bangarappa

ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ಚರ್ಚೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ (Madhu bangarappa) ಅವರು ತಿಳಿಸಿದರು.

Guarantee scheme
ಎನ್ ವಿಶ್ವನಾಥ್

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆ ಆಗಿರುತ್ತದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಗ್ರೂಪ್ ಬಿ ಮತ್ತು ಮುಖ್ಯ ಶಿಕ್ಷಕರು / ಉಪ ಪ್ರಾಂಶುಪಾಲರು ವೃಂದದ ಹುದ್ದೆಗೆ ಬಡ್ತಿಗೆ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದವು ಪೋಷಕ ವೃಂದವಾಗಿರುತ್ತದೆ.

ಮುಖ್ಯ ಶಿಕ್ಷಕರ ವೃಂದಕ್ಕೆ, ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿ.ಎಡ್ ಪದವಿ. ದೈಹಿಕ ಶಿಕ್ಷಣ ಶಿಕ್ಷಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ.

ಮುಖ್ಯ ಶಿಕ್ಷಕರು ಬೋಧನೆಯಲ್ಲಿ ಪ್ರಾವೀಣ್ಯತೆ ಹಾಗೂ ಅನುಭವವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ಮಾಡುತ್ತಾರೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿ ಆಗಿಲ್ಲದೆ ಇರುವುದರಿಂದ ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ.

ಮುಖ್ಯ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು / ಹಿರಿಯ ಉಪನ್ಯಾಸಕರು ನಿರ್ದೇಶಕರು ಮಧ್ಯಾಹ್ನ ಯೋಜನೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹುದ್ದೆಗಳಿಗೆ ಭರ್ತಿ ಹೊಂದಲು ಅವಕಾಶವಿರುತ್ತದೆ.

ಈ ಎಲ್ಲಾ ಹುದ್ದೆಗಳು ಶೈಕ್ಷಣಿಕವಾಗಿ ಶಾಲೆಗಳಲ್ಲಿ ವಿಷಯ ಬೋಧನೆ ಅನುಭವವನ್ನು ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡುವ ಅನುಭವವನ್ನು ಅಪೇಕ್ಷಿಸುತ್ತದೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆಯ ತರಬೇತಿ ಇರುವುದಿಲ್ಲ. ಬದಲಾಗಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾತ್ರ ತರಬೇತಿಯನ್ನು ಪಡೆದಿರುತ್ತಾರೆ.

ದೈಹಿಕ ಶಿಕ್ಷಣದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿ ಕಲ್ಪಿಸಲಾಗಿದೆ.

ಶೈಕ್ಷಣಿಕ ಆಡಳಿತದ ಹಿತದೃಷ್ಠಿಯಿಂದ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿ ಹಾಗೂ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆ ಪೋಷಕ ವೃಂದ ಎಂಬುದಾಗಿ ಗುರುತಿಸಿರುವ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗಳನ್ನು ಪರಿಗಣಿಸಲಾಗುತ್ತಿದೆ.

ಆದಾಗ್ಯೂ ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಆದೇಶಗಳನ್ನು ಪರಿಶೀಲಿಸಿ ನಂತರ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!