Doddaballapura: ಎಂಎಸ್‌ಜಿಪಿ ಕಸ ವಿಲೇವಾರಿ ಘಟಕ ಪರಿಶೀಲನೆ

Doddaballapura: Inspection of MSGP Garbage Disposal Unit

ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕದಲ್ಲಿನ ವಾಸ್ತವ ಸ್ಥಿತಿ ವೀಕ್ಷಣೆ ಮಾಡುವ ಮೂಲಕ ಹೈಕೋರ್ಟ್ಗೆ ವರದಿ ನೀಡಲು ಬುಧವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೋಲಾ ಪಂಡಿತ್ ಅವರು ಭೇಟಿ ನೀಡಿದ್ದರು.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಬಿಎಂಪಿ ಕಸ ವಿಲೇವಾರಿ ಘಟಕ ಎಂಎಸ್‌ಜಿಪಿಗೆ ಭೇಟಿ ನೀಡಿ ಕಸ ವಿಗಂಡಣೆ, ಬಯಲಿನಲ್ಲಿ ಕಸದ ರಾಶಿ ಹಾಕಿರುವ ಸ್ಥಳ, ಕಸದ ರಾಶಿಯಿಂದ ಹೊರಬಹುವ ತ್ಯಾಜ್ಯ ನೀರು ಸಂಗ್ರಹವಾಗುವ ಕುಂಟೆ,ಕಸವನ್ನು ಗೊಬ್ಬರವಾಗಿ ಪರಿರ್ವತಿಸುವ ಯಂತ್ರಗಳ ಕಾರ್ಯಚರಣೆ ಹಾಗೂ ತ್ಯಾಜ್ಯ ನೀರನ್ನು ಸಂಸ್ಕರಿಸುವ ಸ್ಥಳಕ್ಕು ಭೇಟಿ ನೀಡಿ ಮಾಹಿತಿ ಪಡೆದರು.

ಗ್ರಾಮಕ್ಕೆ ಭೇಟಿ:

ಕಸದ ರಾಶಿಯಿಂದ ಹೆಚ್ಚು ತೊಂದರೆಗೆ ಸಿಲುಕಿರುವ ತಣ್ಣೀರನಹಳ್ಳಿ, ಮೂಡ್ಲಕಾಳೇನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ್ದ ನ್ಯಾಯಾಧೀಶರು, ಗ್ರಾಮದ ಮಹಿಳೆಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.

ಕಸದ ರಾಶಿಯಿಂದ ಹೊರಬರುತ್ತಿರುವ ದುರ್ನಾಥ, ಮಳೆಗಾಲದಲ್ಲಿ ಕಸದ ರಾಶಿಯಿಂದ ಹಳ್ಳದ ಮೂಲಕ ಹರಿದು ಬರುವ ತ್ಯಾಜ್ಯ ನೀರಿನ ಸಮಸ್ಯೆ, ಅಂತರ್ಜಲ ಕಲುಷಿತಗೊಂಡು ಕುಡಿಯುವ ನೀರಿಗು ತತ್ವಾರ ಉಂಟಾಗಿರುವುದು, ಅನಾರೋಗ್ಯಕ್ಕೆ ತುತ್ತಾಗಿರುತ್ತಿರುವ ಬಗ್ಗೆ ಗ್ರಾಮದ ಮಹಿಳೆಯರು ನ್ಯಾಯಾಧೀಶರ ಗಮನಕ್ಕೆ ತಂದರು.

ಪಿಐಎಲ್ ಸಲ್ಲಿಕೆ

ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆಗುತ್ತಿರುವ ತೊಂದರೆಗಳ ಕುರಿತು ಹೈಕೋರ್ಟ್ಗೆ ಸಾರ್ವಜನಿಕರ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಶ್ರೀನಿವಾಸ್ ಅವರು ನ್ಯಾಯಾಧೀಶರ ಭೇಟಿ ಕುರಿತು ಮಾಹಿತಿ ನೀಡಿ, ಬಿಬಿಎಂಪಿ ಇಲ್ಲಿಗೆ ತಂದು ರಾಶಿ ಹಾಕುರುತ್ತಿರುವ ಕಸದಿಂದ ಜನ,ಜಾನುವಾರು ಹಾಗೂ ಪರಿಸರಕ್ಕೆ ಆಗುತ್ತಿರುವ ತೊಂದರೆಗಳ ಕುರಿತು ದೂರುಸಲ್ಲಿಸಲಾಗಿದೆ. ಇದರ ಸತ್ಯಾಸತ್ಯತೆಯನ್ನು ಅರಿಯಲು ಹೈಕೋರ್ಟ್ ಸೂಚನೆಯಂತೆ ನ್ಯಾಯಾಧೀಶರು ಬುಧವಾರ ಭೇಟಿ ನೀಡಿದ್ದಾರೆ. ನ್ಯಾಯಾಧೀಶರು ಗ್ರಾಮಗಳಿಗೆ ಭೇಟಿ ನೀಡಿದ್ದ ಸಮಯದಲ್ಲೂ ಕಸದ ರಾಶಿಯಿಂದ ತಾವು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಜನರು ಸಾಕಷ್ಟು ಮಾಹಿತಿಗಳನ್ನು ನೀಡಿದ್ದಾರೆ. ನ್ಯಾಯ ನಮ್ಮ ಪರವಾಗಿರಲಿದೆ ಎನ್ನುವ ವಿಶ್ವಾಸ ಇದೆ ಎಂದರು.

ಸ್ಥಳೀಯರ ಪ್ರವೇಶ ನಿರ್ಬಂಧ:
ನ್ಯಾಯಾಧೀಶರು ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಂದಿದ್ದ ಸ್ಥಳೀಯರನ್ನು ಕಸ ವಿಲೇವಾರಿ ಘಟಕಕ್ಕೆ ಪ್ರವೇಶ ನೀಡದೆ ಪೊಲೀಸರು ಗೇಟ್ನಲ್ಲಿಯೇ ತಡೆದಿದ್ದರು.

ಸಾಲುಗಟ್ಟಿ ನಿಂತ ಲಾರಿಗಳು

ನ್ಯಾಯಾಧೀಶರು ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬುಧವಾರ ಭೇಟಿ ನೀಡಿದ್ದರಿಂದ ಬಿಬಿಎಂಪಿ ವ್ಯಾಪ್ತಿಯಿಂದ ಕಸ ತುಂಬುಕೊಂಡ ಬಂದಿದ್ದ ನೂರಾರು ಲಾರಿಗಳನ್ನು ಕಸ ವಿಲೇವಾರಿ ಘಟಕದ ಒಳಗೆ ಹೋಗದಂತೆ ತಡೆಯಲಾಗಿತ್ತು. ಹಾಗಾಗಿ ಕಸ ವಿಲೇವಾರಿ ಘಟಕಕ್ಕೆ ಹೋಗುವ ಗುಂಡ್ಲಹಳ್ಳಿ ಸಮೀಪದ ರಸ್ತೆಯುದ್ದಕ್ಕೂ ಮಧ್ಯಾಹ್ನ 2 ಗಂಟೆವರೆಗೂ ಸಾಲುಗಟ್ಟಿ ನಿಂತಿದ್ದವು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]