CM, DCM wearing masks Running situation: B.Y. Vijayendra

ರಾಜ್ಯದಲ್ಲಿ ದರಿದ್ರ ಕಾಂಗ್ರೆಸ್ ಸರಕಾರದಿಂದ ಬೆಲೆ ಏರಿಕೆ; ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ.

ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದರು.

ಇವರ ಹುಳುಕನ್ನು ಮುಚ್ಚಿ ಹಾಕಲು ಪದೇಪದೇ ಕೇಂದ್ರ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ಕಡೆ ಪುಕ್ಕಟೆ ವಿದ್ಯುತ್ ಎನ್ನುತ್ತಾರೆ.

ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. 3 ಫೇಸ್ ವಿದ್ಯುತ್ತನ್ನು 7 ತಾಸು ಕೊಡಲು ಸರಕಾರಕ್ಕೆ ಆಗುತ್ತಿಲ್ಲ. ಮತ್ತೊಂದು ಕಡೆ ಪಿಡಬ್ಲ್ಯುಡಿ ಮತ್ತಿತರ ಇಲಾಖೆಗಳು 6500 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ.

ಜನರಿಗೆ ಬರೆ ಎಳೆಯುವ ಸರಕಾರದ ಕ್ರಮ ಅಕ್ಷಮ್ಯ ಅಪರಾಧ. ಇದನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.

ಪ್ರಶ್ನೆಗೆ ಉತ್ತರ ನೀಡಿದ ಅವರು, ಸ್ಮಾರ್ಟ್ ಮೀಟರ್, ವಿದ್ಯುತ್ ದರ ಏರಿಕೆ, ಮೆಟ್ರೋ ದರ ಮತ್ತಿತರ ಬೆಲೆ ಏರಿಕೆ ಮತ್ತಿತರ ವಿಚಾರವನ್ನು ಚರ್ಚಿಸಲು ಸರಕಾರಕ್ಕೆ ಪುರುಸೊತ್ತಿಲ್ಲ; ಅಲ್ಪಸಂಖ್ಯಾತರ ಓಲೈಕೆ ಮಾಡಲು ಹೊರಟಿದೆ ಎಂದು ಆಕ್ಷೇಪಿಸಿದರು.

ಮೇಕೆ ದಾಟು ಎಂದು ತಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಏನ್ಮಾಡಿದ್ದಾರೆಂದು ಡಿ.ಕೆ.ಶಿವಕುಮಾರರನ್ನು ಪ್ರಶ್ನಿಸಬೇಕಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅಧಿಕಾರದ ಮದ, ಭ್ರಮೆ ಇವರ ನೆತ್ತಿಗೇರಿದೆ. ಹೇಳಿ ಕೇಳಿ ಡಿಕೆ ಶಿವಕುಮಾರ್ ಅವರು ದೇಶದ ಎರಡನೇ ಅತಿ ಶ್ರೀಮಂತ ಶಾಸಕ ಎಂದು ವ್ಯಂಗ್ಯವಾಡಿದರು.

ಇದು ಪಿಕ್ ಪಾಕೆಟ್ ಸರಕಾರ

ಸಾರ್ವತ್ರಿಕ ಚುನಾವಣೆಯಲ್ಲಿ ಜನರ ಕಿವಿಗೆ ಹೂವು ಮುಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ಜನರಿಗೆ ಮೋಸ, ವಂಚನೆ ಮಾಡುತ್ತಿದ್ದಾರೆ. ನಾಡಿನ ಜನರು ಎಚ್ಚತ್ತುಕೊಳ್ಳಬೇಕಿದೆ. ಇದು ಪಿಕ್ ಪಾಕೆಟ್ ಸರಕಾರ. ಒಂದೆಡೆ ಗ್ಯಾರಂಟಿ ಕೊಡುವುದಾಗಿ ಹೇಳಿಕೊಂಡು ಜನಸಾಮಾನ್ಯರಿಗೆ ಹೊರೆ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ಮುಸಲ್ಮಾನರಿಗೆ ಸರಕಾರಿ ಗುತ್ತಿಗೆಗಳು, ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಮಸೂದೆ ಸದನದಲ್ಲಿ ತರುತ್ತಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು.

ಇದು ಕಾಂಗ್ರೆಸ್ ಸರಕಾರವೇ? ಸಿದ್ದರಾಮಯ್ಯರ ಸರಕಾರವೇ ಅಥವಾ ನಿಜಾಮರ ಆಡಳಿತವೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ ಎಂದು ತಿಳಿಸಿದರು. ಮುಸಲ್ಮಾನರ ಓಲೈಕೆ ಮತ್ತು ರಾಜ್ಯದ ಹಿಂದೂಗಳಿಗೆ ಅವಮಾನ ಮಾಡುವ ಕೆಲಸವನ್ನು ಸಿದ್ದರಾಮಯ್ಯರ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.

ಹಿಂದಿನ ಅವರ ಅವಧಿಯಲ್ಲಿ ಶಾದಿ ಭಾಗ್ಯ ತಂದಿದ್ದಲ್ಲದೆ, ಟಿಪ್ಪು ಜಯಂತಿ ತಂದಿದ್ದರು. ಈಗ ವಕ್ಫ್ ಬಿಲ್ ದುರುಪಯೋಗ ಪಡಿಸಿಕೊಂಡು ಲಕ್ಷ- ಕೋಟಿ ಮೌಲ್ಯದ ಜಮೀನನ್ನು ಕಬಳಿಸುವ ಕೆಲಸಕ್ಕೆ ಕಾಂಗ್ರೆಸ್ ಪುಡಾರಿಗಳು ಹೊರಟಿದ್ದಾರೆ. ಅವರ ರಕ್ಷಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂದು ಆರೋಪಿಸಿದರು. ಹಿಂದೂಗಳಿಗೆ ಮಾಡುವ ಅವಮಾನಕ್ಕೆ ಇವರು ಬೆಲೆ ತೆರಲೇಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!