SSLC Exam From Tomorrow: 14 Exam Centers in Doddaballapura Taluk

ನಾಳೆಯಿಂದ SSLC ಪರೀಕ್ಷೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳ ಮಾಹಿತಿ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳನ್ನು ತಾಲೂಕಿನ 14 ಕೇಂದ್ರಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳಂತೆ, ತಾಲೂಕು ಆಡಳಿತದ ಮಾರ್ಗದರ್ಶನದಲ್ಲಿ ಪಾರದರ್ಶಕತೆಯಿಂದ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ ಬರೆಯಲಿದ್ದಾರೆ.

ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.

ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.

ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.

ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಪರೀಕ್ಷಾ ವೇಳಾಪಟ್ಟಿ

ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮಾ.21-ಪ್ರಥಮಭಾಷೆ (ಕನ್ನಡ), ಮಾ.24-ಗಣಿತ, ಮಾ.26-ಇಂಗ್ಲೀಷ್, ಮಾ.29-ಸಮಾಜ ವಿಜ್ಞಾನ, ಏ.2-ವಿಜ್ಞಾನ, ಏ.4-ತೃತೀಯ ಭಾಷೆ (ಹಿಂದಿ)

ಪರೀಕ್ಷಾ ಕೇಂದ್ರಗಳು

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪ್ರೌಢಶಾಲೆ, ದೊಡ್ಡಬೆಳವಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಲಿಕುಂಟೆಯ ಸರ್ಕಾರಿ ಪ್ರೌಢಶಾಲೆ, ತೂಬಗೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆ.

ಚೆನ್ನವೀರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹೊಸಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಶ್ರೀ ದೇವರಾಜ ಅರಸು ಪ್ರೌಢಶಾಲೆ, ಕಾರ್ಮಲ್ ಜ್ಯೋತಿ ಪ್ರೌಢಶಾಲೆ, ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆ, ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಮೆಳೇಕೋಟೆ ಕ್ರಾಸ್‍ನ ಎಸ್‍ಜೆಸಿಆರ್ ಪ್ರೌಢಶಾಲೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!