ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಂದ್ ಆಚರಣೆ ಇಲ್ಲ

There is no Karnataka Bandh in Doddaballapura

ದೊಡ್ಡಬಳ್ಳಾಪುರ (Doddaballapura): ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಒತ್ತಾಯಿಸಲು, ಮಾರ್ಚ್ 22ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಅಂದು ನಡೆಯುವ ಹೋರಾಟಕ್ಕೆ ದೊಡ್ಡಬಳ್ಳಾಪುರದ ಕನ್ನಡಪರ ಸಂಘಟನೆಗಳಿಂದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಬಂದ್ ಆಚರಿಸದೇ ಇರಲು ನಿರ್ಧರಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿನ ಕನ್ನಡಪರ ಸಂಘಟನೆಗಳ ಮುಖಂಡರ ಅಭಿಪ್ರಾಯದಂತೆ, ಬಂದ್ ಆಚರಿಸದೇ ಪ್ರತಿಭಟನೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಮುಖಂಡರು, ಪ್ರಸ್ತುತ ಎಸ್‍ಎಸ್‍ಎಲ್‍ಸಿ ಹಾಗೂ ಕಾಲೇಜು ಪರೀಕ್ಷೆಗಳು ನಡೆಯುತ್ತಿವೆ. ಬಂದ್‍ನಿಂದಾಗಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುವುದು ಬೇಡ.

ಬೆಳಗಾವಿಯಲ್ಲಿ ಕನ್ನಡ ಮಾತನಾಡಿ ಎಂದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ, ಪಂಚಾಯಿತಿ ಅಭಿವೃದ್ಧಿ ಅಕಾರಿ ಮೇಲೆ ಹಲ್ಲೆ ಪ್ರಕರಣಗಳು ಕನ್ನಡಿಗರ ಸ್ವಾಭಿಮಾನ ಕೆಣಕಿವೆ. ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ಅಪಮಾನವಾಗುತ್ತಿರುವುದು ಖಂಡನೀಯ. ಬೆಳಗಾವಿಯಲ್ಲಿ ಸದಾ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಎಂ.ಇ.ಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು.

ಹಲ್ಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಿ ಎಂ.ಇ.ಎಸ್ ಪುಂಡರನ್ನು ಗಡಿಪಾರು ಮಾಡಬೇಕು. ನಾಡಿನ ನೆಲ ಜನ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ ನಿಲ್ಲಬೇಕು. ಪರಭಾಷಿಕರ ದಬ್ಬಾಳಿಕೆ ನಿಲ್ಲಬೇಕು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರಾಗಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ಹೋರಾಟ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾ.22ರಂದು ಪ್ರತಿಭಟನೆ

ಸಭೆಯ ನಿರ್ಣಯವನ್ನು ಪ್ರಕಟಿಸಿದ ಮುಖಂಡರು, ಮಾ.22ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು.

ಶನಿವಾರ ಸರ್ಕಾರಿ ರಜೆ ಇರುವ ಕಾರಣ ಮಾ.21ರಂದು ಬೆಳಿಗ್ಗೆ 10.30ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಸಮಾವೇಶಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಬಂದ್‍ಗೆ ನಮ್ಮ ಬೆಂಬಲವಿಲ್ಲ. ತಾಲೂಕಿನ ಇತರ ಸಂಘಟನೆಗಳು ಬಂದ್ ಮಾಡಲು ಹೊರಟು, ಯಾವುದೇ ತೊಂದರೆಗಳಾದರೆ ನಮ್ಮ ಸಂಘಟನೆಗಳು ಹೊಣೆಯಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಮುಖಂಡರಾದ ಮುತ್ತೇಗೌಡ, ಸತೀಶ್, ಕನ್ನಡ ಪಕ್ಷದ ವೆಂಕಟೇಶ್, ಮುನಿಪಾಪಯ್ಯ, ಡಾ,ರಾಜ್‍ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪಾಧ್ಯಕ್ಷ ವಿ.ಪರಮೇಶ್, ತಿಮ್ಮರಾಜು, ಮುಖಂಡರಾದ ನಾಗರಾಜ್, ನವೀನ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]