ಶ್ರೀನಗರ: ಶಿಫಾರಸು-ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ಮುಖಂಡ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಅವರು ತುಳಸಿ ಭಾಗ್ ಸರಕಾರಿ ವಸತಿ ಗೃಹದ ಕೊಠಡಿಯಲ್ಲಿ ಗುರುವಾರ ಬೆಳಗ್ಗೆ ತಮ್ಮದೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ದ್ದಾರೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಖಾನ್1996ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು. 2020ರಲ್ಲಿ ಬಿಜೆಪಿ ಸೇರಿದ್ದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೇ ಬೇಸರಗೊಂಡಿದ್ದರು.
ಖಾನ್ ಆತ್ಮಹತ್ಯೆ ದುರದೃಷ್ಟಕರ. ಬಹಳ ನೋವಿನ ಸಂಗತಿ ಎಂದು ಜಮ್ಮು-ಕಾಶ್ಮೀರ ಬಿಜೆಪಿ ವಕ್ತಾರ ಅಲ್ತಾಫ್ ಠಾಕೂರ್ ನೋವಿನಿಂದ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.