ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

Doddaballapur: SSLC exam.. The scoundrels who got rid of the CCTV

ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳು ತಾಲೂಕಿನ 14 ಕೇಂದ್ರಗಳಲ್ಲಿ ಆರಂಭವಾಗಿದೆ.

ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ

ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.

ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.

ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.

ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಸಿಸಿಟಿವಿ ಕಿತ್ತೆಸೆದ ಕಿಡಿಗೇಡಿಗಳು

ಎಸ್ ಎಸ್ ಎಲ್ ಸಿ ಪರೀಕ್ಷೆ ದಿನವೇ ಕಿಡಿಗೇಡಿಗಳ ಅವಾಂತರ ಸೃಷ್ಟಿಸಿದ್ದಾರೆ.

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾ ಕೆತ್ತೆಸೆದಿದ್ದಾರೆ.

ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಕೊಠಡಿಗಳ ಬಾಗಿಲು ಮುರಿದು ಆರು ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತೆಸೆದಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜ್, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]