ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

Space for setting up jewelery park near Devanahalli: MB Patila

ಬೆಂಗಳೂರು: ಆಭರಣ ರಫ್ತಿಗೆ ಉತ್ತೇಜನ ನೀಡಲು ಸರ್ಕಾರ ಒತ್ತು ನೀಡಲಿದ್ದು, ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಜಾಗ ನೀಡಲು ರಾಜ್ಯ ಸರ್ಕಾರ ಮುಕ್ತವಾಗಿದ್ದು, ಇದನ್ನು ಆಭರಣ ಉದ್ಯಮಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (MB Patila) ಶುಕ್ರವಾರ ಹೇಳಿದರು.

ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳಕ್ಕೆ ಅವರು ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಆಭರಣಗಳ ರಫ್ತಿಗೆ ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಬೇಕು ಎಂದರು.

ಸುಸ್ಥಿರತೆಗೆ ಒತ್ತು ನೀಡುವ ದಿಸೆಯಲ್ಲಿ ‘ನೆಟ್ ಜೀರೋ ಜ್ಯುವೆಲ್ಲರಿ ಪಾರ್ಕ್’ ನಿರ್ಮಿಸಲು ಹಿತಾಸಕ್ತಿದಾರರು ಗಮನ ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

Space for setting up jewelery park near Devanahalli: MB Patila
Space for setting up jewelery park near Devanahalli: MB Patila

ಇದೇ 24ರವರೆಗೆ ನಡೆಯಲಿರುವ ದೇಶದ ಮೂರನೇ ಅತಿದೊಡ್ಡ ಚಿನ್ನಾಭರಣ ಮೇಳವನ್ನು ಮುಂಬರುವ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ದಿ ಜೆಮ್ ಅಂಡ್ ಜ್ಯೂವೆಲರಿ ಎಕ್ಸ್ಪೋರ್ಟ್ ಪ್ರಮೋಶನ್ ಕೌನ್ಸಿಲ್ ಏರ್ಪಡಿಸಿದೆ.

ವಿಶ್ವ ದರ್ಜೆಯ ಮೂಲಸೌಕರ್ಯ, ಪುರೋಗಾಮಿ ನೀತಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರನ್ನು ಹೊಂದಿರುವ ರಾಜ್ಯವು ಆಭರಣ ತಯಾರಿಕೆ ಮತ್ತು ರಫ್ತು ವಹಿವಾಟಿಗೆ ಪ್ರಶಸ್ತ ತಾಣವಾಗಿದೆ.

ಇದಕ್ಕೆ ಪೂರಕವಾಗಿ, ಉಡುಪಿಯಲ್ಲಿ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ ಅಂಡ್ ಜ್ಯೂವೆಲ್ಲರಿ ಸಂಸ್ಥೆಯು ಆಭರಣ ಕುಶಲಕರ್ಮಿಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಸಚಿವರು ವಿವರಿಸಿದರು.

ದೇಶದಲ್ಲಿ ವಾರ್ಷಿಕ 32 ಬಿಲಿಯನ್ ಡಾಲರ್ ಮೊತ್ತದ ಆಭರಣ ವಹಿವಾಟು ನಡೆಯುತ್ತಿದೆ. ಮುಖ್ಯವಾಗಿ ಇಲ್ಲಿಂದ ಅಮೆರಿಕ, ಅರಬ್ ಸಂಯುಕ್ತ ಸಂಸ್ಥಾನ, ರಷ್ಯಾ, ಸಿಂಗಪುರ್ ಮತ್ತು ಹಾಂಕಾಂಗ್ ಮಾರುಕಟ್ಟೆಗೆ ಹೆಚ್ಚಿನ ಆಭರಣಗಳನ್ನು ಕಳುಹಿಸಲಾಗುತ್ತಿದೆ.

ಉಡುಪಿಯಲ್ಲಿರುವ ಕಾಮನ್ ಫೆಸಿಲಿಟಿ ಸೆಂಟರ್ ಐದು ವರ್ಷಗಳ ಹಿಂದೆ 55 ವಿದ್ಯಾರ್ಥಿಗಳನ್ನು ಹೊಂದಿತ್ತು. ಈಗ ಅಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಿಗೆ ಹೊಸ ಬಗೆಯ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಯುವಜನರಿಗೆ ಆದ್ಯತೆ ನೀಡಲಾಗಿದೆ ಎಂದು ಪಾಟೀಲ ಅವರು ತಿಳಿಸಿದರು.

ಪ್ರಸ್ತುತ ಮೇಳದಲ್ಲಿ ಆಭರಣ ವಲಯದ 80 ಪ್ರಮುಖ ಕಂಪನಿಗಳು ಪಾಲ್ಗೊಂಡಿವೆ. ಇವು ಹೊಸ ಬಗೆಯ ಯಂತ್ರೋಪಕರಣಗಳು, ತಂತ್ರಜ್ಞಾನ ಮತ್ತು ಪ್ಯಾಕೇಜಿಂಗ್ ಬಗ್ಗೆ ಗಮನ ಕೇಂದ್ರೀಕರಿಸಿವೆ. ಜತೆಗೆ ಭಾರತದ 15 ಸಾವಿರ ಮತ್ತು ವಿದೇಶಗಳ 300ಕ್ಕೂ ಹೆಚ್ಚು ಆಭರಣ ಖರೀದಿದಾರರು ಭಾಗವಹಿಸುತ್ತಿದ್ದಾರೆ.

ಈಗ ಹೊಸ ಬಗೆಯ ವಿನ್ಯಾಸಗಳ ಆಭರಣಗಳಿಗೆ ಇರುವ ಬೇಡಿಕೆಯನ್ನು ತಿಳಿಸಿದರೆ, ಅಂತಹ ವಿನ್ಯಾಸಗಳನ್ನು ಅಕ್ಷಯ ತೃತೀಯ ವೇಳೆಗೆ ಸಿದ್ಧಪಡಿಸಿ, ವ್ಯಾಪಾರಿಗಳಿಗೆ ಪೂರೈಸಲಾಗುವುದು ಎಂದರು.

ರಾಜ್ಯವು ಉದ್ಯಮಸ್ನೇಹಿ ಮತ್ತು ರಫ್ತುಕೇಂದ್ರಿತ ಹೊಸ ಕೈಗಾರಿಕಾ ನೀತಿಯನ್ನು ಹೊಂದಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕವು ಜಿ.ಎಸ್.ಟಿ. ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಇದಲ್ಲದೆ, ಉದ್ಯಮ ಬೆಳವಣಿಗೆಗೆ ಸಂಬಂಧಿಸಿದ ಇನ್ನೂ ಕೆಲವಾರು ಸೂಚ್ಯಂಕಗಳಲ್ಲಿ ರಾಜ್ಯವು ಮೇಲ್ಪಂಕ್ತಿಯಲ್ಲಿದೆ.

2033ರ ವೇಳೆಗೆ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿದ್ದು, ಅದಕ್ಕಾಗಿ ಈಗಾಗಲೇ ಕಾರ್ಯ ಆರಂಭವಾಗಿದೆ. ಹೀಗಾಗಿ, ಜವಳಿ ಉದ್ದಿಮೆದಾರರು ರಾಜ್ಯದಲ್ಲಿ ಹೂಡಿಕೆ ಮಾಡುವತ್ತ ಗಮನ ಹರಿಸಬೇಕು.

ಈ ವಲಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನೂ ಸರಕಾರವು ಒದಗಿಸಲಿದೆ ಎಂದು ಬೆಂಬಲದ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಅಧ್ಯಕ್ಷ ಕಿರೀಟ್ ಭನ್ಸಾಲಿ, ಸಂಚಾಲಕ ನೀರವ್ ಭನ್ಸಾಲಿ, ದಕ್ಷಿಣ ಭಾರತದ ಅಧ್ಯಕ್ಷ ಮಹೇಂದ್ರ ತಾಯಲ್, ಕಾರ್ಯಕಾರಿ ನಿರ್ದೇಶಕ ಸವ್ಯಸಾಚಿ ರಾಯ್, ಚೇತನ್ ಮೆಹತಾ, ಶ್ರೀಕಾಂತ್ ಕಾರಿ, ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಪ್ರಮುಖ ಆಭರಣೋದ್ಯಮಿಗಳಾದ ಬಿ ಎ ರಮೇಶ್, ಎ ಬಿ ಎಸ್ ಸಂಜಯ್ ಉಪಸ್ಥಿತರಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]