ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯ: ಆರ್‌.ಅಶೋಕ

Suspension of BJP MLAs is condemnable: R. Ashoka

ಬೆಂಗಳೂರು: ನ್ಯಾಯಕ್ಕಾಗಿ ಆಗ್ರಹಿಸಿದ ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್‌ನ ದುರುಳ ನೀತಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಚಿವ ರಾಜಣ್ಣ ಅವರು ಹನಿಟ್ರ್ಯಾಪ್‌ ಆಗಿದೆ ಎಂದಾಗ, ಕಾಂಗ್ರೆಸ್‌ನ ಇತರೆ ಸಚಿವರಿಗೆ, ಮುಖ್ಯಮಂತ್ರಿಗೆ ಅದು ಅಶ್ಲೀಲ ಎಂದು ಅನ್ನಿಸಲೇ ಇಲ್ಲ.

ಹಿಂದೆ ಶಾಸಕರು ಮೊಬೈಲ್‌ ನೋಡಿದ್ದಕ್ಕೆ ಕಾಂಗ್ರೆಸ್‌ನವರು ಎದ್ದು ಕುಣಿದಿದ್ದರು. ಆದರೆ ಹನಿಟ್ರ್ಯಾಪ್‌ ಅಶ್ಲೀಲ ಎಂದು ಅನಿಸಿಲ್ಲ. ಸದನಕ್ಕೆ ಗೌರವ ಇರಲಿ ಎಂದು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದೇವೆ. ಹನಿಟ್ರ್ಯಾಪ್‌ ಆಗಿರುವುದು ತಮ್ಮ ಪಕ್ಷದ ನಾಯಕರಿಂದಲೇ ಎಂದು ಹೇಳಿದರೂ ಸರ್ಕಾರ ಸುಮ್ಮನಿದೆ ಎಂದು ದೂರಿದರು.

ಬಿಜೆಪಿ ಶಾಸಕರು ನ್ಯಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರ ಮೇಲೆ ಸ್ಪೀಕರ್‌ ಯು.ಟಿ.ಖಾದರ್‌ ಗದಾ ಪ್ರಹಾರ ಮಾಡಿರುವುದು ಯಾವ ನ್ಯಾಯ? ಯಾವ ಮುಖ ಇಟ್ಟುಕೊಂಡು ಸಚಿವರು ಸದನಕ್ಕೆ ಬಂದಿದ್ದಾರೆ? 18 ಶಾಸಕರನ್ನು ಅಮಾನತು ಮಾಡಿರುವುದು ಅನ್ಯಾಯ.

ಸ್ಪೀಕರ್‌ಗೆ ನಾವು ಯಾವುದೇ ಅನ್ಯಾಯ ಮಾಡಿಲ್ಲ. ನಾವು ನ್ಯಾಯ ಕೇಳಿದ್ದೇವೆ. ಸ್ಪೀಕರ್‌ರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಇದು ಕಾಂಗ್ರೆಸ್‌ನ ದುರುಳ ನೀತಿ. ಅವರು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ ಎಂದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸುತ್ತೇವೆ. ಇದು ಸದನಕ್ಕೆ ಅಗೌವರ. ನ್ಯಾಯಾಂಗ ತನಿಖೆಗೆ ಆಗ್ರಹಿಸುವುದು ಗೂಂಡಾಗಿರಿ ಆಗುತ್ತದೆಯೇ? ಕಾಂಗ್ರೆಸ್‌ನ ಏಜೆಂಟರಂತೆ ಸ್ಪೀಕರ್‌ ಕೆಲಸ ಮಾಡುತ್ತಿದ್ದಾರೆ ಎಂದರು.

ಗುತ್ತಿಗೆ ಮೀಸಲಾತಿ ಮಸೂದೆ ಅಸಂವಿಧಾನಿಕ

ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮಸೂದೆ ಸಂವಿಧಾನ ವಿರೋಧಿ. ಧರ್ಮದ ಆಧಾರದ ಮೇಲೆ ಯಾವುದೇ ರೀತಿಯ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಅಂಬೇಡ್ಕರ್ ಅವರ ಸಂವಿಧಾನ ಎಲ್ಲ ಧರ್ಮಗಳು ಒಟ್ಟಿಗೆ ಹೋಗಬೇಕು ಎನ್ನುವ ಆಶಯ ಹೊಂದಿದ್ದರೆ, ಈ ಮಸೂದೆ ಸಮಾಜವನ್ನ ಒಡೆಯುವ ಬಿಲ್ ಆಗಿದೆ.

ಕಾಂಗ್ರೆಸ್ ಪಕ್ಷ ಈಗಾಗಲೇ ಒಂದು ಬಾರಿ ದೇಶವನ್ನ ವಿಭಜನೆ ಮಾಡಿದೆ. ಈಗ ವೋಟಿನ ರಾಜಕಾರಣಕ್ಕೆ ಮತ್ತೂಮ್ಮೆ ಒಂದು ಸಮುದಾಯದ ಓಲೈಕೆ ಮಾಡಲು ಹೊರಟಿದೆ.

ಈ ಮಸೂದೆ ಹಿಂದೂಗಳ ಭಾವನೆಗೆ ದಕ್ಕೆ ತರುವುದರ ಜೊತೆಗೆ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ಸಮುದಾಯಗಳಿಗೆ ಸೇರಿದ ಗುತ್ತಿಗೆದಾರರ ಹಕ್ಕನ್ನು ಕಸಿದುಕೊಳ್ಳಲ್ಲಿದೆ ಎಂದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]