Kaveri Aarti in Bengaluru

ಬೆಂಗಳೂರಿನಲ್ಲಿ ಮನಸೆಳೆದ ಕಾವೇರಿ ಆರತಿ

ಬೆಂಗಳೂರು: ವಿಶ್ವಜಲದಿನದ ಅಂಗವಾಗಿ ಮಲ್ಲೇಶ್ವರದ ಸ್ಯಾಂಕಿ ಕೆರೆ ಆವರಣದಲ್ಲಿ ಇದೇ ಮೊದಲ ಬಾರಿಗೆ ನಡೆದ ‘ಕಾವೇರಿ ಆರತಿ’ಗೆ (Kaveri) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಸಚಿವ ರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವರ ಸಮ್ಮುಖದಲ್ಲಿ ಚಾಲನೆ ದೊರೆಯಿತು. ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಲ್ಲಿ ಕಾವೇರಿ ಆರತಿ ನಡೆಯಿತು.

ನೀರಿನ ಜಾಗೃತಿ ಮೂಡಿಸುವ ಹಾಗೂ ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಆಯೋಜಿಸಿದ್ದ ಕಾವೇರಿ ಆರತಿ ಅದ್ದೂರಿಯಾಗಿ ನೆರವೇರಿತು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಭಾಗ ಮಂಡಲದಿಂದ ತಂದ ಕಾವೇರಿ ಜಲಕ್ಕೆ ಕಾಡುಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಯಿತು.

ಈ ವೇಳೆ ಗಂಗಾದೇವಿಗೆ ಹೋಮ ಸಲ್ಲಿಸಲಾಯಿತು. ಬಳಿಕ 108 ಕಲಶಗಳೊಂದಿಗೆ ಮೆರವಣಿಗೆ ಮೂಲಕ ಸ್ಯಾಂಕಿ ಕೆರೆಗೆ ತರಲಾಯಿತು.

ಕಾವೇರಿ ಮಾತೆಗೆ ಡಿಸಿಎಂ ಡಿ.ಕೆ ಶಿವ ಕುಮಾರ್ ವಿಶೇಷ ಪೂಜೆ ನೆರವೇರಿಸಿದರು. ಸ್ಯಾಂಕಿ ಕೆರೆಯ ತೇಲುವ ವೇದಿಕೆಯಲ್ಲಿ ವಾರಾಣಸಿಯ ಪ್ರಸಿದ್ದ ತಂಡದಿಂದ ಕಾವೇರಿ ಆರತಿ ಮೂಲಕ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿತು.

ಗಾಯಕಿ ಅನನ್ಯಾ ಭಟ್, ರಘು ದೀಕ್ಷಿತ್ ತಂಡದಿಂದ ಸಂಗೀತ ಕಾರ್ಯಕ್ರಮ ನಡೆದರೆ, 3ಡಿ ಮ್ಯಾಪಿಂಗ್ ಮಾದರಿಯಲ್ಲಿ ವಿದ್ಯುತ್‌ ಅಲಂಕಾರವಿತ್ತು.

ಡಿ.ಕೆ. ಶಿವಕುಮಾರ್ ಮಾತನಾಡಿ, ನೀರಿಲ್ಲದೇ ನಾವಿಲ್ಲ. ನೀರೇ ನಾಗರಿಕತೆ- ನೀರಿಂದಲೇ ಧರ್ಮ. ಬರಗಾಲ ಬಂದಾಗ, ಬಾವಿ ಒಣಗಿದಾಗ ನೀರಿನ ಮಹತ್ವ ನಮಗೆ ತಿಳಿಯುತ್ತದೆ. ಬೆಂಗಳೂರಿಗೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬರಬಾರದೆಂದು ಪ್ರಾರ್ಥನೆ ಮಾಡಲು, ದೇಶದ ಇತಿಹಾಸ- ಸಂಸ್ಕೃತಿ ಉಳಿಸಲು ಈ “ಕಾವೇರಿ ಆರತಿ” ಮಾಡಿದ್ದೇವೆ.

ಕೆಆರ್‌ಎಸ್‌ನಲ್ಲಿ ದಸರಾ ವೇಳೆಗೆ “ಕಾವೇರಿ ಆರತಿ” ಮಾಡಲು ತೀರ್ಮಾನಿಸಿದ್ದೇವೆ. ಇದಕ್ಕೊಂದು ಸಮಿತಿ ರಚಿಸಿದ್ದೇವೆ.

ಜಲಮಾತೆಗೆ ನಮನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಯಾಕೆಂದರೆ, “ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆ ವಿಫಲವಾಗುವುದಿಲ್ಲ.”

ಐತಿಹ್ಯವಿರುವ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು ಕಾವೇರಿ ಮಾತೆಗೆ ಆರತಿ ಬೆಳಗಿ, ಅಲ್ಲಿ ನೆರೆದಿದ್ದವರೊಂದಿಗೆ ಜಲಸಂರಕ್ಷಣೆಯ ಸಂಕಲ್ಪ ಕೈಗೊಂಡೆ.‌ ಸಾರ್ವಜನಿಕರೆಲ್ಲರೂ ಈ ಪ್ರತಿಜ್ಞೆ ಸ್ವೀಕರಿಸಿ, ನೀರಿನ ಸಂರಕ್ಷಣೆಯ ಪಣ ತೊಡಿ.

ಇಂದು ಕಾವೇರಿ ಆರತಿ, ಅದು ಅನುದಿನವೂ ಜಲಜಾಗೃತಿಯಾಗಲಿ ಎಂದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!