Vijayendra appeal to Withdraw Suspension Order of 18 Legislators

18 ಶಾಸಕರ ಅಮಾನತು ಆದೇಶ ಹಿಂಪಡೆಯಲು ವಿಜಯೇಂದ್ರ ಮನವಿ

ಬೆಂಗಳೂರು: ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ತಿಳಿಸಿದ್ದಾರೆ.

18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ ಎಂದು ಆಕ್ಷೇಪಿಸಿದರು. ಸ್ಪೀಕರ್ ಅವರು ಶಾಸಕರು ಮಾತ್ರವಲ್ಲ ಕ್ಷೇತ್ರದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಖಂಡಿಸಿದರು.

ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಮೀಸಲಾತಿ ಕೊಟ್ಟ ಸರಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು. ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ನಡೆಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಘೋಷಿಸಿದರು.

ಹಿಂದೂಗಳಲ್ಲಿ ಹಾಗಿದ್ದರೆ ಬಡವರೇ ಇಲ್ಲವೇ

ನಮ್ಮ ಸಂವಿಧಾನದಲ್ಲಿ ಧರ್ಮ ಆಧರಿತ ಮೀಸಲಾತಿ ಕೊಡಲು ಅವಕಾಶವಿಲ್ಲ; ಇದರ ನಡುವೆ ಮೀಸಲಾತಿ, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ 20 ಲಕ್ಷ ಬದಲು 30 ಲಕ್ಷ ಕೊಡುವುದಾಗಿ ತಿಳಿಸುವುದು, ಮುಸ್ಲಿಂ ಹೆಣ್ಮಕ್ಕಳಿಗೆ ಆತ್ಮರಕ್ಷಣೆ ಕಲೆಗೆ ಸಂಬಂಧಿಸಿ ಬಜೆಟ್‍ನಲ್ಲಿ ಹಣ ಮೀಸಲಿಟ್ಟಿರುವುದು ಸರಿಯೇ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು.

ಹಿಂದೂಗಳಲ್ಲಿ ಹಾಗಿದ್ದರೆ ಬಡವರೇ ಇಲ್ಲವೇ ಎಂದು ಕೇಳಿದರು. ಅವರಿಗೆ ಹೊರದೇಶಕ್ಕೆ ಉನ್ನತ ಶಿಕ್ಷಣಕ್ಕೆ ಹೋಗುವ ಕನಸುಗಳಿಲ್ಲವೇ ಎಂದರು.

ರಾಜ್ಯ- ದೇಶದಲ್ಲಿ ಹಿಂದೂ ಹೆಣ್ಮಕ್ಕಳು ಲವ್ ಜಿಹಾದ್‍ಗೆ ಬಲಿ ಆಗುತ್ತಿದ್ದಾರೆ. ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ ಅಸಾಂವಿಧಾನಿಕ ಎಂದು ಟೀಕಿಸಿದರು. ಧರ್ಮ ಆಧಾರಿತ ಮೀಸಲಾತಿ ಕೊಡಲಾಗದು ಎಂದು ಸಂವಿಧಾನ ಸ್ಪಷ್ಟವಾಗಿ ತಿಳಿಸಿದೆ. ಇದನ್ನು ನಾವು ವಿರೋಧಿಸುತ್ತಿದ್ದೇವೆ ಎಂದು ವಿವರಿಸಿದರು.

ಈ ಸಂಬಂಧ ಸುಪ್ರೀಂ ಕೋರ್ಟ್ ಸೇರಿ ವಿವಿಧ ಕೋರ್ಟ್‍ಗಳ ತೀರ್ಪನ್ನೂ ಉಲ್ಲೇಖಿಸಿದರು. ಈ ತೀರ್ಪುಗಳು ನಮ್ಮ ಅನುಭವಿ ಮುಖ್ಯಮಂತ್ರಿಗಳಿಗೆ ತಿಳಿದಿದೆ. ಇದು ಸಂವಿಧಾನ ವಿರೋಧಿ ಎಂಬುದು ಗೊತ್ತಿದ್ದರೂ ನಾಡಿನ ಹಿಂದೂಗಳ ಮೇಲೆ ದೌರ್ಜನ್ಯ- ಅವಮಾನ ಮಾಡುವ ನಿರ್ಧಾರ ಖಂಡಿತ ಅಕ್ಷಮ್ಯ ಅಪರಾಧ ಎಂದು ತಿಳಿಸಿದರು.

ಹೋರಾಟದ ಕುರಿತು ಪಕ್ಷದ ಮುಖಂಡರ ಜೊತೆ ಚರ್ಚಿಸಿದ್ದೇವೆ. ಅತಿ ಶೀಘ್ರದಲ್ಲಿ ಹೋರಾಟದ ರೂಪುರೇಷೆಯನ್ನು ಪ್ರಕಟಿಸುತ್ತೇವೆ. ಸದನದಲ್ಲಿ ಹಗಲು- ರಾತ್ರಿ ಧರಣಿ ಬಗ್ಗೆ ಚರ್ಚೆ ನಡೆದಿದೆ. ಜಿಲ್ಲೆಗಳಲ್ಲಿ ಸೋಮವಾರದಿಂದ ಹೋರಾಟ ನಡೆಯಲಿದೆ. ರಾಜ್ಯದಲ್ಲಿ ಜನಜಾಗೃತಿ ಮೂಡಿಸುವ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸ್ಪೀಕರ್ ಅವರು ಯಾವ ಕಾರಣಕ್ಕಾಗಿ ನಮ್ಮ 18 ಶಾಸಕರನ್ನು ಅಮಾನತುಗೊಳಿಸುವ ನಿರ್ಧಾರ ಘೋಷಿಸಿದ್ದಾರೆ? ಎಂದ ಅವರು, ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರಕಾರವು ಈ ರಾಜ್ಯದಲ್ಲಿರುವ ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ನೀಡುವ ತೀರ್ಮಾನ ಕೈಗೊಂಡಿದೆ.

ಬಜೆಟ್‍ನಲ್ಲೂ ಅಲ್ಪಸಂಖ್ಯಾತರ ಓಲೈಕೆ

ಹಿಂದೂಗಳನ್ನು ಅವಮಾನಿಸುವ ಅನೇಕ ಘೋಷಣೆ ಮಾಡಿದ್ದಾರೆ. ಹಿಂದೂ ವಿರೋಧಿ ನೀತಿಗಳನ್ನು ಸಿದ್ದರಾಮಯ್ಯನವರು ಅನುಸರಿಸುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ನಿರಂತರ ಹೋರಾಟ ಮಾಡುತ್ತ ಬಂದಿದ್ದೇವೆ ಎಂದರು.

18 ಶಾಸಕರು ಹಾಗಿದ್ದರೆ ಭಯೋತ್ಪಾದಕರೇ?

ಸ್ಪೀಕರ್ ಅವರು ನಮ್ಮ ರಕ್ಷಣೆಗೆ ಬರಬೇಕಿತ್ತು. 6 ತಿಂಗಳು 18 ಜನಪ್ರತಿನಿಧಿಗಳನ್ನು ಅಮಾನತು ಮಾಡುವ ಸ್ಪೀಕರ್ ಅವರ ನಡೆಯು ಸರಿಯಲ್ಲ. ಅಮಾನತಾದವರು ವಿಧಾನಸಭಾ ಲಾಬಿ, ಸಭಾಂಗಣ ಪ್ರವೇಶಿಸುವಂತಿಲ್ಲ ಎಂದಿದ್ದಾರೆ. ಹಾಗಿದ್ದರೆ ಅವರು ಭಯೋತ್ಪಾದಕರೇ, ನಕ್ಸಲೈಟರೇ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು.

ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದು ಶಾಸಕರ ಹಕ್ಕು ಮೊಟಕುಗೊಳಿಸುವ, ಹಕ್ಕು ಕಿತ್ತುಕೊಳ್ಳುವ ಕಾರ್ಯ ಎಂದು ಆಕ್ಷೇಪಿಸಿದರು. ಕ್ಷೇತ್ರಾಭಿವೃದ್ಧಿಗೆ ಎರಡು ಕಾಸು ಬಿಡುಗಡೆ ಮಾಡುವ ಯೋಗ್ಯತೆ ಸರಕಾರಕ್ಕೆ ಇಲ್ಲ; ಸ್ಪೀಕರ್ ಆದೇಶ ಅಸಾಂವಿಧಾನಾತ್ಮಕ, ಮನಸೋಇಚ್ಛೆಯದು ಎಂದು ಆರೋಪಿಸಿದರು.

ನಿನ್ನೆ ನಮ್ಮ ಶಾಸಕರು ಬಾವಿಗಿಳಿದು ಹೋರಾಟ ನಡೆಸುತ್ತಿರುವಾಗ ಏಕಾಏಕಿಯಾಗಿ ಅಮಾನತು ಮಾಡಿದ್ದು ಸಂಪೂರ್ಣ ಕಾನೂನುಬಾಹಿರ ಎಂದು ಟೀಕಿಸಿದರು.

ಸಂವಿಧಾನದ ಬಗ್ಗೆ ಪಾಠ ಹೇಳುವ, ಪದೇಪದೇ ಡಾ. ಅಂಬೇಡ್ಕರರ ಹೆಸರು ದುರುಪಯೋಗ ಪಡಿಸಿಕೊಳ್ಳುವ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡರು ಬಜೆಟ್‍ನಲ್ಲಿ ತೆಗೆದುಕೊಂಡ ನಿರ್ಧಾರಗಳು ಕೇವಲ ಅಲ್ಪಸಂಖ್ಯಾತರ ಓಲೈಕೆಯಷ್ಟೇ ಅಲ್ಲ; ಹಿಂದೂಗಳನ್ನು ಅಪಮಾನಿಸುವ ನಿರ್ಧಾರ ಎಂದು ದೂರಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಹನಿಟ್ರ್ಯಾಪ್ ಕುರಿತ ಸಚಿವರ ಹೇಳಿಕೆ- ಮುಸ್ಲಿಮರಿಗೆ ಸಂವಿಧಾನವಿರೋಧಿಯಾಗಿ ಮೀಸಲಾತಿ ವಿಚಾರ ಮುಂದಿಟ್ಟು ನಾವು ಹೋರಾಟ ಮಾಡಿದ್ದೇವೆ. ಸ್ಪೀಕರ್ ನಡವಳಿಕೆ ತುಘಲಕ್ ದರ್ಬಾರ್‍ನಂತಿದೆ; ಹಿಟ್ಲರ್ ಸಂಸ್ಕೃತಯನ್ನು ನಾವು ನೋಡುತ್ತಿದ್ದೇವೆ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಬೂಟುಗಾಲು ಹಾಕಿ ಬಾಗಿಲು ಒದ್ದು ಹಾಕಿದ್ದು, ಜಮೀರ್ ಅಹ್ಮದ್ ಸ್ಪೀಕರ್ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆಸಿದ್ದನ್ನು ಸದನದಲ್ಲಿ ನೋಡಿದ್ದೇವೆ ಎಂದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಪರಿಷತ್ತಿನಲ್ಲಿ ಪಕ್ಷಗಳ ಬಲ, ಮೇಲ್ಮನೆಯಲ್ಲಿ ಹೋರಾಟ ಕುರಿತು ಮಾಹಿತಿ ನೀಡಿದರು. ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!