Doddaballapura: ದೇಶವನ್ನು ಕ್ಷಯ ಮುಕ್ತವಾಗಿಸಲು ಜನ ಜಾಗೃತಿ ಅಗತ್ಯ

Doddaballapura: Public awareness is necessary to make the country free from tuberculosis

ದೊ॑ಡ್ಡಬಳ್ಳಾಪುರ (Doddaballapura); ದೇಶವನ್ನು ಕ್ಷಯ ಮುಕ್ತ ದೇಶವನ್ನಾಗಿಸಲು ಗ್ರಾಮ ಪಂಚಾಯಿತಿಗಳಿಂದ ಹಿಡಿದು ನಗರ ಪ್ರದೇಶ ಸೇರಿದಂತೆ ಎಲ್ಲರಲ್ಲೂ ಜಾಗೃತಿ ಮೂಡಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಲೆಕ್ಕ ಕೃಷ್ಣಾರೆಡ್ಡಿ ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕದ ವತಿಯಿಂದ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷಯರೋಗದಿಂದ ಗುಣವಾಗಿರುವ ಟಿ.ಬಿ ಚಾಂಪಿಯನ್ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಇವರು ಹೊಸ ಕ್ಷಯ ರೋಗಿಗಳಿಗೆ ಮನೋಸ್ಥರ‍್ಯ ನೀಡಿ ಚಿಕಿತ್ಸೆ ಪರ‍್ಣವಾಗಿ ಪಡೆಯಲು ಮನವೊಲಿಸಲಿದ್ದಾರೆ.

ಕ್ಷಯ ರೋಗವು ಗಾಳಿಯಲ್ಲಿ ಬಹುಬೇಗ ಹರಡುವ ಕಾಯಿಲೆಯಾಗಿದ್ದು, ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತ ಕೆಮ್ಮು, ಜ್ವರ ಸಂಜೆ ವೇಳೆ ಹೆಚ್ಚಳ, ತೂಕ ಕಡಿಮೆಯಾಗುವುದು ಪ್ರಮುಖ ಲಕ್ಷಣವಾಗಿದ್ದು, ವೈದ್ಯರು ಹೇಳುವವರೆಗೆ ನಿರಂತರ ಚಿಕಿತ್ಸೆಯಿಂದ ಮಾತ್ರ ಕ್ಷಯ ರೋಗ ಸಂಪರ‍್ಣ ಗುಣಮುಖವಾಗಲು ಸಾಧ್ಯ.

ಟಿಬಿಯು ಶ್ವಾಸಕೋಶಗಳಿಗಷ್ಟೇ ಅಲ್ಲದೇ ದೇಹದ ಇನ್ನಿತರ ಭಾಗಗಳಿಗೂ ಹರಡಬಹುದು. ರೋಗ ನಿರ್ಣಯಿಸಿದ ಎಲ್ಲಾ ಪ್ರಕರಣಗಳಿಗೆ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಕಫವನ್ನು ಪರೀಕ್ಷಿಸಿಕೊಳ್ಳಬೇಕಿದೆ.

ದೇಶವನ್ನು ಕ್ಷಯ ಮುಕ್ತವನ್ನಾಗಿಸಲು ಸಮುದಾಯದ ಸಹಕಾರದೊಂದಿಗೆ ಟಿ.ಬಿ ಚಾಂಪಿಯನ್ಗಳ ಸಹಕಾರ ಸಹ ಅಗತ್ಯವಾಗಿದೆ.

ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಲ್ಲಿ, ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ, ಸಮುದಾಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಜರಾಗಿ ಜಾಗೃತಿ ಮೂಡಿಸುವುದು ಟಿ.ಬಿ ಬಗ್ಗೆ ಅರಿವು ಮೂಡಿಸುವುದು ಟಿಬಿ ಬಗ್ಗೆ ಇರುವಂತಹ ಕಳಂಕ ತಾರತಮ್ಯವನ್ನು ಹೋಗಲಾಡಿಸಿ ಕ್ಷಯ ಮುಕ್ತ ಭಾರತವನ್ನು ಮಾಡಲು ಕೈಜೋಡಿಸುವುದು. ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಮಾಡುವಂತೆ ಮನವರಿಕೆ ಮಾಡುವುದು. ಆಯ್ದ ಚಾಂಪಿಯನ್ ಆಯ್ಕೆ ಮಾಡಿ ತರಬೇತಿಯನ್ನು ನೀಡುವುದು ತರಬೇತಿ ಪಡೆದ ಟಿಬಿ ಚಾಂಪಿಯನ್ ಮುಂದಿನ ದಿನಗಳಲ್ಲಿ ಬರುವ ಹೊಸ ಟಿಬಿ ರೋಗಿಗಳಿಗೆ ಮನೋಸ್ಥರ‍್ಯ ನೀಡಿ ಚಿಕಿತ್ಸೆ ಪರ‍್ಣವಾಗಿ ಪಡೆಯಲು ಮನವೊಲಿಸುವುದು ಕರ‍್ಯಕ್ರಮದ ಧ್ಯೇಯವಾಗಿದೆ ಎಂದರು.

ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ.ನಾಗೇಶ್ ಮಾತನಾಡಿ, ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಚಿಕಿತ್ಸೆಯನ್ನು ಪಡೆದು ಟಿಬಿ ಯಿಂದ ಗುಣಮುಖರಾಗಿರುವ ವ್ಯಕ್ತಿಗಳು ಟಿಬಿ ಚಾಂಪಿಯನ್ಗಳಾಗಿ ತರಬೇತಿ ನೀಡುತ್ತಿದ್ದಾರೆ. ಒಂದು ವೇಳೆ ಚಿಕಿತ್ಸೆ ಪ್ರಾರಂಭಿಸಿದ ನಂತರ ರೋಗಿಯು ರ‍್ಧದಲ್ಲಿ ಚಿಕಿತ್ಸೆ ಬಿಟ್ಟರೆ ಆತನಿಗೆ ತನ್ನ ಚಿಕಿತ್ಸೆ ಯ ಅನುಭವಗಳು ಮತ್ತು ಉದಾಹರಣೆಗಳನ್ನು ನೀಡುವುದರ ಮೂಲಕ ಚಿಕಿತ್ಸೆಯನ್ನು ಮುಂದುವರಿಸಲು ಆಪ್ತ ಸಮಾಲೋಚನೆ ಮಾಡಲಾಗುವುದು ಎಂದರು.

ಟಿ.ಬಿ ಗೆದ್ದ ವ್ಯಕ್ತಿಗಳಿಂದ ಟಿಬಿ ಚಾಂಪಿಯನ್ಗಳಾಗಿ ಪರಿವರ್ತಿಸಿದವರ ಸಮ್ಮುಖದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಆಚರಿಸಿದ್ದು ವಿಶೇಷವಾಗಿತ್ತು.

ಕಾರ‍್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾರದಾ ನಾಗನಾಥ್, ಸೇರಿದಂತೆ ಜಿಲ್ಲಾ ಕ್ಷಯ ರೋಗ ನಿರಂತರ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]