H.D.Kumaraswamy response on Operation Sindoor

ಜೆಡಿಎಸ್, ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದು ಸತ್ಯಕ್ಕೆ ದೂರ: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್; ಜೆಡಿಎಸ್ (JDS) – ಬಿಜೆಪಿ (BJP) ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರಿಗೆ ಚೆಕ್ ಮೆಟ್ ಇಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ‌.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ. ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.

ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದಿರುವ ಅವರು, ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!