Mass border program today..

ಇಂದು ಸಾಮೂಹಿಕ ಸೀಮಂತ ಕಾರ್ಯಕ್ರಮ..

ಬೆಳಗಾವಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ಇಂದು ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ಜೊತೆಗೆ ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಹಾಗೂ ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಾಗುವುದು ಎಂದರು.

3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ಹೇಳಿದರು.

ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್ .ಆರ್.ಎಲ್.ಎಮ್ ಆಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗ್‌ಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿ ಹೆಣ್ಣು ಮಗುವಿನ ಹೆಸರಿನಲ್ಲಿ ಗಿಡವನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ ಮೂರು ಸಾವಿರ ಗರ್ಭಿಣಿಯರಿಗೆ ಸಾಮೂಹಿಕವಾಗಿ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದ್ದು, ಮೊದಲ ಯತ್ನವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಶುರು ಮಾಡಲಾಗುತ್ತಿದೆ. ಸೀಮಂತ ಕಾರ್ಯಕ್ರಮಕ್ಕೆ ಆಗಮಿಸುವ ಗರ್ಭಿಣಿಯರ ಸಂಪೂರ್ಣ ಆರೈಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು ನೋಡಿಕೊಳ್ಳುತ್ತಾರೆ ಎಂದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!