Milk price increase.. Cmsiddaramaiah did not yield to the pressure of the union

ಹಾಲಿನ ದರ ಏರಿಕೆ.. ಒಕ್ಕೂಟದ ಒತ್ತಡಕ್ಕೆ ಮಣಿಯದ ಸಿಎಂ ಸಿದ್ದರಾಮಯ್ಯ.. ತೀಕ್ಷ್ಣ ಉತ್ತರ

ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಖಡಕ್ ಆಗಿ ಹೇಳಿದ್ದಾರೆ‌.

ಇಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಇಂದು ನಡೆಸಿದ ಸಭೆಯಲ್ಲಿ ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿದರು.

ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಸಿಎಂ ಬದ್ದರಾದರು. ಅಲ್ಲದೆ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನಕ್ಕೆ ಬರಲಾಯಿತು

ಪ್ರಮುಖವಾಗಿ ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದರು‌

ಅಲ್ಲದೆ ,ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು, ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.

ಇದೇ ಸಂದರ್ಭದಲ್ಲಿ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳಿಂದ ಮನವಿ ಮಾಡಲಾಯಿತು. ಆದರೆ ಸಿಎಂ ಇದಕ್ಕೆ ಒಪ್ಪಲಿಲ್ಲ.

ರಾಜಕೀಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118221"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!