Distribution of 2500 plots in April: Minister KH Muniappa

ಏಪ್ರಿಲ್ ನಲ್ಲಿ 2500 ನಿವೇಶನ ವಿತರಣೆ: ಸಚಿವ ಕೆಹೆಚ್ ಮುನಿಯಪ್ಪ

ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಅವರು ಹೇಳಿದರು.

ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ ಸಚಿವರು ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು ಕಾರಣಾಂತರಗಳಿಂದ ಮುಂದಿಡಲಾಗಿದ್ದು ಏಪ್ರಿಲ್ ಮಾಹೆಯಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.

ಪ್ರತಿ ಗ್ರಾಮಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.

ಮಕ್ಕಳ ಪೋಷಣೆ, ಪಾಲನೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಅಹಾರವನ್ನು ಅಂಗನವಾಡಿ ಮುಖಾಂತರ ಕ್ರಮಬದ್ದವಾಗಿ ವಿತರಿಸಬೇಕು. ಇಲ್ಲವಾದಲ್ಲಿ ಅಪೌಷ್ಟಿಕ ಮಕ್ಕಳ ಜನನವಾಗಿ ಸಮಾಜಕ್ಕೆ, ಕುಟಂಬಕ್ಕೂ ಹೊರೆಯಾಗಲಿದ್ದಾರೆ. ಹಾಗಾಗಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪಗಳು ಉಂಟಾಗದೇ ಅಹಾರ ವಿತರಿಸುವ ಮೂಲಕ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಕನ್ನಮಂಗಲ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಇತರ ಪಂಚಾಯತಿಗಳಿಗೆ ಮಾದರಿ ಪಂಚಾಯತಿ ಯಾಗಲಿ ಎಂದು ಸಚಿವರು ಆಶಿಸಿದರು.

ಪಿಡಿಒ ಶ್ರೀನಿವಾಸ್ ಅವರು ಪರಿಸರದ ಕಾಳಜಿ, ನೀರಿನ ಮೌಲ್ಯ, ಸ್ವಚ್ಛತೆ ನೈರ್ಮಲ್ಯದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಸಭೆಯಲ್ಲಿ ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ವನಜಾಕ್ಷಿಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಿ.ಡಿ.ಒ ಶ್ರೀನಿವಾಸ್, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!