ಬೆಂಗಳೂರು: ಅಂತೂ ಇಂತೂ ಬಿಜೆಪಿ (BJP) ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿನ ಹಾದಿ ಬೀದಿ ರಂಪಾಟವನ್ನು ಸರಿ ದಾರಿಗೆ ತರಲು ಮುಂದಾಗಿರುವ ಸೂಚನೆ ಕಂಡುಬಂದಿದೆ.
ಬಿಜೆಪಿಯಲ್ಲಿನ (BJP) ಆಂತರಿಕ ಬೆಳವಣಿಗೆಗಳ ಬಗ್ಗೆ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಮಾಜಿ ಸಚಿವರು, ಮೂವರು ಹಾಲಿ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Bsana Gouda Patila Yatnal) ಬಣದ ಮುಖಂಡರಿಗೂ ನೋಟಿಸ್‌ನ ಬಿಸಿ ತಟ್ಟಿದೆ.
ಅಲ್ಲದೆ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಹಾಲಿ ಶಾಸಕರಾದ ಬಿ.ಪಿ.ಹರೀಶ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್‌ಗೆ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಮಂಗಳವಾರ ಶೋಕಾಸ್ ನೋಟಿಸ್ ನೀಡಿದ್ದಾರೆ.