Karnataka's Exports: Debate to Increase to 100 Billion; MB Patila

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಬೆಂಗಳೂರು: ಕರ್ನಾಟಕವನ್ನು ತಯಾರಿಕಾ ವಲಯದ ಆಡುಂಬೊಲವನ್ನಾಗಿ ಮಾಡುವ ನಿಟ್ಟಿನಲ್ಲಿ ಏಪ್ರಿಲ್ ತಿಂಗಳ ಕೊನೆಯಲ್ಲಿ ನಡೆಸಲು ಉದ್ದೇಶಿಸಿರುವ ಎರಡು ದಿನಗಳ `ಉತ್ಪಾದನಾ ಮಂಥನ;’ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patila) ಮಂಗಳವಾರ ಖನಿಜ ಭವನದಲ್ಲಿ ಗಣ್ಯ ಉದ್ಯಮಿಗಳು ಹಾಗೂ ಅಧಿಕಾರಿಳೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, `ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ.

ಇದಕ್ಕಾಗಿ ರಾಜ್ಯ ಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಆಗಬೇಕಾಗಿರುವ ಕೆಲಸಗಳೇನೇನು ಮತ್ತು ಕೇಂದ್ರ ಸರಕಾರದ ಮಟ್ಟದಲ್ಲಿ ಆಗಬೇಕಿರುವ ಬದಲಾವಣೆಗಳೇನು ಎನ್ನುವುದನ್ನು ಕುರಿತು ಚರ್ಚಿಸಲಾಯಿತು. ಕೆಲವೇ ದಿನಗಳಲ್ಲಿ ಮತ್ತೊಂದು ಸಭೆ ನಡೆಸಲಾಗುವುದು’ ಎಂದಿದ್ದಾರೆ.

ರಾಜ್ಯದ ಕೈಗಾರಿಕಾ ವಲಯವು ಮುಖ್ಯವಾಗಿ ಸೇವಾಧಾರಿತ ಚಟುವಟಿಕೆಗಳನ್ನು ಹೊಂದಿದೆ. ಇದರ ಜೊತೆಯಲ್ಲೇ ನಾವು ಸ್ಥಳೀಯವಾಗಿಯೇ ಉತ್ಪನ್ನಗಳ ತಯಾರಿಕೆಗೂ ಆದ್ಯತೆ ಕೊಡಬೇಕು.

ರಾಜ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ನವೋದ್ಯಮಗಳಿದ್ದು, ಅವುಗಳಲ್ಲಿ ಎಷ್ಟೋ ಕಂಪನಿಗಳು 250 ಕೋಟಿ ರೂ. ತನಕ ವಹಿವಾಟು ನಡೆಸುತ್ತಿವೆ. ಇವುಗಳನ್ನು ಕೂಡ ಉತ್ಪಾದನಾ ಮಂಥನದ ಭಾಗವನ್ನಾಗಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ, ನೆರೆಹೊರೆಯ ರಾಜ್ಯಗಳಲ್ಲೂ ಉತ್ಪಾದನಾ ವಲಯಗಳಲ್ಲಿ ನೂರಾರು ಕಂಪನಿಗಳು ಸಕ್ರಿಯವಾಗಿವೆ. ಅವುಗಳನ್ನು ಕೂಡ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.

ಮಂಥನದಲ್ಲಿ ಪಾಲ್ಗೊಳ್ಳಲಿರುವ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂದು ಗಂಭೀರವಾಗಿ ಚಿಂತಿಸಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.

ರಾಜ್ಯದಲ್ಲಿ ಹಲವು ಬಗೆಯ ತಯಾರಿಕಾ ಕಂಪನಿಗಳು ಚದುರಿದಂತೆ ಇವೆ. ಆದ್ದರಿಂದ ಹಳೆ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗಗಳಲ್ಲಿ ಏನೇನು ಉಪಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತಿಸಲಾಗುತ್ತಿದೆ.

ಇದನ್ನು ಕಾರ್ಯರೂಪಕ್ಕೆ ತರಲು ನಿರ್ದಿಷ್ಟ ಕಾರ್ಯತಂತ್ರಗಳ ಅವಶ್ಯಕತೆ ಇರುವುದನ್ನು ಮನಗಾಣಲಾಗಿದೆ. ಈ ನಿಟ್ಟಿನಲ್ಲಿ ಪರಿಣತ ಉದ್ಯಮಿಗಳ ಸಲಹೆ ಮತ್ತು ಮಾರ್ಗದರ್ಶನಗಳನ್ನು ಸರಕಾರ ಪಡೆದುಕೊಳ್ಳಲಿದೆ ಎಂದು ಪಾಟೀಲ ಹೇಳಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಏಕಸ್ ಕಂಪನಿಯ ಅಧ್ಯಕ್ಷ ಅರವಿಂದ ಮೆಳ್ಳಿಗೇರಿ, `ರಾಜ್ಯದಲ್ಲಿನ ತಯಾರಿಕಾ ವಲಯವು ಗಣನೀಯ ಪ್ರಮಾಣದಲ್ಲಿ ಸುಧಾರಿಸಬೇಕಾಗಿದೆ.

ನಿದರ್ಶನಕ್ಕೆ ಹೇಳುವುದಾದರೆ, ಉಕ್ಕು ತಯಾರಿಕೆಯಲ್ಲಿ ನಾವು ಮುಂಚೂಣಿಯಲ್ಲಿದ್ದರೂ ವೈಮಾನಿಕ ಎಂಜಿನ್ ತಯಾರಿಸುವಂತಹ ಉತ್ಕೃಷ್ಟ ಗುಣಮಟ್ಟ ನಮ್ಮಲ್ಲಿಲ್ಲ. ಹೀಗಾಗಿ ನಾವು ಇಂಥದ್ದಕ್ಕೆಲ್ಲ ಬೇರೆ ದೇಶಗಳನ್ನೇ ಅವಲಂಬಿಸಬೇಕಾಗಿದೆ.

ಪಾಶ್ಚಾತ್ಯ ದೇಶಗಳಲ್ಲಿ ಇರುವ ಗುಣಮಟ್ಟ ನಮಗೊಂದು ಮಾದರಿಯಾಗಬೇಕು’ ಎಂದು ಸಲಹೆ ನೀಡಿದ್ದಾರೆ.

ವರ್ಚುಯಲ್ ಆಗಿ ಪಾಲ್ಗೊಂಡಿದ್ದ ಉದ್ಯಮಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಮುಂದುವರಿದ ದೇಶಗಳಲ್ಲಿರುವ ಕೈಗಾರಿಕಾ ವಲಯದ ಚಿತ್ರಣವನ್ನು ವಿವರಿಸಿದರು. ಉತ್ಪಾದನಾ ಮಂಥನದಲ್ಲಿ ಶೇ 25ರಿಂದ 30ರಷ್ಟು ಉದ್ಯಮಗಳು ನವೋದ್ಯಮ ವಲಯದಿಂದ ಬರುವ ಹಾಗೆ ಮಾಡಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ತಾಂತ್ರಿಕ ನಿರ್ದೇಶಕ ರಮೇಶ ಉಪಸ್ಥಿತರಿದ್ದರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!