Rajanna U turn

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ ಹೇಳಿಕೆ ಸಂದರ್ಭದಲ್ಲಿ ತಾವು ಮಾಡಿದ್ದ ಹಲವು ಗಂಭೀರ ಆರೋಪಗಳ ಕುರಿತು ದೂರು ನೀಡುವುದಾಗಿ ಅಬ್ಬರಿಸಿದ್ದ ಸಚಿವ ಕೆ.ಎನ್.ರಾಜಣ್ಣ (KN Rajanna) ಪಕ್ಕಾ ಯೂ ಟರ್ನ್ ತೆಗೆದುಕೊಂಡಿದ್ದಾರೆ.

ಮಂಗಳವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ದೂರಿನ ಬದಲಿಗೆ ಕೇವಲ ಮನವಿ ಮಾಡುವ ಮೂಲಕ ಹಾವು ಬಿಡ್ತಿನಿ ಅಂತ ಹೇಳಿದ್ದವರು ಕೇವಲ ಹಾವ್ರಾಣಿ ಬಿಟ್ಟಿದ್ದಾರೆ.

ತಮ್ಮ ವಿರುದ್ಧದ ಹನಿಟ್ರ್ಯಾಪ್ ಯತ್ನದ ಕುರಿತು ಸದನದಲ್ಲಿ ವಿವರಣೆ ನೀಡುವ ವೇಳೆ ಕೆ.ಎನ್.ರಾಜಣ್ಣ ಅವರು, ಎಲ್ಲಾ ಪಕ್ಷಗಳಿಗೆ ಸೇರಿದ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕ ರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಲಾಗಿದೆ.

ಇಂತಹ 48 ನಾಯಕರ ಸೀಡಿ, ಪೆನ್‌ಡ್ರೈವ್ ಗಳಿವೆ. ರಾಜಕೀಯ ನಾಯಕರು ಮಾತ್ರವಲ್ಲ, ನ್ಯಾಯಾಧೀಶರು ಹನಿಟ್ರ್ಯಾಪ್‌ಗೆ ಒಳಗಾಗಿ ದ್ದಾರೆ ಎಂಬ ಅಬ್ಬರದ ಆರೋಪ ಮಾಡಿದ್ದರು.. ಅಲ್ಲದೆ, ತಮ್ಮನ್ನು ಹನಿಟ್ರ್ಯಾಪ್‌ಗೆ ಒಳಪಡಿಸುವ ಪ್ರಯತ್ನ ನಡೆದಿದ್ದು,ಈಬಗ್ಗೆ ಸಾಕ್ಷಿಯಿದೆ. ದಾಖಲೆ ಸಹಿತ ಈ ಬಗ್ಗೆ ದೂರು ನೀಡಲಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.

ಈ ತನಿಖೆಯು ನ್ಯಾಯಸಮ್ಮತವಾಗಿ ನಡೆಸುವ ಮೂಲಕ ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಮಾಡಬೇಕು ಎಂದು ಆಗ್ರಹಿಸಿದ್ದರು.

ಆದರೆ, ಇದೀಗ ಪೊಲೀಸ್ ದೂರು ನೀಡುವ ತಮ್ಮ ನಿಲುವಿನಿಂದ ಹಿಂದೆ ಸರಿದಿರುವ ಕೆ.ಎನ್.ರಾಜಣ್ಣ ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಮಾತ್ರ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಈ ಮನವಿ ಪತ್ರದಲ್ಲಿ 48 ನಾಯಕರ ಸೀಡಿ ವಿಚಾರ, ನ್ಯಾಯಾಧೀಶರ ವಿಚಾರ ಸೇರಿ ತಾವು ಮಾಡಿದ್ದ ಗಂಭೀರ ಆರೋಪಗಳ ಬಗ್ಗೆ ಉಲ್ಲೇಖವನ್ನೇ ಮಾಡಿಲ್ಲವಂತೆ. ಅಷ್ಟೇ ಅಲ್ಲದೆ ಈ ಮೊದಲು ನ್ಯಾಯಾಂಗ ತನಿಖೆಯ ಆಗ್ರಹ ಮಾಡಿದ್ದ ಅವರು ಮನವಿಯಲ್ಲಿ ಹನಿಟ್ರ್ಯಾಪ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದಷ್ಟೇ ಕೋರಿದ್ದಾರೆ.

ಸಾಕ್ಷಿ ಇಲ್ಲ

ತಮ್ಮ ವಿರುದ್ದದ ಹನಿಟ್ರ್ಯಾಪ್ ಯತ್ನದ ಕುರಿತು ಸಾಕ್ಷಿಗಳಿವೆ ಎಂದು ಸದನದಲ್ಲಿ ಸಚಿವ ರಾಜಣ್ಣ ತಿಳಿಸಿದ್ದರು. ಅವೆಲ್ಲವನ್ನೂ ಗೃಹ ಸಚಿವರಿಗೆ ನೀಡುತ್ತೇನೆ ಎಂದು ಹೇಳಿದ್ದರು. ಆದರೆ, ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ, ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ.

ಹೀಗಾಗಿ ವಿಡಿಯೋ ಇಲ್ಲ. ಯಾರು ಬಂದು ಹೋಗುತ್ತಾರೆ ಎಂಬುದನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ನನಗೆ ಫೋಟೋ ತೋರಿಸಿದರೆ ಹನಿಟ್ರ್ಯಾಪ್ ಮಾಡಲು ಯತ್ನಿಸಿದವರನ್ನು ಪತ್ತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜಣ್ಣ ಹೇಳಿಕೆ ಆರಂಭದಿಂದಲೂ ಹಲವು ಅನುಮಾನಗಳು ಸ್ವಪಕ್ಷಿಯರಲ್ಲಿಯೇ ಇತ್ತು ‌ ಏಕೆಂದರೆ ಅಂದು ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಪತ್ರ ಕಳುಹಿಸಿ ಹನಿ ಟ್ರಾಪ್ ಮಾಡುವಂತೆ ಆಡಳಿತ ಪಕ್ಷದ ಸಚಿವರೆ ಪುಸಲಾಯಿಸಿದ್ದರು. ಬಳಿಕ ರಾಜಣ್ಣ ಈ ರೀತಿ ಗಂಭೀರ ಆರೋಪ ಮಾಡಿದ್ದರು. ಆದರೆ ಈಗ ಎಲ್ಲವೂ ಟುಸ್ ಪಠಾಕಿ ಆದಂತೆ ಕಾಣುತ್ತಿದೆ.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!