ದೊಡ್ಡಬಳ್ಳಾಪುರ (Doddaballapura): ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದು ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.64ಲಕ್ಷ ಹಣ ಸಂಗ್ರಹವಾಗಿದೆ.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಗುರುವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 64,51,009ರೂ. ಮೊತ್ತ ಸಂಗ್ರಹವಾಗಿದೆ.
ಇದರೊಂದಿಗೆ 77500 ರೂ ಮೌಲ್ಯದ 01 ಕೆಜಿ 560 ಗ್ರಾಂ ಬೆಳ್ಳಿ, 44100 ರೂ ಮೌಲ್ಯದ 07 ಗ್ರಾಂ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಈ ವೇಳೆ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಪ್ರಧಾನ ಅರ್ಚಕ ಆರ್. ಸುಬ್ರಹ್ಮಣ್ಯ, ದೇವಾಲಯದ ನಂಜಪ್ಪ, ದೇವಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆ, ಕೆನರಾ ಬ್ಯಾಂಕ್ ಸಿಬ್ಬಂದಿ ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಏಣಿಕೆ ಮಾಡಲಾಯಿತು.